ಚಿತ್ರದುರ್ಗ ಜೂ. 27
ಮಲೆ ಮಾದೇಶ್ವರ ಅರಣ್ಯ ಪ್ರದೇಶದಲ್ಲಿ ಐದು ಹುಲಿಗಳ ಮಾರಣ ಹೋಮ ನಡೆದಿದೆ ಇದಕ್ಕೆ ಯಾರು? ಹೊಣೆ, ಸರ್ಕಾರ ಶೀಘ್ರವೇಉತ್ತರ ಕೊಡಬೇಕಿದೆ ಎಂದು ಬಿಜೆಪಿ ಮುಖಂಡರಾದ ಮಂಜುಳಾ ಸ್ವಾಮಿಯವರು ಆಗ್ರಹಿಸಿದ್ದಾರೆ.ಈ ಬಗ್ಗೆ ಹೇಳೀಕೆಯನ್ನು ನೀಡಿರುವ ಭಾರತ ದೇಶದಲ್ಲಿ ಹುಲಿಗಳ ಸಂಖ್ಯೆ ಕಡಿಮೆಯಾಗುತ್ತಲೇ ಇದೆ ಇದರ ನಡುವೆ ಐದು ಹುಲಿಗಳು
ಪ್ರಾಣ ಬಿಟ್ಟಿವೆ. ಇದಕ್ಕೆ ಕಾಂಗ್ರೆಸ್ ಸರ್ಕಾರದ ವೈಫಲ್ಯಾವೆ ಹೊರತು ಬೇರೆ ಏನು ? ಅಲ್ಲ, ಮಲೆ ಮಾದೇಶ್ವರ ಅರಣ್ಯ ಪ್ರದೇಶದ
ಅಧಿಕಾರಿಗಳ ನಿರ್ಲಕ್ಷತನದಿಂದ ಕಾಡು ಕಳ್ಳರು ಹುಲಿಗಳನ್ನ ಕೊಲೆ ಮಾಡಿದ್ದಾರೆ. ಮಲೆ ಮಾದೇಶ್ವರ ಅರಣಪ್ರದೇಶದಲ್ಲಿನ ಅರಣ್ಯಅಧಿಕಾರಿಗಳು ಕೆಲಸ ಮಾಡದೆ ಅಲ್ಲಿನ ಮರಗಳನ್ನು ಸಹ ಮಾರಿಕೊಳ್ಳುತ್ತಿದ್ದಾರೆ. ಇದರ ನಡುವೆ 5 ಹುಲಿಗಳನ್ನು ಕೊಲ್ಲುವುದಕ್ಕೆಇವರು ನೇರ ಕಾರಣರಾಗಿದ್ದಾರೆ. ಕಾಂಗ್ರೆಸ್ ಸರ್ಕಾರದ ಅರಣ್ಯ ಸಚಿವರಾದ ಈಶ್ವರ ಖಂಡ್ರೆ ಇದರ ಬಗ್ಗೆ ಸೂಕ್ತ ತನಿಖೆಯನ್ನು ನಡೆಸಿತಪ್ಪಿತಸ್ಥ ಅಧಿಕಾರಿಗಳನ್ನು ಕೆಲಸದಿಂದ ವಜಾಗೊಳಿಸಬೇಕು ಹಾಗೂ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ, ಅಳಿದುಹೋಗುತ್ತಿರುವ ಹುಲಿಗಳ ಸಂರಕ್ಷಣೆಯನ್ನು ಮಾಡಬೇಕಾಗಿದೆ ಎಂದು ಬಿಜೆಪಿ ಮುಖಂಡ ಮಂಜುಳಾ ಸ್ವಾಮಿಯವರುಒತ್ತಾಯಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



