ಕಾರವಾರ: ಭಟ್ಕಳ ಅರಣ್ಯದಲ್ಲಿ ಗೋವುಗಳ ರಾಶಿ ರಾಶಿ ಮೂಳೆಗಳು ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಟ್ಕಳ ಶಹರ ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.ಭಟ್ಕಳದ ಚೌಥನಿ ಕಾಲೊನಿಯ ಮೊಹ್ಮದ್ ರಾಯನ್ ಅಲಿಯಾಸ್ ಮಹ್ಮದ್ ರಿಜ್ವಾನ್, ಮಗ್ದೂಂ ಕಾಲೊನಿಯ ಮಹ್ಮದ್ ಸಂವನ್ ಬಂಧಿತ ಆರೋಪಿಗಳು. ಇಬ್ಬರೂ ಗೋವುಗಳನ್ನು ಕಳ್ಳತನ ಮಾಡಿ ಭಟ್ಕಳಕ್ಕೆ ತಂದು ಮಾಂಸ ಬೇರ್ಪಡಿಸಿ ನಂತರ ಮಗ್ದೂ ಕಾಲೊನಿ ಸಮೀಪದ ಅರಣ್ಯದಲ್ಲಿ ಸುರಿಯುತ್ತಿದ್ದರು.ಮಗ್ದೂಂ ಕಾಲೊನಿ ಬಳಿಯ ಬೆಳ್ನೆ ಗ್ರಾಮದ ಸರ್ವೆ ನಂಬರ್ 74 ರ ಅರಣ್ಯ ಭಾಗದಲ್ಲಿ ದೊಡ್ಡಮಟ್ಟದ ಗೋವುಗಳ ಮೂಳೆಗಳ ರಾಶಿ ಪತ್ತೆಯಾಗಿತ್ತು. ಈ ಕುರಿತು ಅರಣ್ಯ ಇಲಾಖೆ ಅಧಿಕಾರಿಗಳು ದೂರು ನೀಡಿದ್ದರು. ದೂರು ದಾಖಲಿಸಿ ಎರಡು ತಂಡ ರಚಿಸಿ ತನಿಖೆ ನಡೆಸಲಾಗಿತ್ತು. ಭಟ್ಕಳ ಶಹರ ಠಾಣೆ ಸಿಪಿಐ ದಿವಾಕರ್ ನೇತೃತ್ವದಲ್ಲಿ ಪಿಎಸ್ಐ ನವೀನ್ ಅವರ ತಂಡದಿಂದ ಕಾರ್ಯಾಚರಣೆ ನಡೆಸಲಾಗಿತ್ತು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







