ಸಾಹಸ ಸಿಂಹ, ಅಭಿನಯ ಭಾರ್ಗವ, ಕೋಟಿಗೊಬ್ಬ, ಕಲಾದೈವ, ಮೈಸೂರು ರತ್ನ ಎಂಬ ಬಿರುದುಗಳಿಂದ ಜನಪ್ರಿಯತೆ ಪಡೆದವರು ಡಾ.ವಿಷ್ಣುವರ್ಧನ್ . ‘ದಿ ಫೀನಿಕ್ಸ್ ಆಫ್ ಇಂಡಿಯನ್ ಸಿನಿಮಾ’ ಅಂತಲೇ ಖ್ಯಾತಿ ಪಡೆದಿದ್ದ ಡಾ.ವಿಷ್ಣುವರ್ಧನ್ ಪ್ರೀತಿಯ ಅಭಿಮಾನಿಗಳಿಂದ ‘ಹೃದಯವಂತ’ ಅಂತಲೇ ಕರೆಯಿಸಿಕೊಂಡವರು. ಇಂತಿಪ್ಪ ಡಾ.ವಿಷ್ಣುವರ್ಧನ್ ಅವರ ಜನ್ಮದಿನೋತ್ಸವ ಇಂದು.ಅಪಾರ ಪ್ರಮಾಣದ ಅಭಿಮಾನಿಗಳು ಇಂದು ಅವರ ಸ್ಮರಣೆ ಮಾಡುತ್ತಿದ್ದಾರೆ. ಡಾ.ವಿಷ್ಣುವರ್ಧನ್ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳು ಅರ್ಥಪೂರ್ಣವಾಗಿ ಆಚರಿಸುತ್ತಿದ್ದಾರೆ. ಡಾ.ವಿಷ್ಣುವರ್ಧನ್ ಅವರ ಜನ್ಮದಿನವಾದ ಇಂದು ಕುಟುಂಬಸ್ಥರು ‘ಸಿರಿವಂತ’ನಿಗೆ ಪೂಜೆ ಸಲ್ಲಿಸಿ, ನಮನ ಸಲ್ಲಿಸಿದ್ದಾರೆ.
ಡಾ.ವಿಷ್ಣುವರ್ಧನ್ರನ್ನು ಸ್ಮರಿಸಿದ ಗಣ್ಯರು
ಡಾ.ವಿಷ್ಣುವರ್ಧನ್ ಅವರ ಜನ್ಮದಿನವಾದ ಇಂದು ಸಿಎಂ ಸಿದ್ದರಾಮಯ್ಯ ಸೇರಿದಂತೆ ರಾಜಕೀಯ ಗಣ್ಯರು ಹಾಗೂ ತಾರೆಯರು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವಿಷ್ಣು ಅವರ ಜನ್ಮ ದಿನವನ್ನು ಸ್ಮರಿಸಿದ್ದಾರೆ.
ಸಾಹಸ ಸಿಂಹನ ಕಲಾ ಜೀವನ
ಸೆಪ್ಟೆಂಬರ್ 18, 1950.. ಡಾ.ವಿಷ್ಣುವರ್ಧನ್ ಹುಟ್ಟಿದ ದಿನ. ಮೈಸೂರಿನಲ್ಲಿ ಜನಿಸಿದ ಡಾ.ವಿಷ್ಣುವರ್ಧನ್ ಬೆಂಗಳೂರಿನ ನ್ಯಾಷನಲ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮುಗಿಸಿದರು. ‘ವಂಶವೃಕ್ಷ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ ಡಾ.ವಿಷ್ಣುವರ್ಧನ್ಗೆ ಸ್ಯಾಂಡಲ್ವುಡ್ನಲ್ಲಿ ದೊಡ್ಡ ಬ್ರೇಕ್ ನೀಡಿದ್ದು ಚಿತ್ರಬ್ರಹ್ಮ ಪುಟ್ಟಣ್ಣ ಕಣಗಾಲ್ ನಿರ್ದೇಶನದ ‘ನಾಗರಹಾವು’ ಸಿನಿಮಾ. ‘ಭೂತಯ್ಯನ ಮಗ ಅಯ್ಯು’, ‘ಸಾಹಸ ಸಿಂಹ’, ‘ಬಂಧನ’, ‘ಹಬ್ಬ’, ‘ಜೀವನದಿ’, ‘ಯಜಮಾನ’, ‘ಸಿಂಹಾದ್ರಿಯ ಸಿಂಹ’, ‘ಯಜಮಾನ’, ‘ಆಪ್ತಮಿತ್ರ’, ‘ಆಪ್ತರಕ್ಷಕ’ ಮುಂತಾದ ಅನೇಕ ಹಿಟ್ ಚಿತ್ರಗಳನ್ನು ಡಾ.ವಿಷ್ಣುವರ್ಧನ್ ನೀಡಿದರು. 200ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿರುವ ಡಾ.ವಿಷ್ಣುವರ್ಧನ್ಗೆ ರಾಜ್ಯ ಪ್ರಶಸ್ತಿ, ಡಾ.ರಾಜ್ಕುಮಾರ್ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳು ಲಭಿಸಿವೆ. 2009 ಡಿಸೆಂಬರ್ 30ರಂದು ಡಾ.ವಿಷ್ಣುವರ್ಧನ್ ಇಹಲೋಕ ತ್ಯಜಿಸಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







