ಬೆಂಗಳೂರು: ಕರ್ನಾಟಕ ಸಿಎಂ ಸಿದ್ದರಾಮಯ್ಯ ಸಂಪುಟದಿಂದ ಕೆ. ಎನ್ ರಾಜಣ್ಣ ವಜಾಗೊಂಡ ಬಳಿಕ ಮೊದಲ ಪ್ರತಿಕ್ರಿಯೆ ನೀಡಿದ್ದು, ತಮ್ಮ ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ ಎಂದು ಹೇಳಿದ್ದಾರೆ.ಮತಕಳವು ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಭಿಯಾನದ ವಿರುದ್ಧ ಹೇಳಿಕೆ ಕೊಟ್ಟ ಕೆಎನ್ ರಾಜಣ್ಣ ತಲೆ ದಂಡ ಆಗಿದ್ದು, ಸಂಪುಟದಿಂದ ಕೆಎನ್ ರಾಜಣ್ಣ ಅವರನ್ನು ವಜಾ ಮಾಡಲಾಗಿದೆ. ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ್ದು ವ್ಯಾಪಕ ರಾಜಕೀಯ ಚರ್ಚೆಗೆ ಕಾರಣವಾಗಿದೆ.
ಇನ್ನು ತಮ್ಮ ವಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆಎನ್ ರಾಜಣ್ಣ ಪ್ರತಿಕ್ರಿಯೆ ನೀಡಿದ್ದು, ‘ನಿಮ್ಮ ಮುಂದೆ ಮಾಜಿ ಸಚಿವನಾಗಿ ಮಾತಾಡುತ್ತಿದ್ದೇನೆ. ಆದರೆ ನನ್ನ ವಜಾ ಹಿಂದೆ ಅತೀ ದೊಡ್ಡ ಷಡ್ಯಂತ್ರ ಅಡಗಿದೆ. ಈ ಪಿತೂರಿ, ಷಡ್ಯಂತ್ರದ ಹಿಂದೆ ಯಾರೆಲ್ಲಾ ಇದ್ದಾರೆ, ಏನು ಮಾಡಿದ್ದಾರೆ ಅನ್ನೋದು ಗೊತ್ತು.ನನ್ನ ಬಳಿ ಇರುವ ಈ ಷಡ್ಯಂತ್ರ ವಿವರಗಳನ್ನು ಮುಂದಿನ ದಿನಗಳಲ್ಲಿ ತಿಳಿಸುತ್ತೇನೆ. ರಾಜ್ಯಪಾಲರ ಕಚೇರಿಯಿಂದ ವಜಾಗೊಳಿಸಿರುವ ಡ್ರಾಫ್ಟ್ ಬಂದಿರುವ ಮಾಹಿತಿ ಇದೆ. ಇದು ಹೈಕಮಾಂಡ್ ನಿರ್ಧಾರವಾಗಿದೆ. ಪಕ್ಷ ತೆಗೆದುಕೊಂಡ ನಿರ್ಧಾರಕ್ಕೆ ಬದ್ಧನಾಗಿದ್ದೇನೆ ಎಂದು ಹೇಳಿಕೆ ನೀಡಿದ್ದಾರೆ.ಮಾಜಿ ಸಚಿವ ಎಂದು ಕರೆಯಿಸಿಕೊಳ್ಳುವುದಕ್ಕೆ ನನಗೆ ಸಂತೋಷವಾಗುತ್ತಿದೆ. ನನಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವಕಾಶ ಕೊಟ್ಟಿದ್ದರು. ಈ ಸಂದರ್ಭದಲ್ಲಿ ಎಲ್ಲಾ ಸಚಿವರ ಜೊತೆ ಸೇರಿ ಮುಖ್ಯಮಂತ್ರಿಗಳಿಗೆ ಧನ್ಯವಾದ ತಿಳಿಸಿದ್ದೇನೆ ಎಂದು ಕೆಎನ್ ರಾಜಣ್ಣ ಹೇಳಿದ್ದಾರೆ.
ರಾಹುಲ್ ಗಾಂಧಿಗೆ ತಪ್ಪು ಗ್ರಹಿಕೆ ಆಗಿದೆ
ಇದೇ ವೇಳೆ ‘ನನ್ನ ಹೇಳಿಕೆ, ನನ್ನ ಬಗ್ಗೆ ರಾಹುಲ್ ಗಾಂಧಿಗೆ ತಪ್ಪು ಗ್ರಹಿಕೆ ಆಗಿದೆ. ಆಗಿರುವ ತಪ್ಪು ಗ್ರಹಿಕೆಯನ್ನು ನಿವಾರಿಸುವ ಪ್ರಯತ್ನ ಮಾಡುತ್ತೇನೆ. ನಾನೇ ಖುದ್ದು ದೆಹಲಿಗೆ ತೆರಳಿ ರಾಹುಲ್ ಗಾಂಧಿಗೆ ಮನವರಿಕೆ ಮಾಡುವ ಪ್ರಯತ್ನ ಮಾಡುತ್ತೇನೆ. ಸದ್ಯ ಏನೇ ಮಾತನಾಡಿದರೂ ತಪ್ಪು ಸಂದೇಶ ಹೋಗಬಾರದು. ನಾವು ಪಕ್ಷಕ್ಕೆ ಬದ್ಧರಾಗಿದ್ದೇವೆ. ರಾಹುಲ್ ಗಾಂಧಿ ನಮ್ಮ ನಾಯಕರು ಎಂದು ಕೆಎನ್ ರಾಜಣ್ಣ ಹೇಳಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







