ಚಿತ್ರದುರ್ಗ: ನಗರದ ಹೊರವಲಯದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿಯನ್ನು ಅಮಾನುಷವಾಗಿ ಸುಟ್ಟು ಕೊಲೆ ಮಾಡಿರುವಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಕೊಲೆಗಡುಕರನ್ನು ಕಾನೂನಿನ ಅನ್ವಯ ಕಠಿಣ ಶಿಕ್ಷೆಗೆ ಗುರಿಪಡಿಸಬೇಕೆಂದು ವಿದ್ಯಾರ್ಥಿ ಪರಿಷತ್ ಆಗ್ರಹಿಸಿದೆ.ಚಿತ್ರದುರ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ವೃತ್ತದ ಬಳಿ ಜಮಾಯಿಸಿದ ವಿದ್ಯಾರ್ಥಿ ಪರಿಷತ್ನ ವಿದ್ಯಾರ್ಥಿಗಳು ವಿದ್ಯಾರ್ಥಿನಿಯಕೊಲೆಯ ವಿರುದ್ದ ಘೋಷಣೆಗಳನ್ನು ಕೂಗಿ ಸರ್ಕಾರಕ್ಕೆ ಧಿಕ್ಕಾರವನ್ನು ಹೇಳಿ ಕೊಲೆಗಡುಕರನ್ನು ಶೀಘ್ರವಾಗಿ ಪತ್ತೇ ಮಾಡುವಂತೆಜಿಲ್ಲಾಡಳಿತವನ್ನು ಒತ್ತಾಯಿಸಿದರು.
ಕರ್ನಾಟಕ ರಾಜ್ಯದಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ಸೇರಿದಂತೆ ನರಹತ್ಯೆ ಹಾಗೂ ಕಾನೂನುಸುವ್ಯವಸ್ಥೆ ಸಂಬಂಧಿತ ಅಪರಾಧ ಪ್ರಕರಣಗಳು ಹೆಚ್ಚುತ್ತಿವೆ. ಕಳೆದ ಎರಡು ವರ್ಷ ಏಳು ತಿಂಗಳಲ್ಲಿ ಕರ್ನಾಟಕ ರಾಜ್ಯದಲ್ಲಿ 43,053ಮಹಿಳೆಯರ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ದಾಖಲಾಗಿರುವುದು ಸರಿಯಷ್ಟೇಈ ದೌರ್ಜನ್ಯ ಪ್ರಕರಣಗಳಲ್ಲಿಲೈಂಗಿಕ ಕಿರುಕುಳ, ವರದಕ್ಷಿಣೆ ಕಿರುಕುಳ, ಬಾಲ್ಯ ವಿವಾಹ, ಪೋಕ್ಸೋ ಕಾಯ್ದೆ ಸೇರಿದಂತೆ ಅತ್ಯಾಚಾರ ಪ್ರಕರಣಗಳು ಕೂಡ ಇಡೀ ನಾಗರಿಕ ಸಮಾಜವೇ ತಲೆತಗ್ಗಿಸುವಷ್ಟರ ಮಟ್ಟಿಗೆ ಹೆಚ್ಚಿಗೆ ಇದೆ, ಅಂಕಿ ಅಂಶಗಳನ್ನು ಗಮನಿಸುವುದಾದರೆ, 2023ರಲ್ಲಿ 600, 2024ರಲ್ಲಿ 739, 2025 ಜುಲೈ ರವರೆಗೆ 549 ಅತ್ಯಾಚಾರ ಪ್ರಕರಣಗಳು ದಾಖಲಾಗಿರುವುದು, ಹೆಣ್ಣು ಮಕ್ಕಳ ಸುರಕ್ಷತೆಯಕುರಿತಾಗಿನ ಸರ್ಕಾರ ಹಾಗೂ ನಾಗರೀಕ ಸಮಾಜದ ಕರ್ತವ್ಯ ಪ್ರಜ್ಞೆ ಕುರಿತು ಗಂಭೀರ ಪ್ರಶ್ನೆಗಳನ್ನು ಹುಟ್ಟು ಹಾಕುತ್ತದೆ ಎಂದಿದ್ದಾರೆ.ದಿನಾಂಕ 19ರ ಮಧ್ಯಾಹ್ನ ಚಿತ್ರದುರ್ಗ ನಗರದ ಹೊರವಲಯದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದ್ವಿತೀಯ ವರ್ಷದಪದವಿ ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬಳ ಸುಟ್ಟು ಮೃತಪಟ್ಟಿರುವ ಸ್ಥಿತಿಯಲ್ಲಿ ಮೃತ ದೇಹ ಪತ್ತೆಯಾಗಿರುವುದುಆತಂಕಕಾರಿ ಸಂಗತಿ. ಇದುವರೆಗೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರು ಯಾರೆಂಬುದು ತಿಳಿದು ಬಂದಿಲ್ಲ. ಆದರೆಕಾಲೇಜು ಕ್ಯಾಂಪಸ್ಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿನಿಯರು ಬೇರೆ ಬೇರೆ ಕಾರಣಕ್ಕೆ ಸರಣಿ ಜೀವಕಳೆದುಕೊಳ್ಳುತ್ತಿರುವುದು, ವಿದ್ಯಾರ್ಥಿನಿಯ ಆತ್ಮಹತ್ಯೆ ಸೇರಿದಂತೆ ಹಲವಾರು ಪ್ರಕರಣಗಳು ಜರುಗಿದರು ಸಹ ಘನ ಸರ್ಕಾರದ ಕಣ್ಣುತೆರೆಯದಿರುವುದು ದುರಾದೃಷ್ಟವೇ ಸರಿ.
ಚಿತ್ರದುರ್ಗದ ಈ ಘಟನೆಯನ್ನು ಸರ್ಕಾರ ಹಾಗೂ ಪೆÇಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರನ್ನು ಕಾನೂನಿನ ಅನ್ವಯಸೂಕ್ತ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು. ಇದೇ ಸಂದರ್ಭದಲ್ಲಿ ರಾಜ್ಯದಲ್ಲಿ ಮಹಿಳೆಯರ ಮತ್ತು ಕಾಲೇಜು ಕ್ಯಾಂಪಸ್ಗಳಲ್ಲಿ ಅಧ್ಯಯನಮಾಡುತ್ತಿರುವ ವಿದ್ಯಾರ್ಥಿನಿಯರ ಹಿತವನ್ನು ಕಾಯಲು ಸಮರ್ಪಕ ಸುರಕ್ಷಾ ಕ್ರಮಗಳನ್ನು ತೆಗೆದುಕೊಳ್ಳುವ ಮತ್ತು ಅವುಗಳನ್ನುಖಚಿತಪಡಿಸುವ ಕೊಳ್ಳುವ ಕುರಿತು ಗಂಭೀರವಾದ ಚಿಂತನೆ ನಡೆಸಬೇಕೆಂದು ವಿದ್ಯಾರ್ಥಿ ಪರಿಷತ್ ಆಗ್ರಹಿಸುತ್ತದೆ.ಈ ಸಂದರ್ಭದಲ್ಲಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಪ್ರವೀಣ್.ಹೆಚ್.ಕೆ, ವಿಭಾಗ ಸಂಚಾಲಕ ಗೋಪಿ, ಜಿಲ್ಲಾ ಸಂಚಾಲಕ ಸಂಜಯ್,ಸಾಮಾಜಿಕ ಜಾಲತಾಣ ಆದರ್ಶ, ಚರಣ್, ಕಾರ್ಯಕರ್ತರು ಜೀವನ್, ಮಂಜ, ಸುದರ್ಶನ, ಯಶ್ವಂತ್, ಪ್ರಶಾಂತ್, ಹರೀಶ್,ಹರೀಶಕುಮಾರ್, ಮನೋಜ್, ಕುಬೇರ್, ಪ್ರೀತಂ, ತರುಣ್ಕುಮಾರ್, ರಘು, ಸೂರ್ಯ ಇನ್ನು ಇತರರು ಭಾಗವಹಿಸಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







