ಹೊಳಲ್ಕೆರೆ: HIV ಸೋಂಕು ಇದೆ ಎಂಬ ಕಾರಣಕ್ಕೆ ಅಕ್ಕನೇ ತನ್ನ ಒಡಹುಟ್ಟಿದ ತಮ್ಮನನ್ನೆ ಕೊಂದ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ದುಮ್ಮಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮಲ್ಲಿಕಾರ್ಜುನ (23) ಕೊಲೆಯಾದ ಯುವಕ. ಈತ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕಾರಣ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಆತನಿಗೆ HIV ಸೋಂಕು ಇರುವುದು ಪತ್ತೆಯಾಗಿದೆ. ತಮ್ಮನಿಗೆ ಈ ಸೋಂಕು ಇರುವುದು ಗೊತ್ತಾದ ಕೊಡಲೇ ಮರ್ಯಾದೆಗಾಗಿ ಅಕ್ಕ ನಿಶಾ ಹಾಗೂ ಭಾವ ಮಂಜುನಾಥ ಮಂಗಳೂರಿಗೆ ಆಂಬುಲೆನ್ಸ್ ನಲ್ಲಿ ಸಾಗಿಸುವಾಗ ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾರೆ. ಇನ್ನು ಮೃತದೇಹವನ್ನು ಗ್ರಾಮಕ್ಕೆ ತಂದಾಗ ಗ್ರಾಮಸ್ಥರಿಗೆ ಅನುಮಾನ ಬಂದು ಪೊಲೀಸರಿಗೆ ಮಾಹಿತಿ ನೀಡಿದಾಗ ಘಟನೆ ಬೆಳಕಿಗೆ ಬಂದಿದೆ. ಇನ್ನು ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಮೃತನ ತಂದೆ ನಾಗರಾಜ್ ದೂರು ನೀಡಿದ್ದು, ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



