ಮೌಲ್ಯಮಾಪನ ಪ್ರಾರಂಭಕ್ಕೆ 48 ಗಂಟೆ ಬಾಕಿ; ಫಲಿತಾಂಶ ಪ್ರಕಟಣೆಗೆ ಡೇಟ್ ಫೀಕ್ಸ್
ಚಿತ್ರದುರ್ಗ : ಎಸ್ ಎಸ್ ಎಲ್ ಸಿ ಪರೀಕ್ಷೆ ಯಶಸ್ವಿ ಬೆನ್ನಲ್ಲೇ ಪರೀಕ್ಷೆ ಬರೆದ ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನವು ಏಪ್ರಿಲ್ 5 ರಿಂದ ಏಪ್ರಿಲ್ 20ರವರೆಗೆ ರಾಜ್ಯಾದ್ಯಂತ ಏಕಕಾಲಕ್ಕೆ ನಡೆಯಲಿದೆ.
ಈ ಬಾರಿ ಸುಮಾರು 8.65 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಈ ಪೈಕಿ ಸುಮಾರು 8.50 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಪ್ರಾಥಮಿಕ ವರದಿಯ ಪ್ರಕಾರ ಶೇ. 2 ರಿಂದ 3 ರಷ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ಗೈರುಹಾಜರಾಗಿದ್ದಾರೆ.
ಪರೀಕ್ಷೆ-1ರಲ್ಲಿ ಉತ್ತೀರ್ಣರಾಗದ ಅಥವಾ ಅಂಕ ಸುಧಾರಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳಿಗಾಗಿ ನಡೆಸಲಾಗುವ ಪರೀಕ್ಷೆ-2 ಅನ್ನು ಮೇ 18 ರಿಂದ ಮೇ 25ರವರೆಗೆ ನಡೆಸಲು ಮಂಡಳಿಯು ನಿರ್ಧರಿಸಿದೆ. ಈ ಪರೀಕ್ಷೆಯ ಫಲಿತಾಂಶವು ಜೂನ್ 1ರಂದು ಪ್ರಕಟವಾಗುವ ಸಾಧ್ಯತೆಯಿದೆ.
ಶಿಕ್ಷಣ ಇಲಾಖೆಯ ವೇಳಾಪಟ್ಟಿಯಂತೆ ಏಪ್ರಿಲ್ 24ರಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಲಿದೆ. ವಿಷಯವಾರು ಸವಿಸ್ತಾರವಾದ ವೇಳಾಪಟ್ಟಿಯನ್ನು ಮಂಡಳಿಯು ಶೀಘ್ರದಲ್ಲೇ ಅಧಿಕೃತವಾಗಿ ಪ್ರಕಟಿಸಲಿದೆ.
