Close Menu
  • ಪ್ರಮುಖ ಸುದ್ದಿ
    • ಅಡಿಕೆ ರೇಟ್‌
    • ಮಾರುಕಟ್ಟೆ ಧಾರಣೆ
  • ಅಪರಾಧ ಸುದ್ದಿ
  • ದಿನದ ವಿಶೇಷ
  • ನಮ್ಮ ಚಿತ್ರದುರ್ಗ
    • ಬಯಲುಸೀಮೆ ನೋಟ
What's Hot

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎಂ.ಚಂದ್ರಪ್ಪ ಚಾಲನೆ

ವಿಪಕ್ಷದ ಶಾಸಕರಾದರು ಅಭಿವೃದ್ಧಿಗೆ ಅನುದಾನ ಏನು ಕೊರತೆ ಇಲ್ಲ – ಎಂ.ಚಂದ್ರಪ್ಪ

ಸಚಿವ ಸಂಪುಟಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳು ಇಲ್ಲಿವೆ

Facebook X (Twitter) Instagram
  • ಪ್ರಮುಖ ಸುದ್ದಿ
  • ನಮ್ಮ ಚಿತ್ರದುರ್ಗ
  • ಬಯಲುಸೀಮೆ ನೋಟ
Facebook X (Twitter) Instagram
Bayaluseeme Times | ಬಯಲುಸೀಮೆ ಟೈಮ್ಸ್
  • ಪ್ರಮುಖ ಸುದ್ದಿ
    • ಅಡಿಕೆ ರೇಟ್‌
    • ಮಾರುಕಟ್ಟೆ ಧಾರಣೆ
  • ಅಪರಾಧ ಸುದ್ದಿ
  • ದಿನದ ವಿಶೇಷ
  • ನಮ್ಮ ಚಿತ್ರದುರ್ಗ
    • ಬಯಲುಸೀಮೆ ನೋಟ
Subscribe
Bayaluseeme Times | ಬಯಲುಸೀಮೆ ಟೈಮ್ಸ್
Home»ಪ್ರಮುಖ ಸುದ್ದಿ»ಸಚಿವ ಸಂಪುಟಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳು ಇಲ್ಲಿವೆ
ಪ್ರಮುಖ ಸುದ್ದಿ

ಸಚಿವ ಸಂಪುಟಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳು ಇಲ್ಲಿವೆ

Times of bayaluseemeBy Times of bayaluseemeAugust 7, 2025No Comments8 Mins Read
Share WhatsApp Facebook Twitter Telegram Copy Link
Follow Us
Google News Flipboard
Share
Facebook Twitter LinkedIn Pinterest Email Copy Link

2021-22ನೇ ಸಾಲಿನಲ್ಲಿ RIDF ಟ್ರಾಂಚ್-27ರಡಿ ನಬಾರ್ಡ್ ನಿಂದ ಅನುಮೋದನೆಗೊಂಡು ನಿರ್ಮಿಸುತ್ತಿರುವ ಕೃಷಿ ಇಲಾಖೆಯ 13 ಶೀತಲ ಘಟಕಗಳ ನಿರ್ಮಾಣ ಕಾಮಗಾರಿಗಳ ರೂ.171.91 ಕೋಟಿಗಳ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ ನೀಡಿದೆ ಹಾಗೂ ಹೆಚ್ಚುವರಿ ಮೊತ್ತ ರೂ.47.81 ಕೋಟಿಗಳನ್ನು ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ಸಂಗ್ರಹವಾಗುವ ಸೇವಾ ಶುಲ್ಕದಿಂದ ಭರಿಸಲು ಸಚಿವ ಸಂಪುಟ ನಿರ್ಧರಿಸಿದೆ

ಕಿತ್ತೂರಿಗೆ 100 ಹಾಸಿಗೆ ಆಸ್ಪತ್ರೆ

ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ 100 ಹಾಸಿಗೆಗಳ ತಾಲ್ಲೂಕು ಮಟ್ಟದ ಆಸ್ಪತ್ರೆಯನ್ನು ರೂ.3378.65 ಲಕ್ಷಗಳ ಅನುದಾನದಲ್ಲಿ ನಿರ್ಮಿಸಲು ಹೊಸದಾಗಿ ಟೆಂಡರ್ ಆಹ್ವಾನಿಸಿ ಕೈಗೊಳ್ಳಲು ಅಂದಾಜು ಪಟ್ಟಿಗೆ ಆಡಳಿತಾತ್ಮಕ ಅನುಮೋದನೆಯನ್ನು ಸಚಿವ ಸಂಪುಟ ನೀಡಿತು.

ಮೊಳಕಾಲ್ಮೂರು ಆಸ್ಪತ್ರೆ ಮೇಲ್ದರ್ಜೆಗೆ

ಮೊಳಕಾಲ್ಮೂರು ತಾಲ್ಲೂಕು ಗಣಿ ಬಾಧಿತ ಪ್ರದೇಶವಾಗಿರುವುದರಿಂದ ಈ ತಾಲ್ಲೂಕಿನಲ್ಲಿ ಉತ್ತಮ ಆರೋಗ್ಯ ಸೇವೆ ಕಲ್ಪಿಸಲು ಪ್ರಸ್ತುತವಿರುವ 100 ಹಾಸಿಗೆ ತಾಲ್ಲೂಕು ಆಸ್ಪತ್ರೆಯನ್ನು 200 ಹಾಸಿಗೆಗಳಿಗೆ ಉನ್ನತೀಕರಿಸಿ ಪ್ರತ್ಯೇಕ ಜಿಲ್ಲಾಮಟ್ಟದ ಆಸ್ಪತ್ರೆಯನ್ನು ಸ್ಥಾಪಿಸಲು ಸಚಿವ ಸಂಪುಟ ಅನುಮೋದಿಸಿದೆ.

ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳಿಗೆ ಸೌಲಭ್ಯ

ಕರ್ನಾಟಕ ಶಿಕ್ಷಣ ಸಂಸ್ಥೆಗಳು (ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳಿಗೆ ಮಾನ್ಯತೆ ನೀಡಲು ನಿಬಂಧನೆ ಮತ್ತು ಷರತ್ತುಗಳು) (ಕಾಲೇಜು ಶಿಕ್ಷಣ) (ತಿದ್ದುಪಡಿ) ನಿಯಮಗಳಿಗೆ ತಿದ್ದುಪಡಿ ಮೂಲಕ ಮುಸ್ಲಿಂಯೇತರ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಲ್ಲಿ ಆಯಾ ಅಲ್ಪಸಂಖ್ಯಾತ ವರ್ಗದ ವಿದ್ಯಾರ್ಥಿಗಳ ಸಂಖ್ಯೆ ಶೇ.50 ರಷ್ಟು ಕಡ್ಡಾಯವಾಗಿ ಹೊಂದಿರಬೇಕೆಂಬ ನಿಯಮವನ್ನು ತೆಗೆದುಹಾಕಲು ಸಚಿವ ಸಂಪುಟ ನಿರ್ಣಯಿಸಿದೆ

ಕಾರ್ಮಿಕ ರಾಜ್ಯ ವಿಮಾ ಸೊಸೈಟಿ ಸ್ಥಾಪನೆ

ಕಾರ್ಮಿಕ ರಾಜ್ಯ ವಿಮಾ ಯೋಜನೆ ವೈದ್ಯಕೀಯ ಸೇವೆಗಳು ಇಲಾಖೆಯನ್ನು ESI ಮಾರ್ಗಸೂಚಿಗಳನ್ವಯ “ಸೊಸೈಟಿ ನೋಂದಣಿ ಕಾಯ್ದೆ 1860” ಅಡಿಯಲ್ಲಿ ನೋಂದಾಯಿಸಿ “ಕರ್ನಾಟಕ ಕಾರ್ಮಿಕರ ರಾಜ್ಯ ವಿಮಾ ಸೊಸೈಟಿ” ಯನ್ನಾಗಿ ರೂಪಿಸಲು ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ.

ವರದಾ ನದಿಗೆ ನೀರು ತುಂಬಿಸುವ ಯೋಜನೆ

ಹಾವೇರಿ ಜಿಲ್ಲೆ, ಹಾನಗಲ್ಲ ತಾಲ್ಲೂಕಿನ ವರದಾ ನದಿಯಿಂದ ನೆರೆಗಲ್ ಹಾಗೂ ಕುಸನೂರ ಏತ ನೀರಾವರಿ ಮುಖಾಂತರ 111 ಕೆರೆಗಳನ್ನು ತುಂಬಿಸುವ ಯೋಜನೆಯನ್ನು ರೂ.220.00 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಸಚಿವ ಸಂಪುಟವು ಆಡಳಿತಾತ್ಮಕ ಅನುಮೋದನೆ ನೀಡಿದೆ.

ಸೊಕನಾದಗಿ ನೀರಾವರಿ ಯೋಜನೆಗೆ ಅನುಮೋದನೆ

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಸೊಕನಾದಗಿ ಗ್ರಾಮ ಮತ್ತು ಸುತ್ತಮುತ್ತಲಿನ 588 ಹೆಕ್ಟೇರ್ ಕ್ಷೇತ್ರಕ್ಕೆ ಏತ ನೀರಾವರಿ ಯೋಜನೆಯ ಮೂಲಕ ನೀರಾವರಿ ಯೋಜನೆಯ ಮೂಲಕ ನೀರಾವರಿ ಸೌಲಭ್ಯ ಕಲ್ಪಿಸುವ ರೂ.17.00 ಕೋಟಿಗಳ ಅಂದಾಜು ಮೊತ್ತದ ಕಾಮಗಾರಿಯನ್ನು ಕೈಗೊಳ್ಳಲು ಸಚಿವ ಸಂಪುಟವು ಆಡಳಿತಾತ್ಮಕ ಅನುಮೋದನೆ ನೀಡಿದೆ.

ಅಲ್ಪಸಂಖ್ಯಾತ ಹೆಣ್ಣುಮಕ್ಕಳಿಗೆ ಹಾಸ್ಟೇಲ್

ಅಲ್ಪಸಂಖ್ಯಾತರ ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ಪ್ರತಿ ಮಹಿಳಾ ಕಾಲೇಜು ಕಟ್ಟಡ ನಿರ್ಮಾಣಕ್ಕೆ ವ್ಯತ್ಯಾಸದ ಮೊತ್ತ ರೂ.265.57 ಲಕ್ಷಗಳಂತೆ ಒಟ್ಟು 15 ಕಾಲೇಜು ಕಟ್ಟಡಗಳ ನಿರ್ಮಾಣಕ್ಕೆ ತಗಲುವ ವ್ಯತ್ಯಾಸದ ಹೆಚ್ಚುವರಿ ಮೊತ್ತ ರೂ.3983.55 ಲಕ್ಷಗಳ ಯೋಜನಾ ವೆಚ್ಚದಲ್ಲಿ ಕೈಗೊಳ್ಳಲು ಹಾಗೂ ರೂ.87.60 ಕೋಟಿಗಳ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ ನೀಡಲು; ಸಚಿವ ಸಂಪುಟ ನಿರ್ಣಯಿಸಿದೆ.

ತಲಕಾಡು ಇನ್ನು ಪಟ್ಟಣ ಪಂಚಾಯಿತಿ

ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಗ್ರಾಮ ಪಂಚಾಯಿತಿಯೊಂದಿಗೆ ಬಿ.ಶೆಟ್ಟಹಳ್ಳಿ ಗ್ರಾಮ ಪಂಚಾಯಿತಿಯ ಟಿ.ಬೆಟ್ಟಹಳ್ಳಿ ಮತ್ತು ಕೂರುಬಾಳನಹುಂಡಿ ಗ್ರಾಮಗಳನ್ನು ಸೇರ್ಪಡೆಗೊಳಿಸಿ “ತಲಕಾಡು ಪಟ್ಟಣ ಪಂಚಾಯಿತಿ” ಯನ್ನಾಗಿ ಮೇಲ್ದರ್ಜೆಗೇರಿಸಲು ಸಚಿವ ಸಂಪುಟ ಅನುಮೋದಿಸಿದೆ.

ಶಿವ ಸಮತೋಲನ ಜಲಾಶಯ ಯೋಜನೆ ವಿಸ್ತರಣೆ

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಂದ ಶಿವ ಸಮತೋಲನ ಜಲಾಶಯದಿಂದ ಶಿವ ಸಮತೋಲನ ಜಲಾಶಯದ ಕೊಳವೆ ಮಾರ್ಗಗಳ ಇಂಟೇಕ್ ಬಳಿ ಇರುವ 5ನೇ ಹಂತದ ಕಚ್ಚಾ ನೀರು ಸರಬರಾಜು ಕೊಳವೆ ಮಾರ್ಗದವರೆಗೆ 3200 ಮಿ.ಮೀ ವ್ಯಾಸದ ವಿಸ್ತರಿತ ಹೆಚ್ಚುವರಿ ಕಚ್ಚಾ ನೀರಿನ ಕೊಳವೆ ಮಾರ್ಗವನ್ನು ಅಳವಡಿಸುವ ರೂ.136.50 ಕೋಟಿಗಳ ಅಂದಾಜು ಮೊತ್ತದ ಕಾಮಗಾರಿಯನ್ನು ಕೆ.ಟಿ.ಪಿ.ಪಿ ಕಾಯ್ದೆ 1999 ರನ್ವಯ ಅನುಷ್ಟಾನಗೊಳಿಸುವ ಷರತ್ತಿಗೊಳಪಟ್ಟು ಕಾಮಗಾರಿಯ ವಿಸ್ತೃತ ಯೋಜನಾ ವರದಿಗೆ ಸಚಿವ ಸಂಪುಟವು ಆಡಳಿತಾತ್ಮಕ ಅನುಮೋದನೆ ನೀಡಿದೆ.

ನಗರ ಮತ್ತು ಗ್ರಾಮಾಂತರ ಯೋಜನಾ ನಿರ್ದೇಶನಾಲಯ ಇನ್ನು ಆಯುಕ್ತಾಲಯ

ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಆಯುಕ್ತಾಲಯದ ರಚನೆ, ಆಯುಕ್ರ ನೇಮಕಾತಿ ಹಾಗೂ ಅಧಿಕಾರ ಮತ್ತು ಕರ್ತವ್ಯಗಳಿಗೆ ಸಂಬಂಧಿಸಿದಂತೆ ಶಾಸನಬದ್ಧ ಅವಕಾಶವನ್ನು ಕಲ್ಪಿಸಲು ಹಾಗೂ ಆಯುಕ್ತಾಲಯ ರಚನೆಯಿಂದ ನಗರಾಭಿವೃದ್ಧಿ ಪ್ರಾಧಿಕಾರಗಳ ಹಾಗೂ ಮೈಸೂರು ಅಭಿವೃದ್ಧಿ ಪ್ರಾಧಿಕಾರದ ನಿಯಂತ್ರಣವನ್ನು ಆಯುಕ್ತಾಲಯದ ವ್ಯಾಪ್ತಿಗೆ ಒಳಪಡಿಸಲು ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ ಕಾಯ್ದೆ, 1987ಕ್ಕೆ ಹಾಗೂ ಮೈಸೂರು ಅಭಿವೃದ್ಧಿ ಪ್ರಾಧಿಕಾರ ಕಾಯ್ದೆ 2024 ಗಳಲ್ಲಿ ತಿದ್ದುಪಡಿ ತರುವುದು ಅವಶ್ಯಕವಿರುವುದರಿಂದ ಈ ಪ್ರಸ್ತಾವನೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ

ಗದಗ-ಬೆಟಗೇರಿ ಅಧ್ಯಾದೇಶ ಬದಲಿಗೆ ವಿಧೇಯಕ

ಅಧ್ಯಾದೇಶವನ್ನು ಬದಲಿ ವಿಧೇಯಕವನ್ನಾಗಿ ವಿದಾಯಿಸುವ ಪ್ರಕ್ರಿಯೆ ಜೊತೆಗೆ ಅಧ್ಯಾದೇಶದಲ್ಲಿ ಒಳಗೊಂಡಿರದ ಇಬ್ಬರು ಹೆಚ್ಚುವರಿ ಸದಸ್ಯರನ್ನು ಸಹ ಕಾಯ್ದೆಗೆ ಸೇರ್ಪಡೆಗೊಳಿಸಿ ಸಿದ್ದಪಡಿಸಿರುವ ಪರಿಷ್ಕೃತ ಗದಗ-ಬೆಟಗೇರಿ ವ್ಯಾಪಾರ ಸಂಸ್ಕೃತಿ ಮತ್ತು ವಸ್ತು ಪ್ರದರ್ಶನ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ, 2025ಕ್ಕೆ ಅನುಮೋದನೆ ಹಾಗೂ ಸದರಿ ವಿಧೇಯಕವನ್ನು ಮುಂಬರುವ ವಿಧಾನಮಂಡಲದ ಅಧಿವೇಶನದಲ್ಲಿ ಮಂಡಿಸಲು; ಸಚಿವ ಸಂಪುಟ ನಿರ್ಧರಿಸಿದೆ.

ಹುಣಸೂರು ನಾಲೆಗಳ ಆಧುನೀಕರಣ

ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಕಟ್ಟೆಮಳವಾಡಿ ಆಣೆಕಟ್ಟು ನಾಲೆ ಮತ್ತು ವಡಕೆಕಟ್ಟೆ ಹೈಲೆವೆಲ್ ನಾಲೆಗಳ ಆಧುನೀಕರಣ ಕಾಮಗಾರಿಗಳ ಹಾಗೂ ಅಡ್ಡಮೋರಿಗಳ ಅಭಿವೃದ್ಧಿ ಕಾಮಗಾರಿಗಳ ರೂ.49.85 ಕೋಟಿಗಳ ಅಂದಾಜು ಮೊತ್ತದ ಯೋಜನೆಗೆ ಸಚಿವ ಸಂಪುಟವು ಆಡಳಿತಾತ್ಮಕ ಅನುಮೋದನೆ ನೀಡಿದೆ.

ಮರೂರು ಶಾಖಾ ನಾಲೆ ಆಧುನೀಕರಣ

ಹಾರಂಗಿ ಬಲದಂಡೆ ನಾಲೆಯಡಿ ಬರುವ ಮರೂರು ಶಾಖಾ ನಾಲಾ ಹಾಗೂ ಅದರಡಿ ಬರುವ ವಿತರಣಾ ನಾಲೆಗಳ ಆಧುನೀಕರಣ ಕಾಮಗಾರಿಯ ರೂ.90.00 ಕೋಟಿ ಮೊತ್ತದ ಅಂದಾಜುಪಟ್ಟಿಗೆ ಆಡಳಿತಾತ್ಮಕ ಅನುಮೋದನೆ ನೀಡಲು; ಸಚಿವ ಸಂಪುಟ ನಿರ್ಧರಿಸಿದೆ.

ಹೇಮಾವತಿ ಡಿಸ್ಟಿಬ್ಯೂಟರಿ-64ಕ್ಕೆ ಆಧುನೀಕರಣ

ಹೇಮಾವತಿ ಎಡದಂಡೆ ಕಾಲುವೆ ಅಡಿಯಲ್ಲಿ ಡಿಸ್ಟಿçಬ್ಯೂಟರಿ-64 ಮತ್ತು ಅದರ ಉಪ ಕಾಲುವೆಗಳ ಸಿಸಿ ಲೈನಿಂಗ್ ಮತ್ತು ಪುನರ್‌ನಿರ್ಮಾಣ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ನೀಡಲು; ಸಚಿವ ಸಂಪುಟ ನಿರ್ಣಯಿಸಿದೆ.

ನವಿಲುತೀರ್ಥದಿಂದ ರಾಮದುರ್ಗದ 8 ಕೆರೆ ಭರ್ತಿ

ಬೆಳಗಾವಿ ಜಿಲ್ಲೆಯ ನವಿಲುತೀರ್ಥ ಆಣೆಕಟ್ಟಿನಿಂದ ಮಲಪ್ರಭಾ ನದಿಯ ನೀರು ಎತ್ತುವ ಮೂಲಕ ರಾಮದುರ್ಗ ತಾಲ್ಲೂಕಿನ ಚಂದರಗಿ ಮತ್ತು ಸುತ್ತಮುತ್ತಲಿನ ಗ್ರಾಮಗಳ 8 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಲು; ಸಚಿವ ಸಂಪುಟ ನಿರ್ಧರಿಸಿದೆ.

ಮದ್ದೂರು ಕಾಲುವೆಗಳ ಆಧುನೀಕರಣ ಕಾಮಗಾರಿ

ಮಂಡ್ಯ ಜಿಲ್ಲೆ, ಮದ್ದೂರು ತಾಲ್ಲೂಕಿನ ಮದ್ದೂರು ಕೆರೆ ಅಡಿಯಲ್ಲಿನ ಚಾಮನಹಳ್ಳಿ ಬೈರಾನ್ ಹಾಗೂ ವೈದ್ಯನಾಥಪುರ ಕಾಲುವೆಗಳ ಆಧುನೀಕರಣ ಕಾಮಗಾರಿಯನ್ನು ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆಗೆ ಪ್ರಸ್ತಾಪಿಸಲಾಗಿ, ಮಂಡ್ಯ ಜಿಲ್ಲೆ, ಮದ್ದೂರು ತಾಲ್ಲೂಕಿನ ಮದ್ದೂರು ಕೆರೆ ಅಡಿಯಲ್ಲಿನ ಚಾಮನಹಳ್ಳಿ ಬೈರಾನ್ ಹಾಗೂ ವೈದ್ಯನಾಥಪುರ ಕಾಲುವೆಗಳ ಆಧುನೀಕರಣ ಕಾಮಗಾರಿಯನ್ನು ರೂ.49.50 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಸಚಿವ ಸಂಪುಟವು ಆಡಳಿತಾತ್ಮಕ ಅನುಮೋದನೆ ನೀಡಿದೆ.

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ನಿಯಮಗಳಿಗೆ ತಿದ್ದುಪಡಿ

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ (ತಿದ್ದುಪಡಿ) ನಿಯಮಗಳು, 2025”ಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ.ಆಯೋಗದ ಅಧ್ಯಕ್ಷರ ವಯೋಮಿತಿಯನ್ನು ಕನಿಷ್ಠ 40 ವರ್ಷ ಹಾಗೂ ಸದಸ್ಯರ ವಯೋಮಿತಿಯನ್ನು ಕನಿಷ್ಠ 35 ವರ್ಷ ಎಂದು ನಿಗಧಿಪಡಿಸಲಾಗಿದೆ. ಮಕ್ಕಳ ಕ್ಷೇತ್ರದಲ್ಲಿ ಅವರಿಗೆ ಇರಬೇಕಾದ ಅನುಭವದ ಅವಧಿಯನ್ನು ಐದು ವರ್ಷಗಳಿಂದ 10 ವರ್ಷಗಳಿಗೆ ಹೆಚ್ಚಿಸಲಾಗಿದೆ. ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರಿಗೆ ಸಾಮರ್ಥ್ಯ ಅಭಿವೃದ್ಧಿ ತರಬೇತಿ ನೀಡುವ ಬಗ್ಗೆ ತಿಳಿಸಲಾಗಿದೆ. ಆಯೋಗವು ಕೇಂದ್ರ ಸ್ಥಾನದಲ್ಲಿ ಸಭೆ ನಡೆಸುವ ಕುರಿತು ಹಾಗೂ ಕೇಂದ್ರ ಸ್ಥಾನದ ಹೊರಗೆ ಇತರೆ ಜಿಲ್ಲೆ / ತಾಲ್ಲೂಕುಗಳಿಗೆ ಭೇಟಿ ನೀಡಿ ಪರಿಶೀಲನಾ ಸಭೆಗಳನ್ನು ನಡೆಸುವ ಸಂದರ್ಭದಲ್ಲಿ ಇರಬೇಕಾದ ಸದಸ್ಯರ ಉಪಸ್ಥಿತಿ (Quoram) ಬಗ್ಗೆ ಸ್ಪಷ್ಟ ಮಾರ್ಗಸೂಚಿ ನೀಡಲಾಗಿದೆ. ಆಯೋಗದ ಕಾರ್ಯದರ್ಶಿಗಳು ಆಯೋಗದ ಆಡಳಿತದ ವ್ಯವಹಾರಗಳನ್ನು ಸುಲಲಿತವಾಗಿ ನಡೆಸಲು ವಿವರವಾದ ಮಾರ್ಗಸೂಚಿಯನ್ನು ನೀಡಲಾಗಿದೆ.

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಅಯೋಗದ ವತಿಯಿಂದ ಕರ್ನಾಟಕ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷೆಯನ್ನು ಕೈಗೊಳ್ಳಲು; ಸಚಿವ ಸಂಪುಟ ನಿರ್ಧರಿಸಿದೆ.ಸಮೀಕ್ಷೆಯನ್ನು ಡಿಜಿಟಲ್ ಕೈಗೊಳ್ಳುವುದು ಮತ್ತು ಸಮೀಕ್ಷೆಯನ್ನು ಡಿಜಿಟಲ್ ವಿಧಾನದಲ್ಲಿ ಮಾಡಲು ತಂತ್ರಾಂಶದ ಅಭಿವೃದ್ಧಿ ಮತ್ತು ಉಸ್ತುವಾರಿಯನ್ನು ಇ-ಆಡಳಿತ ಇಲಾಖೆ ಮೂಲಕ ಕೈಗೊಳ್ಳಲು; ಹಾಗೂ ಸಮೀಕ್ಷೆಯಲ್ಲಿ ನಮೂದಿಸಲಾಗುವ 6 ವರ್ಷ ಮೇಲ್ಪಟ್ಟ ಪ್ರತಿ ವ್ಯಕ್ತಿಯ ಆಧಾರ್ ದೃಢೀಕರಣವನ್ನು ಕಡ್ಡಾಯಗೊಳಿಸಲು; ಹಾಗೂ ನ್ಯಾ.ನಾಗಮೋಹನ್‌ದಾಸ್ ರವರ ನೇತೃತ್ವದಲ್ಲಿ ಒಳಮೀಸಲಾತಿಗೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿ ಸಮೀಕ್ಷೆಗೆ ಸಾರ್ವಜನಿಕವಾಗಿ ಲಭ್ಯವಿರುವ ಚುನಾವಣಾ ಮತದಾರರ ಪಟ್ಟಿಯನ್ನು ಉಪಯೋಗಿಸಿರುತ್ತಾರೆ. ಅದೇ ರೀತಿಯಾಗಿ ಹಿಂದುಳಿದ ವರ್ಗಗಳ ಆಯೋಗವು ನಡೆಸುವ ಸಮೀಕ್ಷೆಗೆ ಸಾರ್ವಜನಿಕವಾಗಿ ಲಭ್ಯವಿರುವ ಚುನಾವಣಾ ಮತದಾರರ ಪಟ್ಟಿಯನ್ನು ಉಪಯೋಗಿಸಿಕೊಂಡು ಸಮೀಕ್ಷಾ ಕಾರ್ಯವನ್ನು ಕೈಗೊಳ್ಳಲು; ಮತ್ತು ಸಮೀಕ್ಷಾ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ಆಯೋಗದ ಮೇಲುಸ್ತುವಾರಿಯಲ್ಲಿ ಅಗತ್ಯವಿರುವ ಅಧಿಕಾರಿಗಳು, ಶಿಕ್ಷಕರು ಹಾಗೂ ಇತರೆ ಸಿಬ್ಬಂದಿಗಳು ಕೆಲಸ ಮಾಡುವರು.

ಕರ್ನಾಟಕ ಸೌಹಾರ್ದ ಸಹಕಾರಿ ವಿಧೇಯಕ, 2025”ಕ್ಕೆ ಅನುಮೋದನೆ

ಕರ್ನಾಟಕ ವಿಧಾನ ಮಂಡಲದ ಉಭಯ ಸದನಗಳ ಅನುಮೋದನೆ ಪಡೆದು, ಘನತೆವೆತ್ತ ರಾಜ್ಯಪಾಲರ ಒಪ್ಪಿಗೆಗೆ ಸಲ್ಲಿಸಿ, ರಾಜ್ಯಪಾಲರ ಅವಲೋಕನಗೊಳಗಾಗಿ ಹಿಂದಿರುಗಿಸಲ್ಪಟ್ಟ ಕರ್ನಾಟಕ ಸೌಹಾರ್ದ ಸಹಕಾರಿ (ತಿದ್ದುಪಡಿ) ವಿಧೇಯಕ 2024”ನ್ನು ಹಿಂಪಡೆಯಲು; ಮತ್ತು ಕರ್ನಾಟಕ ಸೌಹಾರ್ದ ಸಹಕಾರಿ (ತಿದ್ದುಪಡಿ) ವಿಧೇಯಕ 2025”ಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ.

ಕರ್ನಾಟಕ ಸಹಕಾರ ಸಂಘಗಳು (ತಿದ್ದುಪಡಿ) ವಿಧೇಯಕ, 2025”ಕ್ಕೆ ಅನುಮೋದನೆ

ಕರ್ನಾಟಕ ವಿಧಾನ ಮಂಡಲದ ಉಭಯ ಸದನಗಳ ಅನುಮೋದನೆ ಪಡೆದು ಘನತೆವೆತ್ತ ರಾಜ್ಯಪಾಲರ ಒಪ್ಪಿಗೆಗೆ ಸಲ್ಲಿಸಿ, ರಾಜ್ಯಪಾಲರ ಅವಲೋಕನೆಗೊಳಗಾಗಿ ಹಿಂದಿರುಗಿಸಲ್ಪಟ್ಟ “ಕರ್ನಾಟಕ ಸಹಕಾರ ಸಂಘಗಳ (ತಿದ್ದುಪಡಿ) ವಿಧೇಯಕ 2024”ನ್ನು ಹಿಂಪಡೆಯಲು; ಹಾಗೂ ಕರ್ನಾಟಕ ಸಹಕಾರ ಸಂಘಗಳ (ತಿದ್ದುಪಡಿ) ವಿಧೇಯಕ 2025ಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಅಧ್ಯಕ್ಷರ ಹುದ್ದೆಗೆ ನಡೆಯುವ ಚುನಾವಣೆಗೆ ಮೀಸಲಾತಿ ಇರಲಿದೆ. ಸಹಕಾರಿ ಸಂಸ್ಥೆಗಳಲ್ಲಿ ಸಾಮಾಜಿಕ ನ್ಯಾಯವನ್ನು ತರಲು ಇದು ನೆರವಾಗಲಿದೆ.

ಕರ್ನಾಟಕ ಬಂದರು (ಲ್ಯಾಂಡಿಂಗ್ & ಶಿಪ್ಪಿಂಗ್ ಫೀಸ್) (ತಿದ್ದುಪಡಿ) ವಿಧೇಯಕ, 2025”ಕ್ಕೆ ಅನುಮೋದನೆ

ಕರ್ನಾಟಕ ಸರ್ಕಾರ (ವ್ಯವಹಾರ ನಿರ್ವಹಣೆ) ನಿಯಮಗಳು, 1977ರ ಮೊದಲನೇ ಅನುಸೂಚಿಯ ಐಟಂ 28ರ ಪರಂತುಕದನ್ವಯ ಕರ್ನಾಟಕ ಬಂದರುಗಳ (ಲ್ಯಾಂಡಿಂಗ್ & ಶಿಪ್ಪಿಂಗ್ ಫೀಸ್) ಆಕ್ಟ್, 1961ರ ಸೆಕ್ಷನ್ 3 ಮತ್ತು ಸೆಕ್ಷನ್ 10ನ್ನು ಮಾರ್ಪಡಿಸಿ ಕರ್ನಾಟಕ ಬಂದರು (ಲ್ಯಾಂಡಿಂಗ್ & ಶಿಪ್ಪಿಂಗ್ ಫೀಸ್) (ಅಮೆಂಡ್‌ಮೆಂಟ್) ಆಕ್ಟ್, 2025ರನ್ನು ಹೊರಡಿಸಲು; ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವರು ತಿಳಿಸಿದರು.

ಕರ್ನಾಟಕ ಸರ್ಕಾರಿ ವ್ಯಾಜ್ಯ ನಿರ್ವಹಣೆ (ತಿದ್ದುಪಡಿ) ವಿಧೇಯಕ, 2025”ಕ್ಕೆ ಅನುಮೋದನೆ

ಕರ್ನಾಟಕ ಸರ್ಕಾರಿ ವ್ಯಾಜ್ಯ ನಿರ್ವಹಣೆ (ತಿದ್ದುಪಡಿ) ವಿಧೇಯಕ, 2025ಕ್ಕೆ; ಹಾಗೂ ಸದರಿ ವಿಧೇಯಕವನ್ನು ವಿಧಾನ ಮಂಡಲದಲ್ಲಿ ಮಂಡಿಸಲು; ಸಚಿವ ಸಂಪುಟ ಅನುಮೋದನೆ ನೀಡಿದೆ.

ಕರ್ನಾಟಕ ಭೂ ಸುಧಾರಣೆಗಳು ಮತ್ತು ಇತರೆ ಕಾನೂನು (ತಿದ್ದುಪಡಿ) ವಿಧೇಯಕ, 2025”ಕ್ಕೆ ಅನುಮೋದನೆ

ಕರ್ನಾಟಕ ಭೂ ಕಂದಾಯ ಅಧಿನಿಯಮ, 1964ರ ಹಾಗೂ ಕರ್ನಾಟಕ ಭೂ ಸುಧಾರಣೆ ಕಾಯ್ದೆ, 1961ರ ವಿವಿಧ ಕಲಂ ಗಳಿಗೆ ತಿದ್ದುಪಡಿ ಮಾಡಲು ಅನುಬಂಧದಲ್ಲಿರುವಂತೆ ತಿದ್ದುಪಡಿ ತರಲು; ಮತ್ತು ಸದರಿ ಕರಡು ವಿಧೇಯಕವನ್ನು ವಿಧಾನಮಂಡಲದ ಉಭಯ ಸದನಗಳಲ್ಲಿ ಮಂಡಿಸಲು; ಸಚಿವ ಸಂಪುಟ ಅನುಮೋದನೆ ನೀಡಿದೆ.

ಕರ್ನಾಟಕ ಭೂ ಸುಧಾರಣೆಗಳು ಮತ್ತು ಇತರೆ ಕಾನೂನು (ತಿದ್ದುಪಡಿ) ವಿಧೇಯಕ, 2025”ಕ್ಕೆ ಅನುಮೋದನೆ

ಕರ್ನಾಟಕ ಭೂ ಕಂದಾಯ ಅಧಿನಿಯಮ, 1964ರ ಹಾಗೂ ಕರ್ನಾಟಕ ಭೂ ಸುಧಾರಣೆ ಕಾಯ್ದೆ, 1961ರ ವಿವಿಧ ಕಲಂ ಗಳಿಗೆ ತಿದ್ದುಪಡಿ ಮಾಡಲು ಅನುಬಂಧದಲ್ಲಿರುವಂತೆ ತಿದ್ದುಪಡಿ ತರಲು; ಮತ್ತು ಸದರಿ ಕರಡು ವಿಧೇಯಕವನ್ನು ವಿಧಾನಮಂಡಲದ ಉಭಯ ಸದನಗಳಲ್ಲಿ ಮಂಡಿಸಲು; ಸಚಿವ ಸಂಪುಟ ಅನುಮೋದನೆ ನೀಡಿದೆ.

ಕರ್ನಾಟಕ ನಗರಪಾಲಿಕೆಗಳ (ತಿದ್ದುಪಡಿ) ವಿಧೇಯಕ, 2025”ಕ್ಕೆ ಅನುಮೋದನೆ

ಕರ್ನಾಟಕ ಮಹಾನಗರ ಪಾಲಿಕೆಗಳ (ತಿದ್ದುಪಡಿ) ವಿಧೇಯಕ 2025ಕ್ಕೆ ಅನುಮೋದನೆ; ಹಾಗೂ ಸದರಿ ವಿಧೇಯಕವನ್ನು ಮುಂಬರುವ ವಿಧಾನಮಂಡಲದ ಅಧಿವೇಶನದಲ್ಲಿ ಮಂಡಿಸಲು; ಸಚಿವ ಸಂಪುಟ ಅನುಮೋದನೆ ನೀಡಿದೆ.

ಗ್ರೇಟರ್ ಬೆಂಗಳೂರು ಆಡಳಿತ (ತಿದ್ದುಪಡಿ) ವಿಧೇಯಕ, 2025”ಕ್ಕೆ ಅನುಮೋದನೆ

ಕರ್ನಾಟಕ ಸರ್ಕಾರ (ವ್ಯವಹಾರ ನಿರ್ವಹಣೆ) ನಿಯಮಗಳು 1977ರ ಅನುಸೂಚಿ 01ರ ಕ್ರಮ ಸಂಖ್ಯೆ: 1ರ ಅನ್ವಯ ಗ್ರೇಟರ್ ಬೆಂಗಳೂರು ಅಧಿನಿಯಮ, 2024ರ ಕಲಂ 8, 14 ಮತ್ತು 35ಕ್ಕೆ ತಿದ್ದುಪಡಿ ತರುವ ಉದ್ದೇಶದ ಅನುಬಂಧ-1 ರಲ್ಲಿನ ಗ್ರೇಟರ್ ಬೆಂಗಳೂರು ಆಡಳಿತ (ತಿದ್ದುಪಡಿ) ವಿಧೇಯಕ, 2025ಕ್ಕೆ ಸಚಿವ ಸಂಪುಟದ ಅನುಮೋದನೆ ನೀಡಿದೆ.

ಕರ್ನಾಟಕ ಅತ್ಯಾವಶ್ಯಕ ಸೇವೆಗಳ ನಿರ್ವಹಣಾ (ತಿದ್ದುಪಡಿ) ವಿಧೇಯಕ, 2025”ಕ್ಕೆ ಅನುಮೋದನೆ

ಕರ್ನಾಟಕ ಅತ್ಯಾವಶ್ಯಕ ಸೇವೆಗಳ ನಿರ್ವಹಣಾ ಅಧಿನಿಯಮ 2013ಕ್ಕೆ ತಿದ್ದುಪಡಿ ಮಾಡಲು ಇದರೊಂದಿಗೆ ಲಗತ್ತಿಸಿರುವ, ಅನುಬಂಧದಲ್ಲಿರುವಂತೆ ಕರ್ನಾಟಕ ಅತ್ಯಾವಶ್ಯಕ ಸೇವೆಗಳ ನಿರ್ವಹಣಾ (ತಿದ್ದುಪಡಿ) ವಿಧೇಯಕ 2025ನ್ನು ವಿಧಾನ ಮಂಡಲದಲ್ಲಿ ಮಂಡಿಸಲು; ಸಚಿವ ಸಂಪುಟದ ಅನುಮೋದನೆ ನೀಡಿದೆ.

ಕರ್ನಾಟಕ ದೇವದಾಸಿ ಪದ್ಧತಿ (ತಡೆಗಟ್ಟುವಿಕೆ, ನಿಷೇಧ, ಪರಿಹಾರ ಮತ್ತು ಪುನರ್ವಸತಿ) ವಿಧೇಯಕ, 2025”ಕ್ಕೆ ಅನುಮೋದನೆ

ಕರ್ನಾಟಕ ದೇವದಾಸಿಯರ (ಸಮರ್ಪಣ ನಿಷೇಧ) ಅಧಿನಿಯಮ, 1982 ಹಾಗೂ ಕರ್ನಾಟಕ ದೇವದಾಸಿಯರ (ಸಮರ್ಪಣ ನಿಷೇಧ) (ತಿದ್ದುಪಡಿ) ಅಧಿನಿಯಮ, 2009 ರದ್ದುಪಡಿಸಿ ಅನುಬಂಧ-1 ರಲ್ಲಿ ಇರಿಸಲಾದ ಸಮಗ್ರವಾದ ಕರ್ನಾಟಕ ದೇವದಾಸಿ (ತಡೆಗಟ್ಟುವಿಕೆ, ನಿಷೇಧ, ಪರಿಹಾರ ಮತ್ತು ಪುನರ್ವಸತಿ) ಕಾಯ್ದೆ, 2025”ರ ಕರಡು ಪ್ರಸ್ತಾವನೆಗೆ ಅನುಮೋದನೆ ನೀಡುವುದು; ಮತ್ತು ಸದರಿ ವಿಧೇಯಕವನ್ನು ವಿಧಾನ ಮಂಡಲದಲ್ಲಿ ಮಂಡಿಸಲು; ಸಚಿವ ಸಂಪುಟದ ಅನುಮೋದನೆ ನೀಡಿದೆ.

ಕರ್ನಾಟಕ ಅಪರಾಧ ಮುಕ್ತಗೊಳಿಸುವಿಕೆ (ಉಪಬಂಧಗಳ ತಿದ್ದುಪಡಿ) ವಿಧೇಯಕ, 2025”ಕ್ಕೆ ಅನುಮೋದನೆ

ಕರ್ನಾಟಕ ಸರ್ಕಾರದ (ವ್ಯವಹಾರಗಳ ನಿರ್ವಹಣೆ) ನಿಯಮಗಳು, 1977 ಷೆಡ್ಯೂಲ್-1ರ ಪ್ಯಾರ-1ರನ್ವಯ ಅನುಬಂಧದಲ್ಲಿ ಲಗತ್ತಿಸಿರುವ ಸಚಿವ ಸಂಪುಟ ಅನುಮೋದನೆ ನೀಡಿದೆ.

ನೋಂದಣಿ (ಕರ್ನಾಟಕ ತಿದ್ದುಪಡಿ) ವಿಧೇಯಕ 2025”ಕ್ಕೆ ಅನುಮೋದನೆ

ನೋಂದಣಿ (ಕರ್ನಾಟಕ ತಿದ್ದುಪಡಿ) ವಿಧೇಯಕ, 2024”ನ್ನು ಕೈಬಿಡಲು; ಮತ್ತು ನೋಂದಣಿ (ಕರ್ನಾಟಕ ತಿದ್ದುಪಡಿ) ವಿಧೇಯಕ, 2025”ಕ್ಕೆ; ಹಾಗೂ ಮೇಲೆ ತಿಳಿಸಿರುವ, ನೋಂದಣಿ (ಕರ್ನಾಟಕ ತಿದ್ದುಪಡಿ) ಕಾಯ್ದೆ 2025”ರ ವಿಧೇಯಕವನ್ನು ವಿಧಾನ ಮಂಡಲದಲ್ಲಿ ಮಂಡಿಸಲು; ಸಚಿವ ಸಂಪುಟ ಅನುಮೋದನೆ ನೀಡಿದೆ.

ಕರ್ನಾಟಕ ಪ್ರವಾಸೋದ್ಯಮ ವ್ಯಾಪಾರ (ಅನುಕೂಲತೆ ಮತ್ತು ನಿಯಂತ್ರಣಾ) (ತಿದ್ದುಪಡಿ) ವಿಧೇಯಕ, 2025”ಕ್ಕೆ ಅನುಮೋದನೆ

Karnataka Tourism Trade (Facilitation and Regulation) Act, 2015, 2015 ಕ್ಕೆ ತಿದ್ದುಪಡಿ ತಂದು, ಸದರಿ ಅಧಿನಿಯಮದ ಸೆಕ್ಷನ್-3ರ ನಂತರ “3-A. District Level Monitoring Committee ಅನ್ನು ರಚಿಸಿ, ಉಪಬಂಧ ಕಲ್ಪಿಸುವ ಸಂಬಂಧ ಅನುಬಂಧದಲ್ಲಿರುವ The Karnataka Tourism Trade (Facilitation and Regulation) (Amendment) Bill, 2025 ರ ಅನುಮೋದನೆಗಾಗಿ ಮತ್ತು; ಸದರಿ ವಿಧೇಯಕವನ್ನು ವಿಧಾನ ಮಂಡಲದಲ್ಲಿ ಮಂಡಿಸಲು; ಸಚಿವ ಸಂಪುಟ ಅನುಮೋದನೆ ನೀಡಿದೆ.

ಕರ್ನಾಟಕ ಪುರಸಭೆಗಳ ಹಾಗೂ ಇತರೆ ಕಾನೂನುಗಳ (ತಿದ್ದುಪಡಿ) ವಿಧೇಯಕ, 2025”ಕ್ಕೆ ಅನುಮೋದನೆ

ಕರ್ನಾಟಕ ಪೌರಸಭೆಗಳ ಹಾಗೂ ಇತರೆ ಕಾನೂನುಗಳ (ತಿದ್ದುಪಡಿ) ವಿಧೇಯಕ 2025ಕ್ಕೆ ಅನುಮೋದನೆ; ಹಾಗೂ ಸದರಿ ವಿಧೇಯಕವನ್ನು ಮುಂಬರುವ ವಿಧಾನಮಂಡಲದ ಅಧಿವೇಶನದಲ್ಲಿ ಮಂಡಿಸಲು; ಸಚಿವ ಸಂಪುಟ ಅನುಮೋದನೆ ನೀಡಿದೆ.

ಯಲಬುರ್ಗಾ, ಜೇವರ್ಗಿ ಹಾಗೂ ಯಾದಗಿರಿಯಲ್ಲಿ ಬಿಎಸ್ಸಿ ನರ್ಸಿಂಗ್ ಕಾಲೇಜು

ಯಲಬುರ್ಗಾ, ಜೇವರ್ಗಿ ಹಾಗೂ ಯಾದಗಿರಿಯಲ್ಲಿ ಬಿಎಸ್ಸಿ ನರ್ಸಿಂಗ್ ಕಾಲೇಜುಗಳಿಗೆ ಒಟ್ಟು 41.91 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಕೆಕೆಆರ್‌ಡಿಬಿ ಅನುದಾನದಲ್ಲಿ ಪ್ರಾರಂಭ ಮಾಡಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.

ಆಗಸ್ಟ್ 16ಕ್ಕೆ ವಿಶೇಷ ಸಚಿವ ಸಂಪುಟ ಸಭೆ

ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಕುರಿತು ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್ ನಾಗಮೋಹನ್ ದಾಸ ಅವರ ಆಯೋಗವನ್ನು ನೇಮಕ ಮಾಡಿದ್ದು, ವರದಿ ಸಲ್ಲಿಕೆಯಾಗಿದೆ. ಶ್ರಮವಹಿಸಿ ಕಡಿಮೆ ಸಮಯದಲ್ಲಿ ವೈಜ್ಞಾನಿಕವಾದ ಅಧ್ಯಯನ ಮಾಡುವ ಮೂಲಕ ಶೇ 95 ರಷ್ಟು ಸಮುದಾಯದ ಜನಸಂಖ್ಯೆಯನ್ನು ಸಮೀಕ್ಷೆಗೆ ಒಳಪಡಿಸಿ ವರದಿ ಸಲ್ಲಿಸಿದ್ದಾರೆ. ಸದರಿ ವರದಿಯನ್ನು ಎಲ್ಲಾ ಸಚಿವರಿಗೆ ನೀಡಲಾಗಿದೆ. ಸಚಿವ ಸಂಪುಟ ವರದಿಯನ್ನು ಸ್ವೀಕರಿಸಿದೆ. ಈ ಬಗ್ಗೆ ಅಧ್ಯಯನ ಮಾಡಿ ಆಗಸ್ಟ್ 16 ರಂದು, ಶನಿವಾರ ವಿಶೇಷ ಸಚಿವ ಸಂಪುಟ ಸಭೆಯನ್ನು ಕರೆದು ಚರ್ಚಿಸಿ ನಿರ್ಣಯವನ್ನು ಕೈಗೊಳ್ಳಲಾಗುವುದು ಎಂದು ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವರು ತಿಳಿಸಿದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿ‌ನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

bayaluseeme times ads (2)
cabinet decided in Minister some Special work
Follow on Google News Follow on Instagram
Share. Facebook Twitter Telegram WhatsApp
Previous Articleಪಕ್ಷಬೇಧ ಮರೆತು ಸರ್ಕಾರ ಹಾಗೂ ನನಗೆ ಆಶೀರ್ವಾದ ಮಾಡಿ – ಡಿಕೆಶಿ
Next Article ವಿಪಕ್ಷದ ಶಾಸಕರಾದರು ಅಭಿವೃದ್ಧಿಗೆ ಅನುದಾನ ಏನು ಕೊರತೆ ಇಲ್ಲ – ಎಂ.ಚಂದ್ರಪ್ಪ
Times of bayaluseeme
  • Website

Related Posts

ಪಕ್ಷಬೇಧ ಮರೆತು ಸರ್ಕಾರ ಹಾಗೂ ನನಗೆ ಆಶೀರ್ವಾದ ಮಾಡಿ – ಡಿಕೆಶಿ

August 7, 2025

ನಟ ದರ್ಶನ್ ಗೆ ಜಾಮೀನು ನೀಡದಂತೆ ವಕೀಲರ ವಾದ… ಹೊಸ ವರಸೆ ತೆಗೆದೆ ಪವಿತ್ರಗೌಡ..!

August 7, 2025

ಜಿಪಂ, ತಾಪಂ ಚುನಾವಣೆಗೆ ಡೇಟ್ ಫಿಕ್ಸ್..? ಸಚಿವರು ಹೇಳಿದ್ದೇನು..?

August 7, 2025
Add A Comment
Leave A Reply Cancel Reply

Advertisement
Latest Posts

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎಂ.ಚಂದ್ರಪ್ಪ ಚಾಲನೆ

ವಿಪಕ್ಷದ ಶಾಸಕರಾದರು ಅಭಿವೃದ್ಧಿಗೆ ಅನುದಾನ ಏನು ಕೊರತೆ ಇಲ್ಲ – ಎಂ.ಚಂದ್ರಪ್ಪ

ಸಚಿವ ಸಂಪುಟಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳು ಇಲ್ಲಿವೆ

ಪಕ್ಷಬೇಧ ಮರೆತು ಸರ್ಕಾರ ಹಾಗೂ ನನಗೆ ಆಶೀರ್ವಾದ ಮಾಡಿ – ಡಿಕೆಶಿ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2025 Bayaluseeme Time. Designed by Bayaluseeme time
  • Privacy Policy
  • Terms
  • Accessibility

Type above and press Enter to search. Press Esc to cancel.