ಚಿತ್ರದುರ್ಗ: ದ್ವೀತಿಯ ಪದವಿ ಓದುತ್ತಿದ್ದ ಯುವತಿ ವರ್ಷಿತಳನ್ನು ಕೊಂದು ಬೆಂಕಿ ಹಚ್ಚಿ ಕೊಲೆ ಮಾಡಿರುವ ಘಟನೆಗೆಸಂಬಂಧಪಟ್ಟಂತೆ ಸೂಕ್ತ ತನಿಖೆನಡೆಸಿತಪ್ಪಿತಸ್ಥರಿಗೆಕಠಿಣಶಿಕ್ಷೆನೀಡಬೇಕುಇಲ್ಲವಾದಲ್ಲಿಬಿಜೆಪಿ ವತಿಯಿಂದ ಹೋರಾಟವನ್ನು ನಡೆಸಲಾಗುವುದೆಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯೆ ಶ್ಯಾಮಲಾ ಶಿವ ಪ್ರಕಾಶಎಚ್ಚರಿಕೆ ನೀಡಿದರು.
ಘಟನೆ ಸಂಬಂಧ ಹೇಳಿಕೆ ನೀಡಿದ ಅವರು, ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೇರಹಟ್ಟಿ ಗ್ರಾಮದ ಜ್ಯೋತಿ ತಿಪ್ಪೇಸ್ವಾಮಿ ಅವರಮಗಳು ವರ್ಷಿತಾ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ದ್ವೀತಿಯ ವ್ಯಾಸಾಂಗ ಮಾಡುತ್ತಿದ್ದು, ನಗರದಲ್ಲಿನಎಸ್ಸಿ,ಎಸ್ಟಿ ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ ತಂಗಿದ್ದರು. ಕಳೆದ ಆಗಸ್ಟ್ 14 ರಂದು ಊರಿಗೆ ಹೋಗುವ ಸಂಬಂಧ ಹಾಸ್ಟೆಲ್ವಾರ್ಡನ್ ಗೆ ರಜೆ ಕೋರಿ ಲೀವ್ ಲೆಟರ್ ನೀಡಿ ಹೋಗಿದ್ದ ವರ್ಷಿತಾ ಗೋನೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ 48ರ ಬಳಿಬೆಂಕಿಯಿಂದ ಅರೆಬೆಂದ ಸುಟ್ಟ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಇಂಥ ಮಳೆಗಾಲದಲ್ಲೂ ವಿದ್ಯಾರ್ಥಿನಿಯ ದೇಹ ಸುಟ್ಟು ಹಾಕಿದ್ದಾರೆ. ಇದೊಂದು ಪೂರ್ವ ನಿಯೋಜಿತ ಕೃತ್ಯ ಎಂದೆನಿಸುತ್ತದೆ. ಪೊಲೀಸರು ಪ್ರಕರಣ ಬೇಧಿಸಿ ಆರೋಪಿಗಳನ್ನು ಪತ್ತೆ ಹಚ್ಚಬೇಕು, ಕಠಿಣ ಶಿಕ್ಷೆ ಕೊಡಿಸಬೇಕು ಎಂದು ಆಗ್ರಹಿಸಿದ್ದಾರೆ.ಕರ್ನಾಟಕ ರಾಜ್ಯದಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ಸೇರಿದಂತೆ ನರಹತ್ಯೆ ಹಾಗೂ ಕಾನೂನು ಸುವ್ಯವಸ್ಥೆ ಸಂಬಂಧಿತ ಅಪರಾಧ ಪ್ರಕರಣಗಳು ಹೆಚ್ಚುತ್ತಿವೆ. ಕಳೆದ ಎರಡು ವರ್ಷ ಏಳು ತಿಂಗಳಲ್ಲಿ ಕರ್ನಾಟಕ ರಾಜ್ಯದಲ್ಲಿ 43,053 ಮಹಿಳೆಯರ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ದಾಖಲಾಗಿರುವುದು ಸರಿಯಷ್ಟೇಈ ದೌರ್ಜನ್ಯ ಪ್ರಕರಣಗಳಲ್ಲಿಲೈಂಗಿಕ ಕಿರುಕುಳ, ವರದಕ್ಷಿಣೆ ಕಿರುಕುಳ, ಬಾಲ್ಯ ವಿವಾಹ, ಪೋಕ್ಸೋ ಕಾಯ್ದೆ ಸೇರಿದಂತೆ ಅತ್ಯಾಚಾರ ಪ್ರಕರಣಗಳು ಕೂಡ ಇಡೀ ನಾಗರಿಕ ಸಮಾಜವೇ ತಲೆತಗ್ಗಿಸುವಷ್ಟರ ಮಟ್ಟಿಗೆ ಹೆಚ್ಚಿಗೆ ಇದೆ, ಇದುವರೆಗೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರುಯಾರೆಂಬುದು ತಿಳಿದು ಬಂದಿಲ್ಲ. ಆದರೆ ಕಾಲೇಜು ಕ್ಯಾಂಪಸ್ಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿನಿಯರು ಬೇರೆ ಬೇರೆಕಾರಣಕ್ಕೆ ಸರಣಿ ಜೀವ ಕಳೆದುಕೊಳ್ಳುತ್ತಿರುವುದು, ವಿದ್ಯಾರ್ಥಿನಿಯ ಆತ್ಮಹತ್ಯೆ ಸೇರಿದಂತೆ ಹಲವಾರು ಪ್ರಕರಣಗಳು ಜರುಗಿದರು ಸಹ ಘನ ಸರ್ಕಾರದ ಕಣ್ಣು ತೆರೆಯದಿರುವುದು ದುರಾದೃಷ್ಟವೇ ಸರಿ ಎಂದು ಕಿಡಿ ಕಾರಿದರು.
ಇತ್ತೀಚಿನ ದಿನಮಾನದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯಗಳು ಹೆಚ್ಚಾಗುತ್ತಿವೆ ಕಾಮುಕರು ಅತ್ಯಾಚಾರ ಮಾಡಿ ಸಾಕ್ಷಿಸಿಗಬಾರದೆಂದು ಅವರು ಸಾಯಿಸುತ್ತಿದ್ದಾರೆ, ಇದರ ಬಗ್ಗೆ ಪೋಲಿಸ್ ಇಲಾಖೆ ಎಚ್ಚತ್ತೆಕೊಳ್ಳಬೇಕಿದೆ. ಚಿತ್ರದುರ್ಗದ ಈ ಘಟನೆಯನ್ನು ಸರ್ಕಾರ ಹಾಗೂ ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರನ್ನು ಕಾನೂನಿನ ಅನ್ವಯ ಸೂಕ್ತ ಕಠಿಣ ಶಿಕ್ಷೆಗೆಗುರಿಪಡಿಸಬೇಕು ಎಂದು ಸರ್ಕಾರವನ್ನು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯೆ ಶ್ರೀಮತಿ ಶ್ಯಾಮಲಾ ಶಿವಪ್ರಕಾಶ ಆಗ್ರಹಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







