ಅಮೆರಿಕ ದೇಶದ ಶಿಕ್ಷಣ ಕ್ಷೇತ್ರದಲ್ಲಿನ ವಿನೂತನ ಯೋಜನೆಗಳು ಹಾಗೂ ಆರೋಗ್ಯ ಕ್ಷೇತ್ರದಲ್ಲಿನ ಅತ್ಯಾಧುನಿಕ ತಂತ್ರಜ್ಞಾನ ಅಳವಡಿಕೆ ಮುಂತಾದ ವ್ಯವಸ್ಥೆಗಳನ್ನು ಅಳವಡಿಸಿಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಸಲಹೆ ನೀಡುವುದಾಗಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ. ಅಮೇರಿಕಾದ ಬೋಸ್ಟನ್ ನಗರದಲ್ಲಿ “ರಾಜ್ಯ ಶಾಸಕರ ರಾಷ್ಟ್ರೀಯ ಸಮಾವೇಶ” ಹಾಗೂ “ರಾಷ್ಟ್ರೀಯ ಶಾಸಕರ ಸಮಾವೇಶ” ಭಾರತ ಸಂಸ್ಥೆಗಳ ಆಶ್ರಯದಲ್ಲಿ ನಡೆಯುತ್ತಿರುವ “ಶಾಸಕಾಂಗ ಶೃಂಗಸಭೆ 2025”ಶೃಂಗಸಭೆಯ ನೇಪಥ್ಯದಲ್ಲಿ ನಡೆದ ವಿಚಾರ ಗೋಷ್ಠಿಯಲ್ಲಿ ಅಮೆರಿಕದ ಶಿಕ್ಷಣ ಮತ್ತು ಆರೋಗ್ಯ ವ್ಯವಸ್ಥೆಗಳ ಹೋಲಿಕೆ ಮತ್ತು ನಮ್ಮ ದೇಶದ ಶಿಕ್ಷಣ ಮತ್ತು ಆರೋಗ್ಯ ವ್ಯವಸ್ಥೆಯನ್ನು ನಿರ್ಧಿಷ್ಟವಾಗಿ ಸಂಪರ್ಕಿಸುವಲ್ಲಿ ಶಾಸಕಾಂಗದ ಪಾತ್ರ ಕುರಿತು ಸಭಾಪತಿ ಬಸವರಾಜ ಹೊರಟ್ಟಿ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಭಾಪತಿ ಬಸವರಾಜ ಹೊರಟ್ಟಿ, ಶೈಕ್ಷಣಿಕ ವ್ಯವಸ್ಥೆಗೆ ಅನುಗುಣವಾಗಿ ಸಮಗ್ರ ರಾಜ್ಯದ ಶಾಲಾ ಶಿಕ್ಷಣಕ್ಕೆ ಗುಣಮಟ್ಟದ ಶಿಕ್ಷಣ ವ್ಯವಸ್ಥೆಯನ್ನು ಸಂಯೋಜಿಸುವುದರಿಂದ ನಮ್ಮ ವಿದ್ಯಾರ್ಥಿಗಳಿಗೆ ಜಗತ್ತಿನ ಉನ್ನತ ಶಿಕ್ಷಣ ನೀಡಲು ಅನುಕೂಲವಾಗುತ್ತದೆ ಎಂದು ತಿಳಿಸಿದರು.
ಅಮೆರಿಕದ ಆರೋಗ್ಯ, ಶಿಕ್ಷಣ ಮತ್ತು ಉನ್ನತ ವೈದ್ಯಕೀಯ ಸೇವೆಗಳನ್ನು ನಮ್ಮ ರಾಜ್ಯದಲ್ಲಿ ಅಳವಡಿಸಲು ಕೈಗೊಳ್ಳಬೇಕಾಗಿರುವ ಕ್ರಮಗಳ ಕುರಿತು ವಿವರಿಸುವುದರ ಜೊತೆಗೆ ಈ ವಿಚಾರಗಳಿಗೆ ಸಂಬಂಧಿಸಿದಂತೆ ದುಂಡು ಮೇಜಿನ ಸಭೆಯಲ್ಲಿ ಗಾನಾ ಮತ್ತು ಅಮೆರಿಕದ ಸೆನೆಟರ್ ಗಳೊಂದಿಗೆ ಕೂಲಂಕಷವಾಗಿ ಚರ್ಚಿಸಿ ಅಲ್ಲಿನ ಮೂಲಭೂತ ಸೇವೆಗಳ ಬಗ್ಗೆ ಅರಿವು ಪಡೆದುಕೊಂಡಿದ್ದು ನಮ್ಮ ಸರ್ಕಾರದ ಗಮನಕ್ಕೆ ತರಲಾಗುವುದು. ರಾಜ್ಯದ ಜನರಿಗೆ ಮೂಲಸೌಕರ್ಯಗಳಾದ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದ ಬಗ್ಗೆ ಬೆಳಕು ಚೆಲ್ಲಲು ವಿಶೇಷವಾಗಿ ಸದನದಲ್ಲಿ ಶಾಸಕರಿಗೆ ತಿಳಿವಳಿಕೆ ನೀಡಲು ಕಟಿಬದ್ಧ ಎಂದರು. “ಶಾಸಕಾಂಗ ಶೃಂಗಸಭೆ 2025″ರ ನೇಪಥ್ಯದಲ್ಲಿ, ವಿಶ್ವದ ಶ್ರೇಷ್ಟ ಶಿಕ್ಷಣ ಸಂಸ್ಥೆಗಳಾದ ಮೆಸಾಚುಸೆಟ್‌ಸ್ ಆಫ್ ಟೆಕ್ನಾಲಜಿ (ಎಂಐಟಿ), ಹಾರ್ವರ್ಡ್ ವಿಶ್ವವಿದ್ಯಾಲಯ ಹಾಗೂ ಇತರೆ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿ ಅಧ್ಯಯನ ಮಾಡಿ ಅಲ್ಲಿರುವ ಸೌಲಭ್ಯಗಳನ್ನು ರಾಜ್ಯದಲ್ಲಿ ಹಂತಹಂತವಾಗಿ ಅಳವಡಿಸಲು ಸರ್ಕಾರದ ಗಮನ ಸೆಳೆಯಲು ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ಶ್ರೀ ಬಸವರಾಜ ಹೊರಟ್ಟಿ ವಿವರಿಸಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



