ಚಿತ್ರದುರ್ಗ: ಚಿತ್ರದುರ್ಗ ನಗರದ ಹೊರವಲಯದಲ್ಲಿ ವರ್ಷಿತ ಎಂಬ ಯುವತಿ ಶವ ಅರೆಬರೆ ಸುಟ್ಟ ಸ್ಥಿತಿಯಲ್ಲಿ ಸಿಕ್ಕಿದ್ದು, ಈಗ ಪ್ರಕರಣದ ಗಂಭೀರತೆ ಪಡೆದುಕೊಂಡಿದೆ. ಘಟನೆಯನ್ನು ಖಂಡಿಸಿ ಇಂದು ಎಬಿವಿಪಿ ಕಾರ್ಯಕರ್ತರು, ಕರುನಾಡ ವಿಜಯಸೇನೆ ಹಾಗೂ ದಲಿತ ಸಂಘಟನೆಗಳು ಬೃಹತ್ ಹೋರಾಟ ನಡೆಸಿದವು. ನಗರದ ಡಿಸಿ ವೃತ್ತದಲ್ಲಿ ಎಬಿವಿಪಿ ಕಾರ್ಯಕರ್ತರು ಘಟನೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿದರು. ಇದೇ ವೇಳೆ ಕೊಲೆಯ ಆರೋಪಿಗಳನ್ನು ಕೂಡಲೇ ಬಂಧಿಸಿ, ಸರಿಯಾದ ಶಿಕ್ಷೆ ನೀಡುವಂತೆ ಆಗ್ರಹಿಸಿದರು. ಇನ್ನು ಇತ್ತಾ ಆಸ್ಪತ್ರೆಯಲ್ಲಿ ಯುವತಿಯ ವರ್ಷಿತ ಮೃತದೇಹವನ್ನು ಇಟ್ಟುಕೊಂಡು ಪ್ರತಿಭಟನೆಗೆ ಮುಂದಾದರು ಮತ್ತೆ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಸ್ಥಳಕ್ಕೆ ಬರುವಂತೆ ಒತ್ತಾಯಿಸಿ ಸಚಿವರ ವಿರುದ್ಧ ಘೋಷಣೆ ಕೂಗಿದರು ಇದೆ ವೇಳೆ ಪೊಲೀಸರು ಮಧ್ಯೆ ಪ್ರವೇಶಿಸಿ ಘಟನೆಯನ್ನು ತಿಳಿಗೊಳಿಸಿದರು. ಬಳಿಕ ಆಸ್ಪತ್ರೆಯ ಮುಂಭಾಗ ಕರುನಾಡ ವಿಜಯಸೇನೆ ಹಾಗೂ ದಲಿತ ಸಂಘಟನೆಗಳು ಮತ್ತು ಯುವತಿಯ ಸಂಬಂಧಿಕರು ಕೆಲಕಾಲ ರಸ್ತೆ ತಡೆದು ಆರೋಪಿಗಳ ಬಂಧನಕ್ಕೆ ಆಗ್ರಹಿಸಿದರು. ರಸ್ತೆ ತಡೆ ಮಾಡಿದ ಕಾರಣ ಕೆಲ ಹೊತ್ತು ಸಂಚಾರ ದಟ್ಟಣೆ ಉಂಟಾಗಿ ವಾಹನ ಸವಾರರು ಪರದಾಟ ನಡೆಸುವಂತಾಯಿತು. ಬಳಿಕ ಡಿವೈಎಸ್ಪಿ ದಿನಕರ್ ಹಾಗೂ ಸಬ್ ಇನ್ಸಪೆಕ್ಟರ್ ಮಹೇಶ್ ರಸ್ತೆ ಮಾಡುತ್ತಿದ್ದವರನ್ನು ಮನವೊಲಿಸಿ ಪ್ರತಿಭಟನೆ ಶಾಂತಗೊಳಿಸಿ ವಾಹನ ಸಂಚಾರ ಸುಗಮಗೊಳಿಸಿದರು. ಇನ್ನು ಯುವತಿ ವರ್ಷಿತ ಸಾವಿಗೆ ಸಂಬಂಧಪಟ್ಟಂತೆ ಓರ್ವ ಆರೋಪಿಯನ್ನು ಸದ್ಯ ವಿಚಾರಣೆಗೆ ಒಳಪಡಿಸಿದ್ದು, ಮುಂದೆ ತನಿಖೆಯನ್ನು ಚುರುಕುಗೊಳಿಸಿ ಆರೋಪಿಗಳನ್ನು ಬಂಧಿಸುವುದಾಗಿ ಪೊಲೀಸರು ಪ್ರತಿಭಟನಾಕಾರರಿಗೆ ಭರವಸೆ ನೀಡಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







