Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

*ಡಾ.ಬಿ.ಆರ್.ಅಂಬೇಡ್ಕರ್ ಬದುಕು ಮತ್ತು ಬರಹ ಕುರಿತು ರಾಜ್ಯ ಮಟ್ಟದ ಮುಕ್ತ ರಸಪ್ರಶ್ನೆ ಸ್ಪರ್ಧೆ*

ನಿತ್ಯ ಭವಿಷ್ಯ – 03/04/2026

ಅಪ್ಪನ ವಚನಗಳು:- ಶಿವಯೋಗಿಗಳಿಗೆ ಬಸವಣ್ಣನವರು ಎಲ್ಲ ವಿಧದಲ್ಲಿಯೂ ಮೇಲ್ಪಂಕ್ತಿ ಆಗಿದ್ದರು.

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ರಾಜ್ಯ»ಅಪ್ಪನ ವಚನಗಳು:- ಶಿವಯೋಗಿಗಳಿಗೆ ಬಸವಣ್ಣನವರು ಎಲ್ಲ ವಿಧದಲ್ಲಿಯೂ ಮೇಲ್ಪಂಕ್ತಿ ಆಗಿದ್ದರು.
ರಾಜ್ಯ

ಅಪ್ಪನ ವಚನಗಳು:- ಶಿವಯೋಗಿಗಳಿಗೆ ಬಸವಣ್ಣನವರು ಎಲ್ಲ ವಿಧದಲ್ಲಿಯೂ ಮೇಲ್ಪಂಕ್ತಿ ಆಗಿದ್ದರು.

ಮೃತ್ಯುಂಜಯಾಚಾರ್ ಬಿBy ಮೃತ್ಯುಂಜಯಾಚಾರ್ ಬಿApril 2, 2026Updated:April 2, 2026No Comments1 Min Read
Share WhatsApp Facebook Twitter Threads Telegram
Follow Us
Facebook Instagram
ಅಪ್ಪನ ವಚನಗಳು:- ಶಿವಯೋಗಿಗಳಿಗೆ ಬಸವಣ್ಣನವರು ಎಲ್ಲ ವಿಧದಲ್ಲಿಯೂ ಮೇಲ್ಪಂಕ್ತಿ ಆಗಿದ್ದರು.
Share
WhatsApp Twitter Facebook Telegram

* ಅಪ್ಪನ ವಚನಗಳು:- ಶಿವಯೋಗಿಗಳಿಗೆ ಬಸವಣ್ಣನವರು ಎಲ್ಲ ವಿಧದಲ್ಲಿಯೂ ಮೇಲ್ಪಂಕ್ತಿ ಆಗಿದ್ದರು.

ಶರಣರ ವಿಚಾರಗಳನ್ನು ಹೇಳುವುದು ಸರಳ, ಆದರೆ ಆಚರಿಸುವುದು ಕಷ್ಟ .ಆದರೆ ಶಿವಯೋಗಿಗಳಿಗೆ ಬಸವ ತತ್ವ ಆಚರಣೆ ಕಷ್ಟವಾಗಿರಲಿಲ್ಲ, ಇಷ್ಟವಾಗಿತ್ತು .ಕಾಶಿಯಿಂದ ಬಂದ ಸಂಸ್ಕೃತ ಪಂಡಿತ ಬೃಹತ್ತಾದ ಸಂಸ್ಕೃತ ಗ್ರಂಥ ತಂದುಕೊಟ್ಟ. ತಾವು ಇದನ್ನು ಓದಬೇಕೆಂದು ಒತ್ತಾಯಿಸುತ್ತಾನೆ. ನಾನು ಈಗಾಗಲೇ ಒಂದು ಗ್ರಂಥ ಓದುತ್ತಿದ್ದೇನೆ. ನಿಮ್ಮ ಹತ್ತಿರವೇ ಇರಲಿ ಎಂದು ನಯವಾಗಿ ಗುರುಗಳು ನಿರಾಕರಿಸಿದರು. ಮತ್ತೆ ಆ ಪಂಡಿತ ಬುದ್ಧೀ ಅದು ಮುಗಿದ ಮೇಲಾದರೂ ಇದನ್ನು ಓದಲೇಬೇಕೆಂದು ಒತ್ತಾಯಿಸಿದಾಗ” ಈ ಜನ್ಮ ಮುಗಿಯುವವರೆಗೂ ಅದು ಸಾಧ್ಯವಿಲ್ಲಪ್ಪಾ ಅದು ಮುಗಿಯದ ಮಾಣಿಕ್ಯ ದೀಪ್ತಿ” ಎನ್ನುತ್ತಾರೆ .ಯಾವುದದು ಬುದ್ಧಿ ಎಂದ. ಅದು” ಶರಣರ ವಚನ ಸಾಹಿತ್ಯ ದರ್ಶನ” ನಮಗೆಲ್ಲ ಅದೇ ದಾರಿದೀಪ ಶಾಸ್ತ್ರಿಗಳೆ ಎಂದು ವಚನಗಳ ಮನ್ನಣೆಯನ್ನು ಎತ್ತಿ ತೋರಿಸುತ್ತಾರೆ.
ಮೈಸೂರಿನ ಕಡ್ಲೆಪುರಿ ನಂಜುಂಡಪ್ಪನವರು ಸೊಗಸಾದ ಮಂಚ ತಂದು, ಗಾದೆ -ಕುತನಿ ಅರಿವೇ ಹಾಸಿ, ಅಪ್ಪಾ ತಾವು ಇದರ ಮೇಲೆ ನಿತ್ಯವೂ ಪವಡಿಸಬೇಕು ಎಂದು ಪ್ರಾರ್ಥಿಸುತ್ತಾರೆ.” ಹೌದಪ್ಪಾ ಇದು ನಮ್ಮ ಅಪ್ಪನ ವಚನಗಳು ಇರಬೇಕಾದ ಸ್ಥಳ” ಎಂದು ಬಸವಣ್ಣನವರ ವಚನಗಳನ್ನು ಇಟ್ಟು ಸಾಷ್ಟಾಂಗವೆರಗುತ್ತಾರೆ. ಎಂತಹ ಸೇವಾಭಾವ ಶಿವಯೋಗಿಗಳದು.
“ಈಶನ ಮೀಸಲಪ್ಪ ಭಕ್ತ” ಎಂದು ಹರಿಹರ ಬಸವಣ್ಣನವರನ್ನು ಬಣ್ಣಿಸುತ್ತಾನೆ. ಅದರಂತೆ ಬಸವಣ್ಣನವರ ಮೀಸಲು ಭಕ್ತಿ ಶಿವಯೋಗಿಗಳದು. ಬಸವಣ್ಣನವರನ್ನು ಅಪ್ಪಾ ಎಂದೇ ಕರೆಯುತ್ತಿದ್ದರು. ಅಪ್ಪನ ವಚನಗಳು ಎಂದೇ ಸಂಭೋದಧಿಸುತ್ತಿದ್ದರು. ಅವರಿಗೆ ವಚನಗಳೇ ಮಂತ್ರಗಳು ,ಬಸವಣ್ಣನೇ ಬಾಳ ಜ್ಯೋತಿ, ಸಮತೆಯೇ ಕಂತೆ, ದಾಸೋಹವೇ ದೀಪ್ತಿ, ಸಹಜ- ಸರಳ ಜೀವನವೇ ಶಿವಯೋಗದ ಶಿವ ಸಿದ್ಧಿಯಾಗಿತ್ತು.
ಶಿವಯೋಗಿಗಳು ಬಸವಣ್ಣನವರ ವಚನಗಳನ್ನು ಅಪ್ಪನ ವಚನಗಳೆಂದು ಅಪ್ಪಿ- ಒಪ್ಪಿ ಬಸವತತ್ವದಲ್ಲಿಯೇ ಬದುಕಿದರು .ಬಯಸಿ ಬಂದದು ಅಂಗಭೋಗ. ಬಯಸದೇ ಬಂದುದು ಲಿಂಗಭೋಗ ಎಂದು ಬಾಗಿದ ತಲೆ ಮುಗಿದ ಕೈಯಾಗಿ ಬಾಳಿದ ಯುಗಪುರುಷರು. ಇನ್ನು ಶಿವನ ಆಜ್ಞೆ ಆಗಿದೆ ನಾನು ಬರುತ್ತೇನೆ. ನೀವೆಲ್ಲ ಬಸವ ಭಕ್ತಿ ಮಾರ್ಗದಲ್ಲಿ ನಡೆಯಿರಿ ಎಂದು ಅಪ್ಪಣೆ ಮಾಡಿ ದಿನಾಂಕ: 23.4. 1921ರಂದು ಶನಿವಾರ ಶಿವಯೋಗದ ಬಯಲಿನಲ್ಲಿ
ಬಯಲಾದರು. *

 

https://timesofbayaluseeme.com/wp-admin/

ಅಪ್ಪ ಶಿವಯೋಗಿ
Follow on Facebook Follow on Instagram
Share. Facebook Twitter WhatsApp Telegram
Previous Articleಏ.30ರೊಳಗೆ ಕೆನಾಲ್‌ಗೆ ಟ್ರಯಲ್ ನೀರು: ಶಾಸಕ ಚಂದ್ರಪ್ಪ ಗಡುವು
Next Article ನಿತ್ಯ ಭವಿಷ್ಯ – 03/04/2026
ಮೃತ್ಯುಂಜಯಾಚಾರ್ ಬಿ
  • Website

ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.

Related Posts

ಬಕೆಟ್‌ನಲ್ಲಿ ಮುಳುಗಿ ಮಗು ಸಾವು; ತಾಯಿ ಆತ್ಮಹತ್ಯೆ

April 2, 2026

ನೀರು, ಭೂಮಿಯಲ್ಲಿನ ಅಪಾಯಕಾರಿ ದೈತ್ಯ: ಯಾವುದು ಗೊತ್ತಾ…

April 2, 2026

ಪ್ರಕಟವಾಯ್ತು ತಾತ್ಕಾಲಿಕ ಆಯ್ಕೆ ಪಟ್ಟಿ ; ಒಮ್ಮೆ ಚೆಕ್ ಮಾಡಿಕೊಳ್ಳಿ

April 2, 2026
Add A Comment
Leave A Reply Cancel Reply

Advertisement
Latest Posts

*ಡಾ.ಬಿ.ಆರ್.ಅಂಬೇಡ್ಕರ್ ಬದುಕು ಮತ್ತು ಬರಹ ಕುರಿತು ರಾಜ್ಯ ಮಟ್ಟದ ಮುಕ್ತ ರಸಪ್ರಶ್ನೆ ಸ್ಪರ್ಧೆ*

ನಿತ್ಯ ಭವಿಷ್ಯ – 03/04/2026

ಅಪ್ಪನ ವಚನಗಳು:- ಶಿವಯೋಗಿಗಳಿಗೆ ಬಸವಣ್ಣನವರು ಎಲ್ಲ ವಿಧದಲ್ಲಿಯೂ ಮೇಲ್ಪಂಕ್ತಿ ಆಗಿದ್ದರು.

ಏ.30ರೊಳಗೆ ಕೆನಾಲ್‌ಗೆ ಟ್ರಯಲ್ ನೀರು: ಶಾಸಕ ಚಂದ್ರಪ್ಪ ಗಡುವು

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.