ಬೆಂಗಳೂರು: ಸಮಾಜ ತಿದ್ದುವ, ಜನರಿಗೆ ಆಶೀರ್ವಾದ ಮಾಡುವ ಕೆಲಸಮಠಾಧೀಶರದ್ದು. ಅದನ್ನು ಬಿಟ್ಟು ಸಿಎಂ ಬದಲಾವಣೆಯಂತಹ ರಾಜ ಕೀಯ ಬಗ್ಗೆ ಹೇಳಿಕೆ ನೀಡಬಾರದು. ಅದಕ್ಕೂ ಅವರಿಗೂ ಸಂಬಂಧವಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬುಧವಾರ ಸುದ್ದಿಗಾರರೊಂದಿಗೆ ಮಾತ ನಾಡಿ, ಒಪ್ಪಂದದ ಪ್ರಕಾರ ಡಿ.ಕೆ.ಶಿವಕುಮಾರ್ ಸಿಎಂ ಆಗಬೇಕು ಎಂದು ರಂಬಾಪುರಿ ಸ್ವಾಮೀಜಿ ಹೇಳಿಕೆ ನೀಡಿದ್ದಾರಲ್ಲಾ ಎಂಬ ಪ್ರಶ್ನೆಗೆ ಉತ್ತರಿಸಿ ಸಿಎಂ ಬದಲಾವಣೆ ವಿಚಾರ ಪಕ್ಷ, ಹೈಕ ಮಾಂಡ್ ಗೆ ಬಿಟ್ಟದ್ದು. ಇವರು ಹೇಳಿದಕ್ಕೆ ನಾಳೆ ಇನ್ಯಾರೋ ಸ್ವಾಮೀಜಿಗಳು ಮುಂದುವರೆಯಬೇಕೆಂದು ಎನ್ನಬಬಹುದು. ಹಾಗಾಗಿ ಸಿದ್ದರಾಮಯ್ಯ ಸ್ವಾಮೀಜಿಗಳು ಇಂತಹ ಹೇಳಿಕೆ ನೀಡಬಾರದ ಎಂದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



