ವದ್ದಿಕೆರೆ ಸಿದ್ದೇಶ್ವರ ಸ್ವಾಮಿ ಬ್ರಹ್ಮ ರಥೋತ್ಸವ ವೈಭವ; ಲಕ್ಷಾಂತರ ಭಕ್ತರು ಸಾಕ್ಷಿ
ಟಿಒಬಿ ನ್ಯೂಸ್ ಹಿರಿಯೂರು
ತಾಲೂಕಿನ ಸುಕ್ಷೇತ್ರ ವದ್ದಿಕೆರೆ ಸಿದ್ದೇಶ್ವರ ಸ್ವಾಮಿ ಯಾನೆ ಕಾಲಭೈರವೇಶ್ವರ ಸ್ವಾಮಿ ಯ ಬ್ರಹ್ಮರಥೋತ್ಸವವು ಸೋಮವಾರ ಮಧ್ಯಾಹ್ನ ಲಕ್ಷಾಂತರ ಭಕ್ತ ಸಮೂಹದ ನಡುವೆ ಸಡಗರ ಸಂಭ್ರಮ ಹಾಗೂ ಭಕ್ತಿ ಭಾವದಿಂದ ನಡೆಯಿತು.
ಸಿದ್ದೇಶ್ವರ ಸ್ವಾಮಿಗೆ ಅಭಿಷೇಕ ಅರ್ಚನೆ ಹೂವಿನ ಅಲಂಕಾರ ನಡೆಯಿತು ರಥೋತ್ಸವವನ್ನು ವಿವಿಧ ಹೂವುಗಳಿಂದ ಅಲಂಕರಿಸಲಾಗಿತ್ತು ಸ್ವಾಮಿಯನ್ನು ರಥದಲ್ಲಿ ಪ್ರತಿಷ್ಠಾಪಿಸಿದ ನಂತರ ಭಕ್ತಾದಿಗಳ ಉದ್ಘೋಷ ಕೇಳಿ ಬಂದವು.
ವದ್ದಿಕೆರೆ, ಐಮಂಗಲ, ಯರಬಳ್ಳಿ, ಚಿತ್ರದುರ್ಗ ಜಿಲ್ಲೆ ಸೇರಿದಂತೆ ರಾಜ್ಯದ ನಾನಾ ಭಾಗಗಳಿಂದ ಬಂದಿದ್ದ ಸಹಸ್ರಾರು ಜನ ಶ್ರೀ ಸಿದ್ದೇಶ್ವರ ಸ್ವಾಮಿಯ ಬ್ರಹ್ಮರಥೋತ್ಸವದಲ್ಲಿ ಪಾಲ್ಗೊಂಡಿದ್ದರು.
