ಬಳ್ಳಾರಿ: ಬಿಎಸ್ಸಿ ದ್ವಿತೀಯ ಸೆಮಿಸ್ಟರ್ ಕನ್ನಡ ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ವಾಣಿಜ್ಯ ವಿಷಯದ ಪ್ರಶ್ನೆಗಳು ಮುದ್ರಣಗೊಂಡು ಗೊಂದಲಕ್ಕೀಡಾದ ಘಟನೆ ಬಳ್ಳಾರಿ ನಗರದಲ್ಲಿ ಹಲವು ಪರೀಕ್ಷಾ ಕೇಂದ್ರಗಳಲ್ಲಿ ನಡೆದಿದೆ. ಈ ಬಗ್ಗೆ ಪರೀಕ್ಷಾರ್ಥಿಗಳು ಸಂಬಂಧಿಸಿದ ಪರೀಕ್ಷಾ ಕೇಂದ್ರದ ಮುಖ್ಯಸ್ಥರ ಗಮನಕ್ಕೆ ತರುತ್ತಿದ್ದಂತೆಯೇ ಬಳ್ಳಾರಿ ವಿವಿಯಿಂದ ಮತ್ತೊಂದು ನಿಗದಿತ ಪರೀಕ್ಷೆಯ ಪ್ರಶ್ನೆಪತ್ರಿಕೆ ತರಿಸಿಕೊಂಡು ಪರೀಕ್ಷೆ ನಡೆಸಿದ್ದಾರೆ.
ಇಲ್ಲಿನ ವಿಜಯನಗರ ಶ್ರೀಕೃಷ್ಣದೇವರಾಯ ವಿವಿ ವ್ಯಾಪ್ತಿಯಲ್ಲಿ ಪದವಿ ಪರೀಕ್ಷೆಗಳು ಶುರುವಾಗಿದ್ದು, ಮಂಗಳವಾರ ಬೇಸಿಕ್ ಕನ್ನಡ ಪರೀಕ್ಷೆ ನಡೆಯಿತು. ಬೆಳಗ್ಗೆ 9 ಗಂಟೆಗೆ ಪರೀಕ್ಷೆ ಸಮಯ ಶುರುವಾಗುತ್ತಿದ್ದಂತೆಯೇ ಪರೀಕ್ಷಾ ಕೇಂದ್ರದ ಮೇಲ್ವಿಚಾರಕರು ಪರೀಕ್ಷರ್ಥಿಗಳಿಗೆ ಪ್ರಶ್ನೆಪತ್ರಿಕೆ ನೀಡಿದ್ದಾರೆ. ಪ್ರಶ್ನೆಗಳನ್ನು ಓದುತ್ತಿದ್ದಂತೆಯೇ ವಿದ್ಯಾರ್ಥಿಗಳು ಕಂಗಾಲಾಗಿದ್ದಾರೆ. ಪ್ರಶ್ನೆ ಪತ್ರಿಕೆ ಬದಲಾಗಿದ್ದು, ಕನ್ನಡ ಬದಲಿಗೆ ವಾಣಿಜ್ಯ ಶಾಸ್ತ್ರದ ಪರೀಕ್ಷೆ ಪತ್ರಿಕೆ ನೀಡಲಾಗಿದೆ ಎಂದು ವಿದ್ಯಾರ್ಥಿಗಳು ತಿಳಿಸುತ್ತಿದ್ದಂತೆಯೇ ಆಯಾ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ವಿಶ್ವವಿದ್ಯಾಲಯದ ಗಮನಕ್ಕೆ ತಂದಿದ್ದಾರೆ. ಕೂಡಲೇ ಎಚ್ಚೆತ್ತ ವಿಶ್ವವಿದ್ಯಾಲಯ, ಇ-ಮೇಲ್ ಮೂಲಕ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರಿಗೆ ಪ್ರಶ್ನೆಪತ್ರಿಕೆ ಕಳಿಸಿಕೊಟ್ಟಿದ್ದು, ಪ್ರಶ್ನೆಪತ್ರಿಕೆ ಜೆರಾಕ್ಸ್ ಪ್ರತಿ ನೀಡಿ ವಿದ್ಯಾರ್ಥಿಗಳಿಂದ ಪರೀಕ್ಷೆ ಬರೆಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



