ಚನ್ನಪಟ್ಟಣ: ಸರ್ಕಾರ ರಾಜ್ಯದಲ್ಲಿ ಸಿಎಸ್‌ಆರ್‌ನಿಧಿಯಿಂದ 2000 ಪಬ್ಲಿಕ್ ಶಾಲೆ ನಿರ್ಮಿಸುವ ಸಂಕಲ್ಪ ಮಾಡಿದ್ದು, ರಾಜ್ಯದ ಎಲ್ಲಾ ಶಾಲೆಗಳಲ್ಲಿ ಹಳೇ ವಿದ್ಯಾರ್ಥಿಗಳ ಸಂಘವನ್ನು ಕಡ್ಡಾಯವಾಗಿ ರಚನೆ ಮಾಡಲು ಆದೇಶ ಹೊರಡಿಸಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ಸಲಹೆ ನೀಡಿದರು. ತಾಲೂಕಿನ ಹೊಂಗ ನೂರು ಗ್ರಾಮದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ. ಎಚ್.ಎಂ.ವೆಂಕಟಪ್ಪ ₹14 ಕೋಟಿ ವೆಚ್ಚದಲ್ಲಿ ಕಣ್ಣ ಫೌಂಡೇಷನ್‌ನಿಂದ ನಿರ್ಮಿಸಿರುವ ಚನ್ನಮ್ಮ ಮಂಚೇಗೌಡ ಕರ್ನಾಟಕ ಪಬ್ಲಿಕ್ ಶಾಲೆಯ ಕಟ್ಟಡ ಉದ್ಘಾಟಿಸಿ ಮಾತನಾಡಿದರು. ಸರ್ಕಾರಿ ಶಾಲೆಯಲ್ಲಿ ಓದಿ ಬೆಳೆದವರು ನೆರವು ನೀಡುತ್ತಾರೆ. ಹಳೇ ವಿದ್ಯಾರ್ಥಿಗಳ ಸಂಘಗ ಳಿಂದ ಶಕ್ತಿ ತುಂಬುವ ಕೆಲಸ ಆಗಲಿದ್ದು, ಅಗತ್ಯ ಮಾರ್ಗದರ್ಶನ ನೀಡುತ್ತೇನೆ ಎಂದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



