ಶಿವಮೊಗ್ಗ: ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಜನರೇಟರ್ (Generator) ಸ್ಫೋಟಗೊಂಡು ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಸಾಗರ (Sagar) ತಾಲೂಕಿನ ಡಿಗಟೆಕೊಪ್ಪ ಗ್ರಾಮದಲ್ಲಿ ನಡೆದಿದೆ.ಗಾಯಗೊಂಡ ಯುವಕ ಲೋಕೇಶ್ಗೆ ಸಾಗರದ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ (Shivamogga) ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಸ್ತಿಕಂಬ ಗಣೇಶೋತ್ಸವ ಸಮಿತಿಯ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಈ ಅವಘಡ ಸಂಭವಿಸಿದೆ.ಯುವಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ. ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







