ಚಿತ್ರದುರ್ಗ: ವಾಣಿವಿಲಾಸ ಸಾಗರ ಜಲಾಶಯಕ್ಕೆ ಎರಡನೇಯ ದಿನದ ಒಳಹರಿವು 1900 ಕ್ಯೂಸೆಕ್ ದಾಖಲಾಗಿದೆ.ಮೊದಲನೆ ದಿನ 1200 ಕ್ಯೂಸೆಕ್ ನೀರು ಹರಿದು ಬಂದಿದ್ದು,. ಈಗ ಎರಡನೇ ದಿನಕ್ಕೆ ನೀರಿನ ಹರಿವಿನ ಪ್ರಮಾಣ ಹೆಚ್ಚಾಗಿದೆ.ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಭದ್ರಾ ನೀರಿನ ಜೊತೆಗೆ ಮಳೆ ನೀರು ಸೇರಿ ಜಲಾಶಯದ ಒಳಹರಿವು ಹೆಚ್ಚಳಕ್ಕೆ ಕಾರಣವಾಗಿದೆ.
130 ಅಡಿ ಎತ್ತರದ ಜಲಾಶಯ 30 TMC ನೀರು ಸಂಗ್ರಹ ಸಾಮರ್ಥ್ಯ ಹೊಂದಿದೆ.ಇಂದು ಜಲಾಶಯದ ನೀರಿನ ಮಟ್ಟ 123.70 ಅಡಿವರೆಗೆ ಇದ್ದು, 23.27 TMC ನೀರು ಸಂಗ್ರಹ ಇದೆ.
ಕಳೆದ ವರ್ಷ ಇದೇ ದಿನ ಜಲಾಶಯದಲ್ಲಿ 114.75 ಅಡಿವರೆಗೆ ನೀರಿತ್ತು. ಅಂದರೆ, 18.73 TMC ನೀರು ಸಂಗ್ರಹ ಆಗಿತ್ತು.ಕಳೆದ ವರ್ಷಕ್ಕಿಂತ 7 ಅಡಿ ಹೆಚ್ಚು ಅಂದರೆ, 5 TMC ಹೆಚ್ಚು ನೀರಿನ ಸಂಗ್ರಹ ಇದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



