ಚಿತ್ರದುರ್ಗ: ಗ್ರಾಮೀಣ ಕ್ರೀಡೆಗಳಿಗೆ ಹೆಚ್ಚಿನ ಪ್ರೋತ್ಸಾಹ ಕೊಟ್ಟಾಗ ರಾಷ್ಟ್ರ ಮಟ್ಟದಲ್ಲಿ ಬೆಳೆಯಲು ಸಾಧ್ಯ ಎಂದು
ಕಬೀರಾನಂದಾಶ್ರಮದ ಶಿವಲಿಂಗಾನಂದ ಮಹಾಸ್ವಾಮಿಗಳು ಹೇಳಿದರು.ಚಿತ್ರದುರ್ಗ ಸ್ಪೋರ್ಟ್ಸ್ ಕ್ಲಬ್, ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಬೆಂಗಳೂರು ಹಾಗೂ ಚಿತ್ರದುರ್ಗ ಜಿಲ್ಲಾಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಸಹಯೋಗದೊಂದಿಗೆ ಮೂರು ದಿನಗಳ ಕಾಲ ನಗರದ ಹಳೆ ಮಾಧ್ಯಮಿಕ ಶಾಲಾಆವರಣದಲ್ಲಿ ನಡೆದ 25 ವರ್ಷದೊಳಗಿನ ರಾಜ್ಯ ಮಟ್ಟದ ಪುರುಷರ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ-2025 ಪ್ರೀಮಿಯರ್ಲೀಗ್ ಸೀಸನ್-4 ಫೈನಲ್ ಪಂದ್ಯ ವೀಕ್ಷಿಸಿ ಮಾತನಾಡಿದರು.ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಕಬಡ್ಡಿ ಪಂದ್ಯಾವಳಿಗೆ ಮೊದಲಿನಿಂದಲೂಸಹಕಾರ ನೀಡುತ್ತಿದ್ದಾರೆ. ಈ ಹಿಂದೆ ಚಿತ್ರದುರ್ಗದಲ್ಲಿ ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾವಳಿ ನಡೆದಿತ್ತು. ಮುರುಗೇಶ್ ಮತ್ತವರತಂಡದವರು ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾವಳಿಯನ್ನು ಅಚ್ಚುಕಟ್ಟಾಗಿ ಆಯೋಜಿಸಿರುವುದು ಅತ್ಯಂತ ಖುಷಿಯ ಸಂಗತಿ.
ಒಂದುಕಾಲದಲ್ಲಿ ಚಿತ್ರದುರ್ಗ ಕುಸ್ತಿಗೆ ಹೆಸರುವಾಸಿಯಾಗಿತ್ತು. ಈಗ ಕಬಡ್ಡಿಗೆ ಹೆಚ್ಚಿನ ಉತ್ತೇಜನ ನೀಡಲಾಗುತ್ತಿದೆ. ಕೇವಲ ಕ್ರಿಕೇಟಿಗಷ್ಟೆಆದ್ಯತೆ ನೀಡುವ ಬದಲು ಕಬಡ್ಡಿ ಪಟುಗಳಿಗೆ ಬೆಂಬಲ ಸಿಕ್ಕಾಗ ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರತಿಭೆಯನ್ನುಪ್ರದರ್ಶಿಸಲು ಸಹಾಯವಾಗಲಿದೆ ಎಂದರು.ಮಡಿವಾಳ ಜನಾಂಗದ ಜಿಲ್ಲಾಧ್ಯಕ್ಷ ಬಿ.ರಾಮಜ್ಜ, ಜಿಲ್ಲಾ ಕಾಂಗ್ರೆಸ್ ಕಿಸಾನ್ ವಿಭಾಗದ ಉಪಾಧ್ಯಕ್ಷ ಶಿವಲಿಂಗಪ್ಪ, ಕಬಡ್ಡಿಪ್ರಾಂಚೆಸಿಗಳಾದ ಚಂದ್ರಶೇಖರ್, ದೇವರಾಜ್ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಸುರೇಶ್‍ನಾಯ್ಕ, ವಕೀಲರುಗಳಾದ ಓ.ಪ್ರತಾಪ್‍ಜೋಗಿ, ಪ್ರಕಾಶ್ ಇನ್ನು ಅನೇಕರುವೇದಿಕೆಯಲ್ಲಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



