ಬೆಂಗಳೂರು: ಲೈಂಗಿಕ ಕ್ರಿಯೆಗೆ ಒಪ್ಪದ ಯುವತಿಗೆ ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದ ಘಟನೆ ವೈಟ್ ಫೀಲ್ಡ್ನಲ್ಲಿರುವ (Whitefield) ಕೋ ಲಿವಿಂಗ್ ಪಿಜಿಯಲ್ಲಿ (Co-living PG) ನಡೆದಿದೆ.ಚಾಕು ಇರಿದ ಆರೋಪಿಯನ್ನು ಬಾಬು ಎಂದು ಗುರುತಿಸಲಾಗಿದೆ. ಈತ ಸಾಫ್ಟ್ವೇರ್ ಇಂಜಿನಿಯರ್ (Techie) ಆಗಿದ್ದು, ಮುದುವೆಯಾಗಿ ಮಗುವಿದೆ. ಆದರೂ ಒಬ್ಬನೇ ಪಿಜಿಯಲ್ಲಿ ವಾಸವಿದ್ದ. ಎರಡು ತಿಂಗಳ ಹಿಂದೆ ಅದೇ ಪಿಜಿಗೆ ಬಂದು ವಾಸವಿದ್ದ ಯುವತಿಯನ್ನು ಆರೋಪಿ ಪರಿಚಯ ಮಾಡಿಕೊಂಡಿದ್ದ. ಆಕೆಯ ಮೊಬೈಲ್ ನಂಬರ್ ಪಡೆದು ಫೋನ್ ಮಾಡಿ ಮಾತನಾಡುತ್ತಿದ್ದನಂತೆ. ಕಳೆದ ಮೂರು ದಿನದ ಹಿಂದೆ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಾನೆ. ಇದಕ್ಕೆ ಯುವತಿ ಒಪ್ಪದಿದ್ದಾಗ, ಆಕೆಯ ಖಾಸಗಿ ಫೋಟೊ ಇಟ್ಟುಕೊಂಡು 70 ಸಾವಿರ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ ಎಂದು ಆರೋಪಿಸಲಾಗಿದೆ.ಹಣಕ್ಕೆ ಬೇಡಿಕೆ ಇಟ್ಟಾಗ ಸ್ನೇಹಿತರ ಬಳಿ ಸಾಲ ಮಾಡಿ ಕೊಡುವುದಾಗಿ ಯುವತಿ ತಿಳಿಸಿದ್ದಳು. ಬಳಿಕ ಆಕೆಯ ಮೊಬೈಲ್ ಪಡೆದು 14 ಸಾವಿರ ರೂ. ಹಣ ತನ್ನ ಖಾತೆಗೆ ವರ್ಗಾಯಿಸಿಕೊಂಡಿದ್ದ. ಬಳಿಕ ಗಲಾಟೆ ಮಾಡಿ ಯುವತಿಯ ಬೆನ್ನಿಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದ.ಗಾಯಾಳು ಯುವತಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಆರೋಪಿಯನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







