ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆಯ (BMTC) ಬಸ್ ಚಾಲಕರು ಎರಡು ಸಲ ಅಪಘಾತವೆಸಗಿ, ತಪ್ಪು ಸಾಬೀತಾದರೇ ಕೆಲಸದಿಂದಲೇ ವಜಾ ಮಾಡಲಾಗುತ್ತದೆ. ಚಾಲನೆ ವೇಳೆ ಫೋನ್ನಲ್ಲಿ ಮಾತನಾಡಿದರೇ ಕೆಲಸದಿಂದ ಅಮಾನತು ಮಾಡಲಾಗುತ್ತದೆ. ಈ ಹೊಸ ನಿಯಮ ಇಂದಿನಿಂದಲೇ ಜಾರಿಯಾಗಲಿದೆ ಎಂದು ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕ ಪ್ರಭಾಕರ್ ರೆಡ್ಡಿ ಹೇಳಿದರು.ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೊದಲ ಸಲ ಅಪಘಾತವೆಸಗಿದ್ದರೇ 6 ತಿಂಗಳು ಅಮಾನತು ಮಾಡುತ್ತೇವೆ. ಅಮಾನತು ಅವಧಿ ಮುಗಿದ ಮೇಲೆ ತರಬೇತಿ ನೀಡಿ ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳುತ್ತೇವೆ. ಮೊದಲ ಸಲ ಅಪಘಾತವೆಸಗಿದ ಚಾಲಕರಿಗೆ ಮೂರು ಇನ್ಕ್ರಿಮೆಂಟ್ ಕಡಿತಗೊಳಿಸಲಾಗುತ್ತದೆ. ಎರಡನೇ ಸಲ ಅಪಘಾತವೆಸಗಿದರೆ ಬಿಎಂಟಿಸಿ ಸಂಸ್ಥೆಯಿಂದಲೇ ವಜಾ ಮಾಡಲಾಗುತ್ತದೆ ಎಂದರು.
ಚಾಲಕರಿಗೆ ವಿಶೇಷ ತರಬೇತಿ
ಎಲೆಕ್ಟ್ರಿಕ್ ಬಸ್ ಚಾಲಕರು ಚಾಲನೆ ವೇಳೆ ವೇಳೆ ಫೋನ್ನಲ್ಲಿ ಮಾತಾಡಿದರೇ, ಬಸ್ ಕಂಪನಿಗೆ 5 ಸಾವಿರ ರೂಪಾಯಿ ದಂಡ,15 ದಿನಗಳ ಕಾಲ ಅಮಾನತು ಮಾಡಲಾಗುತ್ತದೆ. ಸೋಮವಾರದಿಂದ ಬಿಎಂಟಿಸಿ ಚಾಲಕರಿಗೆ ವಿಶೇಷ ತರಬೇತಿ ನೀಡಲಾಗುತ್ತದೆ. ಚಾಲಕರಿಗೆ ಯೋಗ ತರಬೇತಿ ನೀಡಲಾಗುತ್ತದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







