ಬೆಂಗಳೂರು: ಸಾರಿಗೆ ನೌಕರರ ನ್ಯಾಯಯುತ ಬೇಡಿಕೆಯ ಹೋರಾಟಕ್ಕೆ ಬಿಜೆಪಿ ನೈತಿಕ ಬೆಂಬಲ ನೀಡಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.ಗ್ಯಾರಂಟಿ ಯೋಜನೆ ನಿರ್ವ ಹಿಸಲು ಸಾಧ್ಯವಾಗದೆ ಹೆಣಗಾಡುತ್ತಿರುವ ಕಾಂಗ್ರೆಸ್ ಸರ್ಕಾರ, ಸೇವೆ ಮತ್ತು ಬದ್ಧತೆಗೆ ಹೆಸರಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯನ್ನು ಬಡವಾಗಿ ಸಿದೆ. ಸಂಸ್ಥೆಯ ನೌಕರರ ಹಿತಾಸಕ್ತಿಯನ್ನು ಕಡೆಗಣಿಸಿದೆ ಎಂದು ಕಿಡಿಕಾರಿದ್ದಾರೆ.
ಸಾರಿಗೆ ನಿಗಮಗಳ ನೌಕರರು ಸಂಕಷ್ಟಗಳ ನಡುವೆ ತಮ್ಮ ಸೇವಾನಿಷ್ಠೆಯನ್ನು ಸಂಯಮದಿಂದ ಮುಂದುವರೆಸಿಕೊಂಡು ಬಂದಿದ್ದರೂ ಅವರ ನ್ಯಾಯಯುತವಾದ ಬೇಡಿಕೆಗಳನ್ನು ಈಡೇರಿಸಬೇಕಾದ ಸರ್ಕಾರ ವೇತನ ಪರಿಷ್ಕರಣೆ ಮಾಡದೆ, ಬರೋಬ್ಬರಿ 38 ತಿಂಗಳ ಬಾಕಿ ವೇತನವನ್ನೂ ಬಿಡುಗಡೆ ಮಾಡಿಲ್ಲವೆಂದರೆ ಸಂಬಳವನ್ನೇ ನಂಬಿ ಕುಟುಂಬ ನಿರ್ವಹಣೆ ಮಾಡುತ್ತಿರುವ ಸಿಬ್ಬಂದಿಗಳ ಸ್ಥಿತಿ ಹೇಳತೀರದಾಗಿದೆ ಎಂದು ಹೇಳಿದ್ದಾರೆ.ನೌಕರರ ಪರಿಶ್ರಮಕ್ಕೆ ತಕ್ಕ ಪ್ರತಿಫಲ ನೀಡದೇ ನೌಕರರ ಹಿತಾಸಕ್ತಿಯನ್ನು ತಾತ್ಸಾರ ದಿಂದ ನೋಡುತ್ತಿರುವ ರಾಜ್ಯ ಸರ್ಕಾರ ಈ ಕೂಡಲೇ ಸಾರಿಗೆ ನೌಕರರ ಬೇಡಿಕೆಯನ್ನು ಈಡೇರಿಸಬೇಕು ಎಂದು ಆಗ್ರಹಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



