ಚಳ್ಳಕೆರೆ: ಮಳೆಗಾಗಿ ಪ್ರಾರ್ಥಿಸಿ ಚಳ್ಳಕೆರೆ ತಾಲ್ಲೂಕಿನ ಹುಲಿಕುಂಟೆ ಗೊಲ್ಲರಹಟ್ಟಿ ಗ್ರಾಮದಲ್ಲಿ ಕತ್ತೆಗಳಿಗೆ ಮಾಡುವೆ ಮಾಡುವ ಮೂಲಕ ವಿಶೇಷ ಪೂಜೆ ಸಲ್ಲಿಸಿ ವರುಣನಿಗಾಗಿ ಪ್ರಾರ್ಥನೆ ಸಲ್ಲಿಸಿ, ಪ್ರಮುಖ ಬೀದಿಯಲ್ಲಿ ತಮಟೆ ವಾದ್ಯ ಹಾಗೂ ಹುರುಮೇ ವಾದ್ಯಗಳೊಂದಿಗೆ ಮೆರವಣಿಗೆ ನಡೆಸಿದರು.ಮಳೆಗಾಲ ಪ್ರಾರಂಭವಾಗಿ ಮೂರು ತಿಂಗಳಾದರೂ ಮಳೆ ಬಾರದ ಹಿನ್ನೆಲೆಯಲ್ಲಿ ಬಿತ್ತನೆ ಮಾಡಲಾಗಿರುವ ಅಲ್ಪ ಸ್ವಲ್ಪ ಬೆಳೆಯುವ ಒಣಗುತ್ತಿದೆ. ಇದರಿಂದಾಗಿ ಈ ಭಾಗದಲ್ಲಿ ಇರುವಂತ ಜಾನುವಾರುಗಳಿಗೆ ಮೇವಿನ ಕೊರತೆ ನೀರಿನ ಕೊರತೆ ಉದ್ಭವ ಆಗುತ್ತದೆ. ಆದ್ದರಿಂದ ಈ ಮೂಲಕವಾದರೂ ಮಳೆ ಬಂದು ಉಳಿದ ಅಲ್ಪ ಸ್ವಲ್ಪ ಬೆಳೆಯಾಗಲಿ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗದಿರಲಿ ಎನ್ನುವ ಉದ್ದೇಶದಿಂದ ಹಿರಿಯರ ಮಾತಿನಂತೆ ಇಂದು ಕತ್ತೆಗಳಿಗೆ ಹೂವಿನ ಹಾರ ಹಾಕಿ ವಿಶೇಷ ಪೂಜೆ ಸಲ್ಲಿಸಿ ನಂತರ ವಾದ್ಯಗಳೊಂದಿಗೆ ಗ್ರಾಮದಲ್ಲಿ ಮೆರವಣಿಗೆ ಮಾಡಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



