ಜುಲೈ 25 ರಂದು ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ‘ಸು ಫ್ರಮ್ ಸೋ’ ಚಿತ್ರವು ಗಲ್ಲಾಪೆಟ್ಟಿಗೆಯಲ್ಲಿ ಭರ್ಜರಿ ಯಶಸ್ಸು ಕಾಣುತ್ತಾ ಸಾಗಿದೆ. ದಿನ ಕಳೆದಂತೆಯೂ ಪ್ರೇಕ್ಷಕರನ್ನು ಚಿತ್ರಮಂದಿರಗಳತ್ತ ಕರೆಸುವಲ್ಲಿ ಯಶಸ್ವಿಯಾಗಿದೆ. ಜೆಪಿ ತುಮಿನಾಡ್ ನಿರ್ದೇಶನದ ಈ ಚಿತ್ರವು ಕೆಲವೇ ಕನ್ನಡ ಚಿತ್ರಗಳು ಕಂಡ ದಾಖಲೆಯನ್ನು ಮುಟ್ಟಿದೆ. ಬಾಕ್ಸ್ ಆಫೀಸ್ನಲ್ಲಿ ಭಾರತದಲ್ಲಿ 100 ಕೋಟಿಗೂ ಹೆಚ್ಚು ಗಳಿಸಿರುವ ಸು ಫ್ರಮ್ ಸೋ ಚಿತ್ರವು ವಿದೇಶಿ ಪ್ರೇಕ್ಷಕರಿಗೂ ಮೆಚ್ಚುಗೆಯಾಗಿದೆ. ಚಿತ್ರ ವಿದೇಶಗಳಲ್ಲಿಯೂ 15 ಕೋಟಿ ಕಲೆಕ್ಷನ್ ಮಾಡಿದೆ.5.5 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಈ ಚಿತ್ರವು ಇದೀಗ 4 ಮಿಲಿಯನ್ಗಿಂತಲೂ ಹೆಚ್ಚು ಜನರನ್ನು ಆಕರ್ಷಿಸಿದೆ. ಕರ್ನಾಟಕದಲ್ಲಿಯೇ ₹80 ಕೋಟಿಗೂ ಹೆಚ್ಚು ಗಳಿಕೆ ಕಂಡಿದೆ. ಸದ್ಯ ಈ ಚಿತ್ರವು ರಾಜ್ಯದಾದ್ಯಂತ 225ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ತನ್ನ ಓಟವನ್ನು ಮುಂದುವರೆಸಿದೆ. ಕೂಲಿ ಮತ್ತು ವಾರ್ 2 ನಂತಹ ಬಿಗ್ ಬಜೆಟ್ ಚಿತ್ರಗಳು ತೆರೆಗೆ ಬಂದಾಗ 40 ಚಿತ್ರಮಂದಿರಗಳಲ್ಲಿ ಸು ಫ್ರಮ್ ಸೋ ಎತ್ತಂಗಡಿಯಾದರೂ, ಪ್ರೇಕ್ಷಕರ ಬೇಡಿಕೆಯು ಮತ್ತೆ 25 ಪರದೆಗಳಲ್ಲಿ ಪ್ರದರ್ಶನ ಕಾಣುವಂತೆ ಮಾಡಿದೆ.
ನಿರ್ಮಾಣದ ಜೊತೆಗೆ ರಾಜ್ ಬಿ ಶೆಟ್ಟಿ ಪ್ರಮುಖ ಪಾತ್ರದಲ್ಲಿಯೂ ನಟಿಸಿದ್ದು, ಜೆಪಿ ತುಮಿನಾಡ್, ಶನೀಲ್ ಗೌತಮ್, ಸಂಧ್ಯಾ ಅರಕೆರೆ, ಪ್ರಕಾಶ್ ತುಮಿನಾಡ್, ದೀಪಕ್ ರೈ ಪಣಾಜೆ, ಮೈಮ್ ಪ್ರಸಾದ್ ಮತ್ತು ಪುಷ್ಪರಾಜ್ ಬೋಳಾರ್ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಸುಮೇಧ್ ಕೆ ಅವರ ಸಂಗೀತ ಸಂಯೋಜನೆ ಮತ್ತು ಎಸ್ ಚಂದ್ರಶೇಖರನ್ ಅವರ ಛಾಯಾಗ್ರಹಣವಿದೆ.ಕರ್ನಾಟಕದಾಚೆಗೂ, ಸು ಫ್ರಮ್ ಸೋ ಚಿತ್ರಕ್ಕೆ ಬೇಡಿಕೆ ಕಂಡುಬಂದಿದ್ದು, ಗಂಗಾಧರ್ ವಿತರಿಸುತ್ತಿದ್ದಾರೆ. ಎಎ ಫಿಲ್ಮ್ಸ್ ಉತ್ತರ ಭಾರತದಲ್ಲಿ ಬಿಡುಗಡೆ ಮಾಡುತ್ತಿದ್ದರೆ, ದುಲ್ಕರ್ ಸಲ್ಮಾನ್ ಅವರ ವೇಫೇರರ್ ಫಿಲ್ಮ್ಸ್ ಮಲಯಾಳಂ ಆವೃತ್ತಿಯನ್ನು ಕೇರಳದಲ್ಲಿ ಬಿಡುಗಡೆ ಮಾಡಿದೆ. ಅಂತರರಾಷ್ಟ್ರೀಯವಾಗಿ, ಫಾರ್ಸ್ ಫಿಲ್ಮ್ಸ್ ಈ ಚಿತ್ರವನ್ನು ಬಹು ಮಾರುಕಟ್ಟೆಗಳಲ್ಲಿ ವಿತರಿಸುತ್ತಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







