ಬೆಂಗಳೂರು ರಾಜಕೀಯದ ಏರುಪೇರುಗಳು ನನಗೆ ಹೊಸದಲ್ಲ. ಅಭಿಮಾನಿಗಳು, ಬೆಂಬಲಿಗರು ಯಾವುದೇ ಕಾರಣಕ್ಕೂ ಅತಿರೇಕದಲ್ಲಿ ತಪ್ಪು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಮನವಿ ಮಾಡಿದ್ದಾರೆ. ಸಂಪುಟದಿಂದ ವಜಾಗೊಂಡ ಹಿನ್ನೆಲೆಯಲ್ಲಿ ಬೆಂಬಲಿಗರೊಬ್ಬರು ಮೈಮೇಲೆ ಪೆಟ್ರೋಲ್ ಸುರಿದುಕೊಂಡ ಹಿನ್ನೆಲೆಯಲ್ಲಿ ‘ಫೇಸ್ಬುಕ್’ನಲ್ಲಿ ಪೋಸ್ಟ್ ಹಾಕಿರುವ ‘ರಾಜಕೀಯ ರಾಜಣ್ಣ, ಏರುಪೇರುಗಳು ನನಗೆ ಹೊಸದಲ್ಲ. ಎಂದೂ ಧೃತಿಗೆಟ್ಟವನಲ್ಲ. ಯಾವುದೇ ಕಾರಣಕ್ಕೂಅಭಿಮಾನಿಗಳು, ಬೆಂಬಲಿಗರು ಅತಿ ರೇಕದಲ್ಲಿ ತಪ್ಪು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು’ ಎಂದಿದ್ದಾರೆ.ಯುವಕರು ಈ ರೀತಿ ಮಾಡಿಕೊಂಡಿರುವುದು ದುಃಖ ತಂದಿದೆ. ನಿಮ್ಮ ಕುಟುಂಬದವರು ಕಾಯುತ್ತಿರುತ್ತಾರೆ.ನಿಮ್ಮ ಪ್ರೀತಿ, ಅಭಿಮಾನ ಎಂಬುದನ್ನು ಕಣ್ಣಾರೆ ಕಂಡಿದ್ದೇನೆ. ಹಾಗಾಗಿ, ತಪ್ಪು ನಿರ್ಧಾರ ಮಾಡಬೇಡಿ ಎಂದಿದ್ದಾರೆ.ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡುವಂತಹ ಪ್ರಯತ್ನ ಮಾಡಬೇಡಿ. ಸಿಎಂ ಸಿದ್ದರಾಮಯ್ಯ, ಕೈ ಬಲಪಡಿಸುವ ಕಡೆಗೆ ನಮ್ಮ ಚಿಂತನೆ ಇರಲಿ ಎಂದು ಕೋರಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







