ಬೆಂಗಳೂರು: ನಟ, ನಿರ್ದೇಶಕ ರಿಷಬ್ ಶೆಟ್ಟಿ ಕುಂದಾಪುರದಲ್ಲಿ ‘ಕಾಂತಾರ 1’ ಚಿತ್ರತಂಡದ ಜೊತೆ ತಮ್ಮ 42ನೇ ಹುಟ್ಟುಹಬ್ಬ ಅದ್ದೂರಿಯಾಗಿ ಆಚರಿಸಿಕೊಂಡಿದ್ದಾರೆ. ನಿರ್ಮಾಪಕ ವಿಜಯ್ ಕಿರಗಂದೂರು ಸೇರಿ ಚಿತ್ರದ ತಂತ್ರಜ್ಞರು, ಕಲಾವಿದರು ಪಾಲ್ಗೊಂಡು ಶುಭಾಶಯ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ರಿಷಬ್ ಶೆಟ್ಟಿ ಅವರ ಪತ್ನಿ ಪ್ರಗತಿ ಶೆಟ್ಟಿ ಕೂಡ ಹಾಜರಿದ್ದರು.
ಹುಟ್ಟುಹಬ್ಬದ ಅಂಗವಾಗಿ ‘ಕಾಂತಾರ 1’ ಚಿತ್ರದ ವಿಶೇಷ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ನಿಗದಿ ಆಗಿರುವಂತೆ ಅ.2ರಂದು ಸಿನಿಮಾ ವಿಶ್ವದಾದ್ಯಂತ ಬಹು ಭಾಷೆಯಲ್ಲಿ ತೆರೆಗೆ ಬರಲಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಭಾಷೆಯ ಶೀರ್ಷಿಕೆಯೊಂದಿಗೆ ಬಿಡುಗಡೆ ಆಗಿರುವ ಪೋಸ್ಟರ್ಗೆ ಸಾಕಷ್ಟು ದೊಡ್ಡ ಮಟ್ಟದಲ್ಲಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಕುಂದಾಪುರದ ಬಳಿ ಸುಮಾರು 25 ಎಕರೆ ಪ್ರದೇಶದಲ್ಲಿ ಸೆಟ್ ನಿರ್ಮಿ ಸಲಾಗಿದೆ.ಬಹುತೇಕ ಚಿತ್ರೀಕರಣ ಮುಗಿದಿದೆ ಎನ್ನಲಾಗಿದೆ. 50 ದಿನದಿಂದ 500ಕ್ಕೂ ಹೆಚ್ಚು ತರಬೇತಿದಾರರು, 3000ಕ್ಕೂ ಹೆಚ್ಚು ಕಲಾವಿದರು ಚಿತ್ರೀಕರಣದಲ್ಲಿ ಭಾಗವಹಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಇನ್ನು ಅಕ್ಟೋಬರ್ 2ರಂದು ವಿವಿಧ ಭಾಷೆಗಳಲ್ಲಿ ವಿಶ್ವಾದ್ಯಂತ ಚಿತ್ರ ಬಿಡುಗಡೆ ಆಗಲಿದೆ.: ನಟ, ನಿರ್ದೇಶಕ ರಿಷಬ್ ಶೆಟ್ಟಿ ಕುಂದಾಪುರದಲ್ಲಿ ‘ಕಾಂತಾರ 1’ ಚಿತ್ರತಂಡದ ಜೊತೆ ತಮ್ಮ 42ನೇ ಹುಟ್ಟುಹಬ್ಬ ಅದ್ದೂರಿಯಾಗಿ ಆಚರಿಸಿಕೊಂಡಿದ್ದಾರೆ. ನಿರ್ಮಾಪಕ ವಿಜಯ್ ಕಿರಗಂದೂರು ಸೇರಿ ಚಿತ್ರದ ತಂತ್ರಜ್ಞರು, ಕಲಾವಿದರು ಪಾಲ್ಗೊಂಡು ಶುಭಾಶಯ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ರಿಷಬ್ ಶೆಟ್ಟಿ ಅವರ ಪತ್ನಿ ಪ್ರಗತಿ ಶೆಟ್ಟಿ ಕೂಡ ಹಾಜರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



