ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಮಂಗಳವಾರ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ದಲಿತ ಸಮುದಾಯಕ್ಕೆ ಒಳ ಮೀಸಲಾತಿ ಬಹುತೇಕ ಅಂತಿಮವಾಗಿದೆ. ಎಲ್ಲಾ ಪರಿಶಿಷ್ಟ ಜಾತಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ವೈಜ್ಞಾನಿಕವಾಗಿ ಒಳ ಮೀಸಲಾತಿಯನ್ನು ಜಾರಿಗೊಳಿಸುವ ತೀರ್ಮಾನವಾಗಿದ್ದು ಇಂದು ಸದನದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಿಸಲಿದ್ದಾರೆ.ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿಯಲ್ಲಿ 5 ವಿಂಗಡಣೆ ಮಾಡಲಾಗಿತ್ತು. ಆದರೆ ಸರ್ಕಾರ ಇದನ್ನು 3 ಗುಂಪುಗಳಾಗಿ ವರ್ಗೀಕರಣ ಮಾಡಿದೆ. ಅದರಂತೆ 18 ಜಾತಿಗಳಿರುವ ಎಡಗೈ ಸಮುದಾಯಕ್ಕೆ ಶೇಕಡ 6ರಷ್ಟು ಮೀಸಲಾತಿ ಹಾಗೂ 20 ಜಾತಿಗಳಿರುವ ಬಲಗೈ ಸಮುದಾಯಕ್ಕೆ ಶೇಕಡ 6ರಷ್ಟು ಮೀಸಲಾತಿ. ಇನ್ನು 63 ಜಾತಿಗಳಿರುವ ಇತರ ಸಮುದಾಯಕ್ಕೆ ಶೇಕಡ 5ರಷ್ಟು ಮೀಸಲಾತಿ ನೀಡುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಬಹುತೇಕ ಅಂತಿಮವಾಗಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







