ಬೆಂಗಳೂರು: ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯರಿಂದ ಅಪಮಾನಕ್ಕೆ ಒಳಗಾಗಿದ್ದ ಧಾರವಾಡ ಎಎಸ್ಪಿ ನಾರಾಯಣ ಬರಮಣ್ಣಿ ಅವರ ಸ್ವಯಂ ನಿವೃತ್ತಿ ವಿಚಾರದಲ್ಲಿ ಸರ್ಕಾರ ಮತ್ತೊಂದು ಯಡವಟ್ಟು ನಡೆ ಪ್ರದರ್ಶಿಸಿದೆ.ಗೃಹಇಲಾಖೆಯಿಂದ ಸ್ವಯಂ ನಿವೃತ್ತಿ ಅಂಗೀಕಾರಕ್ಕೆ ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ. ಜುಲೈ 6ಕ್ಕೆ ಡೆಡ್ಲೈನ್ಫಿಕ್ಸ್ ಮಾಡಿದ್ದು, ಅಷ್ಟರೊಳಗೆ ವಿಆರ್ಎಸ್ ಪತ್ರ ವಾಪಸ್ ಪಡೆಯದೇ ಇದ್ದರೆ ಸ್ವಯಂ ನಿವೃತ್ತಿ ಅಂಗೀಕರಿಸುವಂತೆ ಸೂಚನೆ ನೀಡಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಏನಿದು ಪ್ರಕರಣ?
ಕಾರ್ಯಕ್ರಮವೊಂದರಲ್ಲಿ ವೇದಿಕೆ ಮೇಲೆಯೇ ಸಿಎಂ ಸಿದ್ದರಾಮಯ್ಯ ಅವರಿಂದ ಅಧಿಕಾರಿ ಅಪಮಾನಕ್ಕೆ ಒಳಗಾಗಿದ್ದರು. ಬೆಳಗಾವಿ ಸಮಾರಂಭದಲ್ಲಿ ಬಿಜೆಪಿ ಕಾರ್ಯಕರ್ತರು ಏಕಾಏಕಿ ಕಪ್ಪು ಬಾವುಟ ತೋರಿಸಿ ಪ್ರತಿಭಟನೆಗೆ ಮುಂದಾಗಿದ್ದರಿಂದ ಆಕ್ರೋಶಗೊಂಡ ಸಿಎಂ, ಎಎಎಸ್ಪಿ ನಾರಾಯಣ ಅವ್ರ ಮೇಲೆ ಮೇಲೆ ಕಪಾಳಮೋಕ್ಷಕ್ಕೆ ಮುಂದಾಗಿದ್ದರು. ಈ ಸನ್ನಿವೇಶದಿಂದ ಅಧಿಕಾರಿ ನೊಂದುಕೊಂಡಿದ್ದರು. ಅದೇ ಕಾರಣಕ್ಕೆ ಈ ನಿರ್ಧಾರ ಕೈಗೊಂಡಿದ್ದಾರೆಯೇ ಎಂಬ ಪ್ರಶ್ನೆ ಹುಟ್ಟು ಹಾಕಿದೆ.ಸ್ವಯಂಪ್ರೇರಿತ ನಿವೃತ್ತಿಗೆ ನಾರಾಯಣ ಅವರು ಅರ್ಜಿ ಸಲ್ಲಿಸಿದ್ದಾರೆ. ತಮಗಾದ ಅವಮಾನಕ್ಕೆ ಬರಮಣ್ಣ ಅವರು ನೊಂದುಕೊಂಡಿದ್ದರು. ಹೀಗಾಗಿ, ಕೆಲಸದಿಂದಲೇ ಸ್ವಯಂ ನಿವೃತ್ತಿಗೆ ಮುಂದಾಗಿದ್ದಾರೆ ಎಂದು ಹೇಳಾಗಲಾಗುತ್ತಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



