ಜನಾರ್ಧನರೆಡ್ಡಿ ಹಾಗ್ ಸಚಿವ ಬಿ.ಶ್ರೀರಾಮುಲು ಮಧ್ಯೆ ಇರುವ ವೈಮನಸ್ಸು ಶೀಘ್ರದಲ್ಲಿಯೇ ನಿವಾರಣೆಯಾಗಲಿದ್ದು, ರಾಜೀ ಆಗಲಿದ್ದಾರೆಂದು ಮಾಜಿ ಶಾಸಕ ಸೋಮಶೇಖರ ರೆಡ್ಡಿ ಹೇಳಿದ್ದಾರೆ. ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ನನ್ನ ಸಹೋದರರು. ಸಣ್ಣ-ಪುಟ್ಟ ವೈಮನಸ್ಸು ಇರುತ್ತದೆ. ಶೀಘ್ರದಲ್ಲಿ ಕೇಂದ್ರ ರಾಜ್ಯ ಖಾತೆ ರೈಲ್ವೆ ಸಚಿವ ಎ. ಸೋಮಣ್ಣ ನೇತೃತ್ವದಲ್ಲಿ ದೆಹಲಿಯಲ್ಲಿ ಸಂಧಾನಕ್ಕೆ ವರಿಷ್ಠರು ಕರೆದಿದ್ದಾರೆ. ಯಾವುದೋ ಕಾರಣಕ್ಕೆ ಇಬ್ಬರ ಮಧ್ಯೆ ವಿವಾದ ಉದ್ಭವಿಸಿದೆ. ಅವರಿಬ್ಬರು ಹಳೆಯ ಗೆಳೆಯರು. ಇಬ್ಬರು ಒಂದಾಗಲಿದ್ದು ಮತ್ತೆ ಬಳ್ಳಾರಿಯಲ್ಲಿ ಬಿಜೆಪಿ ಗತವೈಭವ ಮರುಕಳಿಸಲಿದೆ ಎಂದಿದ್ದಾರೆ.’
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



