ಹೈದರಾಬಾದ್: ತೆಲುಗು ಚಿತ್ರರಂಗದ ಹಿರಿಟ ನಟ ಕೋಟ ಶ್ರೀನಿವಾವಾಸ ರಾವ್ (83) ಅವರು ಇಂದು ವಿಧಿವಶರಾಗಿದ್ದಾರೆ.ಕಳೆದ ಕೆಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಹೈದರಾಬಾದ್ನಲ್ಲಿರುವ ತಮ್ಮ ನಿವಾಸದಲ್ಲಿಯೇ ಇಂದು ಮುಂಜಾನೆ 4 ಗಂಟೆಗೆ ಕೊನೆಯುಸಿರೆಳೆದಿದ್ದಾರೆ.ಹ ರಿಯ ನಟ ವಯೋಸಹಜ ಕಾಯಿಲೆ ಹಾಗೂ ಸಮಸ್ಯೆಯಿಂದ ಬಳಲುತ್ತಿದ್ದರು. ಕಳೆದ ಕೆಲವು ದಿನಗಳಿಂದ ಅವರಿಗೆ ನಡೆಯಲು ಸಾಧ್ಯವಾಗುತ್ತಿರಲಿಲ್ಲ.
ಕೋಟ ಶ್ರೀನಿವಾಸ ರಾವ್ ಜುಲೈ 10, 1942 ರಂದು ಕೃಷ್ಣ ಜಿಲ್ಲೆಯ ಕಂಕಿಪಡುವಿನಲ್ಲಿ ಜನಿಸಿದರು. 4 ದಶಕಗಳ ಕಾಲ ಚಿತ್ರೋದ್ಯಮಕ್ಕೆ ಸೇವೆ ಸಲ್ಲಿಸಿದ ಅವರು, ತಮ್ಮ ವೃತ್ತಿಜೀವನದಲ್ಲಿ ಹಲವು ವಿಶಿಷ್ಟ ಪಾತ್ರಗಳನ್ನು ನಿರ್ವಹಿಸಿದ್ದಾರೆ. ರಂಗಭೂಮಿಯ ಹಿನ್ನಲೆಯಿಂದ ಬಂದ ಶ್ರೀನಿವಾಸ ರಾವ್, ಹಲವು ವರ್ಷಗಳ ಕಾಲ ಚಿತ್ರಪ್ರೇಮಿಗಳಿಗೆ ಮನರಂಜನೆಯ ರಸದೌತಣ ನೀಡಿದ್ದಾರೆ.1978ರಲ್ಲಿ ‘ಪ್ರಾಣಂ ಖರೀಧು’ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಇವರು, ತಮಿಳು, ಹಿಂದಿ ಮತ್ತು ಕನ್ನಡ, ಮಲಯಾಳಂ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಇಲ್ಲಿಯವರೆಗೆ 750ಕ್ಕೂ ಹೆಚ್ಚು ಚಿತ್ರಗಳಲ್ಲಿ ಅವರು ನಟಿಸಿದ್ದಾರೆ.
ಕೋಟ ಶ್ರೀನಿವಾಸ ರಾವ್ ಅವರ ಪತ್ನಿ ರುಕ್ಮಿಣಿ. ದಂಪತಿಗೆ ಇಬ್ಬರು ಹೆಣ್ಣುಮಕ್ಕಳು ಮತ್ತು ಒಬ್ಬ ಮಗನಿದ್ದಾರೆ. ಕೋಟ ಶ್ರೀನಿವಾಸ್ ಅವರ ಮಗ ಕೋಟ ವೆಂಕಟ ಆಂಜನೇಯ ಪ್ರಸಾದ್ ಅವರು ಚಿತ್ರರಂಗಕ್ಕೆ ಪ್ರವೇಶಿಸುವ ಹಂತದಲ್ಲಿದ್ದಾಗ ಅಪಘಾತದಲ್ಲಿ ಪ್ರಾಣ ಕಳೆದುಕೊಂಡರು. ಮಗನ ಅಕಾಲಿಕ ಮರಣದಿಂದ ಅವರು ತೀವ್ರ ಆಘಾತಕ್ಕೊಳಗಾಗಿದ್ದರು. ಶ್ರೀನಿವಾಸ ರಾವ್ ಅವರ ಕಿರಿಯ ಸಹೋದರ ಶಂಕರ್ ರಾವ್ ಕೂಡ ಒಬ್ಬ ನಟ.
ಕೋಟ ಶ್ರೀನಿವಾಸ್ ರಾವ್ ಅವರು ಕೇವಲ ನಟರಲ್ಲ. ರಾಜಕೀಯಕ್ಕೂ ಪ್ರವೇಶಿಸಿ ಯಶಸ್ಸು ಕಂಡಿದ್ದರು. 1999ರಿಂದ 2004ರವರೆಗೆ ವಿಜಯವಾಡ ಪೂರ್ವ ಕ್ಷೇತ್ರದ ಶಾಸಕರಾಗಿ ಸೇವೆ ಸಲ್ಲಿಸಿದ್ದರು. ಕನ್ನಡದ ಲೇಡಿ ಕಮಿಷನರ್, ರಕ್ತ ಕಣ್ಣೀರು, ಲವ್, ನಮ್ಮ ಬಸವ, ನಮ್ಮಣ್ಣ, ಶ್ರೀಮತಿ, ಕಬ್ಜಾ ಮುಂತಾದ ಸಿನಿಮಾಗಳಲ್ಲಿ ಅವರು ನಟಿಸಿದ್ದರು.ಹಿರಿಯ ನಟನ ಅಗಲಿಕೆ ಸುದ್ದಿ ತಿಳಿದು ಟಾಲಿವುಡ್ ಚಿತ್ರರಂಗ, ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸೇರಿದಂತೆ ಹಲವಾರು ಗಣ್ಯರು ಹಾಗೂ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ,
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



