ಚಳ್ಳಕೆರೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಶಾಸಕ ನೇರಲಗುಂಟೆ ತಿಪ್ಪೇಸ್ವಾಮಿ ವಾಗ್ದಾಳಿ ನಡೆಸಿದರು. ಚಳ್ಳಕೆರೆ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಸಿದ್ದರಾಮಯ್ಯ ಸರ್ಕಾರದಲ್ಲಿ ಖಜಾನೆ ಖಾಲಿ ಆಗಿದ್ದರು ಸಹ ಮೈಸೂರಿನಲ್ಲಿ ಸಾಧನ ಸಮಾವೇಶ ಮಾಡಿದ್ದಾರೆ. ಯಾವ ಕಾರಣಕ್ಕಾಗಿ ಸಮಾವೇಶ ಮಾಡಿದರೂ ಎಂದು ತಿಳಿಯುತ್ತಿಲ್ಲ. ಈಗಿನ ಸರ್ಕಾರ ತನ್ನ ಮತಗಳಿಂದ ಅಧಿಕಾರಕ್ಕೆ ಬಂದಿಲ್ಲ. ಬಿಟ್ಟಿ ಭಾಗ್ಯಗಳನ್ನು ಕೊಟ್ಟು ಅಧಿಕಾರಕ್ಕೆ ಬಂದಿದೆ. ಸಿದ್ದರಾಮಯ್ಯ ಜೆಡಿಎಸ್ ಪಕ್ಷದಲ್ಲಿ ಇದ್ದಾಗ ಸೋನಿಯ ಗಾಂಧಿಯನ್ನ ಬೈಯುತ್ತಿದ್ದರು. ಕಾಂಗ್ರೆಸ್ ಗೆ ಬಂದ ಮೇಲೆ ಅವರ ಕಾಲಿಗೆ ಬಿದ್ದರು ಸಿದ್ರಾಮಣ್ಣ ನಿಮಗೆ ನಾಚಿಕೆ ಆಗಬೇಕು ಎಂದು ಕಿಡಿ ಕಾರಿದರು. ಇನ್ನು ಸಿದ್ದರಾಮಯ್ಯ ಬಾದಾಮಿಯಲ್ಲಿ ಗೆಲ್ಲಲು ನಾನು ಕಾರಣ ಎಂದು ಸ್ವತಃ ಸಿದ್ದರಾಮಯ್ಯ ನನ್ನ ಕರೆದು ಹೇಳಿದ್ರು ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ಇನ್ನು ಸಿದ್ದರಾಮಯ್ಯ ವಿಪಕ್ಷ ನಾಯಕ ಆದಾಗ ಪಕ್ಷ ಸಂಘಟನೆ ಮಾಡಿ ಸಿಎಂ ಆಗಿದ್ದಾರೆ. ಅವರು ಮೊದಲಿನ ಸಿದ್ದರಾಮಯ್ಯ ಆಗಿಲ್ಲ ಈಗ ಬಹಳ ಬದಲಾಗಿದ್ದಾರೆ. ಈ ಬದಲಾವಣೆ ನಿಮಗೆ ಶೋಭೆ ತರುವುದಿಲ್ಲ. ಕುಮಾರಸ್ವಾಮಿ ಸಿಎಂ ಆಗಿದ್ದಾಗ ರೈತರ ಸಾಲ ಮನ್ನಾ ಮಾಡಿದೆ ನೀವು ಏನು ಮಾಡಿದ್ರಿ ಎಂದು ಪ್ರಶ್ನೆ ಮಾಡಿದ್ರು. ನಿಮ್ಮಂತೆಯೇ ಡಿಕೆಶಿ ಸಹ ಪಕ್ಷ ಕಟ್ಟುವಲ್ಲಿ ಶ್ರಮ ವಹಿಸಿದ್ದಾರೆ ನೀವು ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಬೇಕು ಎಂದು ಡಿಕೆಶಿ ಪರ ಬ್ಯಾಟಿಂಗ್ ಮಾಡಿದ್ರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



