ನವದೆಹಲಿ: ಭಾನುವಾರ ಯುಪಿಯ ಝಾನ್ಸಿಯಲ್ಲಿ ಕ್ಲಿಪ್ ಮತ್ತು ಸಣ್ಣ ಚಾಕುವಿನಿಂದ ಮಹಿಳೆಯೊಬ್ಬರಿಗೆ ಹೆರಿಗೆ ಮಾಡಿಸಿ ಎರಡು ಜೀವ ಉಳಿಸಿದ್ದ ಸೇನಾ ವೈದ್ಯ ಮೇಜರ್ ಡಾ. ರೋಹಿತ್ ಬಚ್ಚಾಲಾ ಅವರ ನಡೆ ಯನ್ನು ಭಾರತೀಯ ಸೇನಾ ಮುಖ್ಯಸ್ಥ ಜ. ಉಪೇಂದ್ರ ದ್ವಿವೇದಿ ಶ್ಲಾಘಿಸಿದ್ದಾರೆ. ಜು.5ರಂದು ರೈಲು ನಿಲ್ದಾಣದಲ್ಲಿ ಹೆರಿಗೆ ನೋವು ಕಾಣಿಸಿಕೊಂಡಿದ್ದ ಮಹಿಳೆಗೆ ಕ್ಲಿಪ್ ಮತ್ತು ಜೇಬಿನಲ್ಲಿಡಬಹುದಾದ ಸಣ್ಣ ಚಾಕುವಿನಿಂದ ಹೆರಿಗೆ ಮಾಡಿಸಿದ್ದರು. ಇದನ್ನು ಶ್ಲಾಘಿಸಿ ರುವ ಜ. ದ್ವಿವೇದಿ ಅವರು ರೋಹಿತ್ ಅವರ ವೃತ್ತಿಪರತೆ ಮತ್ತು ನಿಸ್ವಾರ್ಥ ಬದ್ದತೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಭಾರತೀಯ ಸೇನೆ ಹೇಳಿಕೆಯಲ್ಲಿ ತಿಳಿಸಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



