ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಶಾಸಕ ರಿಗೆಅನುದಾನನೀಡುತ್ತಾರೆಯೇ ಎಂಬುದನ್ನು ನೋಡಬೇಕು ಎಂದು ವಿಧಾನಪರಿಷತ್ ಸದಸ್ಯ ರಾಜೇಂದ್ರ ವ್ಯಂಗ್ಯವಾಗಿ ಹೇಳಿದ್ದಾರೆ. ರಾಜಣ್ಣಶಾಸಕರು, ಸಚಿವರೊಂದಿಗೆ ಸುರ್ಜೇವಾಲಾ ಸಭೆ ಕುರಿತಂತೆ ಸಚಿವ ಕೆ. ಎನ್.ರಾಜಣ್ಣ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ ಅವರ ಪುತ್ರ ಹಾಗೂ ವಿಧಾನ ಪರಿಷತ್ ಸದಸ್ಯ ರಾಜೇಂದ್ರ ಅವರು ಕೂಡ ಸುರ್ಜೇವಾಲಾ ಸಭೆ ಕುರಿತಂತೆ ಪರೋಕ್ಷವಾಗಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ರಾಜೇಂದ್ರ,ಸಹಜವಾಗಿ ಶಾಸಕರು ಸಮಸ್ಯೆಗಳಿದ್ದರೆ ಮುಖ್ಯಮಂತ್ರಿ ಮತ್ತು ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜತೆ ಚರ್ಚೆ ಮಾಡುತ್ತಾರೆ. ಅಲ್ಲದೆ, ಅವರಲ್ಲಿ ಅನುದಾನ ಕೇಳುವುದೂ ಸಹಜ. ಅದು ಹಿಂದಿನಿಂದಲೂ ನಡೆದು ಬಂದಿದೆ.ಈ ಬಾರಿ ಸುರ್ಜೇವಾಲಾ ಅವರು ಅಹವಾಲು ಸ್ವೀಕಾರ ಮಾಡುತ್ತಿದ್ದಾರೆ. ಇನ್ನು, ಸುರ್ಜೇವಾಲಾ ಅವರೊಂದಿಗೆ ಸಭೆಯಲ್ಲಿ ಪಾಲ್ಗೊಂಡ ಹಲವು ಹಿರಿಯ ಶಾಸಕರು ಅನುದಾಲಕ್ಕೆ ಬೇಡಿಕೆ ಇಟ್ಟಿದ್ದೇವೆ ಎಂದು ಹೇಳುತ್ತಿದ್ದಾರೆ. ಸುರ್ಜೇವಾಲಾ ಅವರು ಅನುದಾನ ಕೊಡುತ್ತಾರೆಯೇ? ಆದರೂ, ಸಭೆ ನಡೆದಿದೆ. ಮುಂದೆ ಇದು ಯಾವ ರೀತಿ ತಿರುಗುತ್ತೆ ನೋಡಬೇಕು ಎಂದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



