ಬೆಳಗಾವಿಯಲ್ಲಿ ಏಕಾಏಕಿ ಎದೆನೋವಿಂದ ಸೈನಿಕ ನಿಧನರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ಮುಂದುವರೆದಿದ್ದು, ಸಾವಿನ ಸಂಖ್ಯೆ ಏರು ತ್ತಲೇ ಇವೆ. ಶುಕ್ರವಾರ ಬೆಳಗಾವಿ, ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಹಾರ್ಟ್ ಅಟ್ಯಾಕ್ಗೆ ಮೃತ ಪಟ್ಟಿದ್ದಾರೆ. ಬೆಳಗಾವಿಯ ಅನಗೋಳದ ಬಹಾರ್ ನಿವಾಸಿ ಯೋಧ ಇಬ್ರಾಹಿಂ ದೇವ ಲಾಪುರ (37) ಅವರು ರಜೆಗೆಂದು ಊರಿಗೆ ಬಂದಿ ದ್ದರು. ಶುಕ್ರವಾರ ಬಜಾರ್ಗೆ ತೆರಳಿ ದ್ದಾಗ ವಿಕಾಸಕಿ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದು, ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ.ಧಾರವಾಡ ತಾಲೂಕಿನ ಮರೇವಾಡ ಗ್ರಾಮಪಂಚಾಯಿತಿ ಸಿಬ್ಬಂದಿರವಿ ಮಲ್ನಾಡ (35) ಶುಕ್ರವಾರ ಗ್ರಾಪಂನಲ್ಲಿ ಕೆಲಸಮುಗಿಸಿಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾಗ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಗದಗ ನಗರ ನಿವಾಸಿಯಾಗಿರುವ ತಾಲೂ ಕಿನಸೊರಟೂರು ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಪ್ರಭಾ ಕಲ್ಮಠ (49) ಅವರು ಶುಕ್ರವಾರ ಬೆಳಗ್ಗೆ ಕಾಲೇಜಿಗೆ ತೆರಳಲು ಸಿದ್ಧತೆ ನಡೆಸುತ್ತಿದ್ದಾರೆ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡಿದೆ. ತಕ್ಷಣವೇ ಮನೆಯಲ್ಲಿ ಕುಸಿದು ಬಿದ್ದಿದ್ದು, ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಕೊನೆ ಯುಸಿರೆಳೆದಿದ್ದಾರೆ. ಇನ್ನೂ ಹಾವೇರಿ ಜಿಲ್ಲೆ ರಾಣಿಬೆನ್ನೂರು ತಾಲೂಕಿನ ಕುಮಾರಪಟ್ಟಣ ಬಳಿಯ ಬಿರ್ಲಾ ಕಂಪನಿಯ ನೌಕರ ಚಳಗೇರಿಗ್ರಾಮದರಮೇಶಗೋದಮ್ಮನವರ (38) ಕರ್ತವ್ಯದ ವೇಳೆ ಹೃದಯಾಘಾತ ದಿಂದ ಸಾವಿಗೀಡಾಗಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



