ಹೊಳಲ್ಕೆರೆ : ಒಂದು ಮನೆ ಕಟ್ಟಿಕೊಳ್ಳಲು ಏಳು ಲಕ್ಷ ರೂ.ಗಳನ್ನು ನೀಡಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಇದರಿಂದ ಬಡವರಿಗೆಅನುಕೂಲವಾಗುತ್ತದೆಂದು ಶಾಸಕಡಾ.ಎಂ.ಚಂದ್ರಪ್ಪ ತಿಳಿಸಿದರು.ತಾಲ್ಲೂಕಿನ ಆರ್.ಗೊಲ್ಲಹಳ್ಳಿ ಗ್ರಾಮದಲ್ಲಿ 1.31 ಕೋಟಿ ರೂ.ವೆಚ್ಚದಲ್ಲಿ ಕೆರೆ ಅಭಿವೃದ್ದಿ ಕಾಮಗಾರಿ ಮತ್ತು ನೂತನ ಆಶ್ರಯ ಬಡಾವಣೆನಿರ್ಮಾಣ ಕಾಮಗಾರಿಗೆ ಬುಧವಾರ ಭೂಮಿ ಪೂಜೆ ಸಲ್ಲಿಸಿ ಮಾತನಾಡಿದರು.
ಎರಡು ಚೆಕ್‍ಡ್ಯಾಂಗಳನ್ನು ಕಟ್ಟಿಸಿದ್ದೇನೆ. ರೈತರಿಗೆ ವಿದ್ಯುತ್ ತೊಂದರೆಯಾಗಬಾರದೆಂದು 23 ಕೋಟಿ ರೂ.ಗಳನ್ನು ಖರ್ಚು ಮಾಡಿವಿದ್ಯುತ್ ಪವರ್ ಸ್ಟೇಷನ್ ನಿರ್ಮಾಣ ಮಾಡಿದ್ದೇನೆ. ತಾಲ್ಲೂಕಿನಾದ್ಯಂತ ಪ್ರತಿ ಮನೆಗೆ ಶುದ್ದ ಕುಡಿಯುವ ನೀರು ಪೂರೈಸುವುದಕ್ಕಾಗಿಹಿರಿಯೂರಿನ ವಾಣಿವಿಲಾಸಸಾಗರದಿಂದ ನೀರು ತರಲು 367 ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ. ಡಿಸೆಂಬರ್ ಒಳಗೆ ನೀರುನೀಡಲಾಗುವುದು. ಇದರಿಂದ ಇನ್ನು ಐವತ್ತು ವರ್ಷಗಳ ಕಾಲ ನೀರಿನ ಸಮಸ್ಯೆಯಿರುವುದಿಲ್ಲ ಎಂದರು.
ಅಪ್ಪರ್‍ಭದ್ರಾ ಯೋಜನೆಯಿಂದ ತಾಲ್ಲೂಕಿನ 37 ಕೆರೆಗಳಿಗೆ ನೀರು ತುಂಬಿಸಲಾಗುವುದು. ಸಣ್ಣ ಗಲಾಟೆಗಳೇನಾದರೂ ನಡೆದರೆ
ಎಲ್ಲರನ್ನು ಸಮಾಧಾನಪಡಿಸಿ ಯಾರನ್ನು ಪೊಲೀಸ್ ಠಾಣೆ, ನ್ಯಾಯಾಲಯಕ್ಕೆ ಅಲೆದಾಡಲು ಬಿಟ್ಟಿಲ್ಲ. ಯಾರು ನಿಮ್ಮ ಕಷ್ಟ-ಸುಖ ಕೇಳಿ ಸಹಾಯ ಮಾಡುತ್ತಾರೆನ್ನುವುದನ್ನು ಮನದಲ್ಲಿಟ್ಟುಕೊಂಡು ಅಂತಹವರಿಗೆ ಚುನಾವಣೆಯಲ್ಲಿ ಮತ ನೀಡಿ ಗೆಲ್ಲಿಸಿ ಎಂದು ಶಾಸಕಡಾ.ಎಂ.ಚಂದ್ರಪ್ಪ ಜನತೆಯಲ್ಲಿ ಮನವಿ ಮಾಡಿದರು.ಸಿ.ಸಿ. ರಸ್ತೆ ಮಾಡಿ ನಿವೇಶನ ಕೊಟ್ಟು ಮನೆಗಳನ್ನು ಕಟ್ಟಿಸಿಕೊಡಲಾಗುವುದು. ಎನ್.ಜಿ.ಹಳ್ಳಿ ಗೇಟ್‍ನಿಂದ ಹಿಡಿದು ಚನ್ನಗಿರಿವರೆಗೆರಾಜ್ಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸುತ್ತೇನೆ. ಗಿಲಿಟ್ ಮಾತುಗಳನ್ನಾಡಿ ನಿಮ್ಮ ದಾರಿ ದಿಕ್ಕು ತಪ್ಪಿಸುವವರ ವಿರುದ್ದಎಚ್ಚರಿಕೆಯಿಂದಿರಿ ಎಂದು ಹೇಳಿದರು.ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಪಂಚಣ್ಣ, ಗೌಡ್ರು ಶ್ರೀನಿವಾಸ್, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಜಯಪ್ಪ,ಪಾಂಡುರಂಗಪ್ಪ, ಈರಪ್ಪ, ರಂಗಸ್ವಾಮಿ ಹಾಗೂ ಗ್ರಾಮದ ಮುಖಂಡರುಗಳು ಈ ಸಂದರ್ಭದಲ್ಲಿ ಹಾಜರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



