ತುಮಕೂರು: ಪತ್ನಿಯ ಕುತ್ತಿಗೆ, ಮುಖಕ್ಕೆ 20ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಬರ್ಬರ ವಾಗಿ ಪತಿ ಕೊಲೆ ಮಾಡಿರುವ ಘಟನೆ ತುಮಕೂರು ಹೊರವಲಯದ ಅಂತರಸನಹಳ್ಳಿಯಲ್ಲಿ ನಡೆದಿದೆ.ಗೀತಾ (20) ಮೃತ ದುರ್ದೈವಿ, ಪತಿ ನವೀನ್ ಕೊಲೆ ಮಾಡಿದ ಆರೋಪಿಯಾ ಗಿದ್ದು, ಕೃತ್ಯದ ಬಳಿಕ ಪರಾರಿಯಾಗಿದ್ದಾನೆ. ನವೀನ್ ಕುಡಿದ ಮತ್ತಿನಲ್ಲಿ ಪತ್ನಿಯನ್ನು ಕೊಲೆಗೈದಿರುವ ಶಂಕೆ ವ್ಯಕ್ತವಾಗಿದ್ದು, ಆರೋಪಿ ನವೀನ್‌ಗಾಗಿ ಪೊಲೀಸರು ಬಲೆ ಬೀಸಿದ್ದಾರೆ.ನವೀನ್ ಮತ್ತು ಗೀತಾ 2 ವರ್ಷದ ಹಿಂದೆಯಷ್ಟೇ ಮದುವೆಯಾಗಿದ್ದರು. ದಂಪತಿ ಅಂತರಸನಹಳ್ಳಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.
ನವೀನ್ಅಂತರಸನಹಳ್ಳಿ ಎಪಿಎಂಸಿ ಮಾರುಕಟ್ಟೆ ಯಲ್ಲಿನ ತರಕಾರಿ ಅಂಗಡಿಯಲ್ಲಿ ಮಂತ್ರ ಮಾಡುತ್ತಿದ್ದ ದಂಪತಿಗೆ ಒಂದು ವರ್ಷ ಗಂಡು ಮಗು ಇದೆ. ಮಗುವನ್ನು ನೀಡಿ ತನ್ನ ತವರು ಮನೆಗೆ ಕಳುಹಿಸಿದ್ದರು.ದಂಪತಿಮಧ್ಯೆ ಕ್ಷುಲ್ಲಕ ಕಾರಣಕ್ಕಾಗಿ ಆಗಾಗ ಗಲಾಟೆಯಾಗುತ್ತಿತ್ತು. ಶನಿವಾರ ರಾತ್ರಿ ದಂಪತಿ ನಡುವೆ ಗಲಾಟೆಯಾಗಿದೆ. ಗಲಾಟೆ ವೇಳೆ ಸತ್ತ ಗೀತಾಗೆ ಪತಿ ನವೀನ್ ಜಾಕುವಿನಲ್ಲ 20ಕ್ಕೂ ಹೆಚ್ಚು ಬಾರಿ ಚುಚ್ಚಿ ಚುಚ್ಚಿ ಕೊನೆ ಮಾಡಿ, ಪರಾರಿಯಾಗಿದ್ದಾನೆ. ಮಾಲೀಕ ಬಾಡಿಗೆ ಪಡೆಯುವ ಭಾನುವಾರ ಬೆಳಗ್ಗೆ ಮನೆ ಬಳಿ ಬಂದಿದ್ದ. ಈ ವೇಳೆ ಗೀತಾ ರಕ್ತದ ಮಡುವಿನಲ್ಲಿ ಬಿದ್ದಿದ್ದನ್ನು ಕಂಡ ಮನೆ ಮಾಲೀಕ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



