ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಒಂದು ವೈದ್ಯಕೀಯ ಕಾಲೇಜು, ಆಸ್ಪತ್ರೆ ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಒದಗಿಸುವುದು ಸರಕಾರದ ಯೋಜನೆಯಾಗಿದೆ. ಈ ನಿಟ್ಟಿನಲ್ಲಿ ಈಗಾಗಲೇ 22 ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜುಗಳನ್ನು ಆರಂಭಿಸಲಾಗಿದೆ. ಉಳಿದ ಕಡೆಗಳಲ್ಲೂ ಶೀಘ್ರ ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಬೆಳಗಾವಿಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಕಟ್ಟಡ, ಗೃಹವೈದ್ಯರ ವಸತಿ ನಿಲಯ ನಿರ್ಮಾಣಕ್ಕೆ ಶಿಲಾನ್ಯಾಸ, ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಿಸಲಾಗಿರುವ ನಗರ ಬಸ್ ನಿಲ್ದಾಣ ಹಾಗೂ ರಾಣಿ ಚೆನ್ನಮ್ಮ ವಿಶ್ವವಿದ್ಯಾನಿಲಯದ ಪಿಎಂ-ಉಷಾ(ಮೇರು) ಕಟ್ಟಡ ಕಾಮಗಾರಿಗಳು ಮತ್ತು ಹೆದ್ದಾರಿಯಿಂದ ವಿಶ್ವವಿದ್ಯಾನಿಲಯದ ರಸ್ತೆ ನಿರ್ಮಾಣ ಕಾಮಗಾರಿಗೆ ಶನಿವಾರ(ಅ.4) ಬಿಮ್ಸ್ ಆವರಣದಲ್ಲಿ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರುಕಾರಣಾಂತರಗಳಿಂದ ಕುಂಟುತ್ತ ಸಾಗಿದ್ದ ಬಿಮ್ಸ್ ಆಸ್ಪತ್ರೆಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಿ ಇದೀಗ ಆರಂಭಿಸಲಾಗಿದೆ. ಹಂತ ಹಂತವಾಗಿ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಯನ್ನು ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.ಕೆ.ಎಲ್.ಇ. ಸಂಸ್ಥೆಯಿಂದ ವೈದ್ಯರನ್ನು ನಿಯೋಜಿಸಿ ಉಚಿತ ಸೇವೆ ಒದಗಿಸಿರುವುದರಿಂದ ಸರಕಾರದ ವತಿಯಿಂದ ಧನ್ಯವಾದಗಳನ್ನು ತಿಳಿಸಿದರು.
ಬಡವರು, ತಳ ಸಮುದಾಯದ ಜನರಿಗೆ ಹಾಗೂ ಅಸಮಾನತೆ ನಿರ್ಮೂಲನೆ ಮಾಡಲು ಅವಕಾಶ ವಂಚಿತರಿಗೆ ಉತ್ತಮ ಸೌಲಭ್ಯ ಒದಗಿಸುವುದು ಸರಕಾರದ ಆದ್ಯತೆಯಾಗಿದೆ. ಸಮ ಸಮಾಜ ನಿರ್ಮಾಣಕ್ಕಾಗಿ ಬುದ್ಧ, ಬಸವ, ಅಂಬೇಡ್ಕರ್ ಹಾಗೂ ಗಾಂಧೀಜಿಯವರು ಸಮಾಜದ ಕಟ್ಟಕಡೆಯ ಜನರನ್ನು ಸ್ವಾವಲಂಬಿಯಾಗಿಸಬೇಕು ಎಂಬುದಕ್ಕೆ ಶ್ರಮಿಸಿದವರು.ಅಸಮಾನತೆ ತೊಡೆದು ಹಾಕಲು ಸರಕಾರ ಅನೇಕ ಕಾರ್ಯಕ್ರಮಗಳನ್ನು ರೂಪಿಸಿದೆ. ಬಡವರಿಗೆ ಅತ್ಯುತ್ತಮ ವೈದ್ಯಕೀಯ ಸೌಲಭ್ಯ ಒದಗಿಸುವುದು ಸರಕಾರದ ಜವಾಬ್ದಾರಿ ಮತ್ತು ಕರ್ತವ್ಯವಾಗಿದೆ.ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಲಕ್ಷಾಂತರ ಜನರಿಗೆ ನೆರವು ನೀಡಲಾಗುತ್ತಿದ್ದು, ಇಂತಹ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆಯಿಂದ ಉಚಿತವಾಗಿ ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ. ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬೇಕು.
ಬೆಳಗಾವಿ ನಗರಕ್ಕೆ ನೂರು ಎಲೆಕ್ಟ್ತಿಕ್ ಬಸ್:
ಸ್ಮಾರ್ಟ್ ಸಿಟಿ ಯೋಜನೆಯಡಿ ಬೆಳಗಾವಿ ನಗರ ಬಸ್ ನಿಲ್ದಾಣ ನಿರ್ಮಿಸಲಾಗಿದೆ. ಶೀಘ್ರದಲ್ಲಿಯೇ ಒಂದು ನೂರು ಎಲೆಕ್ಟ್ರಿಕ್ ಬಸ್ ಗಳನ್ನು ಬೆಳಗಾವಿ ನಗರಕ್ಕೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಶಿಕ್ಷಣವೇ ಶಕ್ತಿ. ಶಿಕ್ಷಣದಿಂದ ಸ್ವತಂತ್ರರಾಗಲು ಸಾಧ್ಯ. ಆದ್ದರಿಂದ ದಲಿತರು, ಹಿಂದುಳಿದವರು ಉನ್ನತ ಶಿಕ್ಷಣ ಪಡೆದುಕೊಳ್ಳಬೇಕು ಎಂಬುದು ಸರಕಾರದ ಆಶಯವಾಗಿದೆ.ಈ ನಿಟ್ಟಿನಲ್ಲಿ ವಿಶ್ವವಿದ್ಯಾಲಯಗಳಿಂದ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.ಬಡವರ ಅನುಕೂಲಕ್ಕಾಗಿ ಹಿಂದಿನ ಸರಕಾರದ ಅವಧಿಯಲ್ಲಿ ಅನೇಕ ಭಾಗ್ಯ ಯೋಜನೆಗಳನ್ನು ಜಾರಿಗೆ ತರಲಾಗಿತ್ತು. ಈ ಬಾರಿ ಗ್ಯಾರಂಟಿ ಯೋಜನೆಗಳ ಮೂಲಕ ಬಡವರ ಸ್ವಾವಲಂಬನೆ ಮತ್ತು ಆರ್ಥಿಕಾಭಿವೃದ್ಧಿಗೆ ಅವಕಾಶ ಕಲ್ಪಿಸಲಾಗಿದೆ.
ಬೆಳೆಹಾನಿ ಸಮೀಕ್ಷೆ ಬಳಿಕ ಪರಿಹಾರ:
ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದಲ್ಲಿ ಅತಿವೃಷ್ಟಿಯಿಂದ ಅಪಾರ ಪ್ರಮಾಣದ ಬೆಳೆಹಾನಿಯಾಗಿದೆ. ರಾಜ್ಯದಲ್ಕಿ ಹತ್ತು ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಹಾನಿಯಾಗಿರುತ್ತದೆ. ಖುಷ್ಕಿ ಬೆಳೆಹಾನಿ 8.5 ಸಾವಿರ ಪರಿಹಾರದಂತೆ ಹಾಗೂ ಎನ್.ಡಿ.ಆರ್.ಎಫ್. ಮಾರ್ಗಸೂಚಿ 8.5 ಸಾವಿರ ಸೇರಿಸಿ ಒಟ್ಟು 17 ಸಾವಿರ ಪರಿಹಾರನೀಡಲಾಗುತ್ತಿದೆ.ನೀರಾವರಿ ಬೆಳೆಹಾನಿಗೆ 21,500 ರೂಪಾಯಿ ಪರಿಹಾರ ನೀಡಲು ನಿರ್ಧರಿಸಲಾಗಿದೆ. ಇನ್ನೂ ಅನೇಕ ಕಡೆ ಮಳೆಯಾಗುತ್ತಿದ್ದು, ಬೆಳೆಹಾನಿ ಸಮೀಕ್ಷೆ ಬಳಿಕ ಪರಿಹಾರ ವಿತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







