ಚಿತ್ರದುರ್ಗ: ವರ್ಶಿತಾ ಕೊಲೆ ಪ್ರಕರಣವನ್ನು ನಾವು ಗಂಭೀರವಾಗಿ ತೆಗೆದುಕೊಂಡು ತನಿಖೆ ನಡೆಯುತ್ತಿದೆ. ಯಾರೇ ತಪ್ಪಿತಸ್ಥರು ಇದ್ದರು ಖಂಡಿತ ಶಿಕ್ಷೆ ಆಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಭರವಸೆ ನೀಡಿದರು.
ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವರ್ಷಿತ ಪ್ರಕರಣದ ಸಂಪೂರ್ಣ ಮಾಹಿತಿ ಎಸ್ಪಿಯವರು ನೀಡಿದ್ದಾರೆ. ಘಟನೆ ಬಗ್ಗೆ ತಿಳಿದ ಕೂಡಲೇ ನನಗೂ ಸಹ ಆತಂಕ ಆಯ್ತು. ಆದರೆ ಅಪರಾಧ ಪ್ರಕರಣದಲ್ಲಿ ಭಾಗಿಯಾದವರನ್ನು ಯಾವುದೇ ಕಾರಣಕ್ಕೂ ಬಿಡುವ ಮಾತೆ ಇಲ್ಲ. ನನ್ನ ಕಡೆಯಿಂದ 2.5ಲಕ್ಷ ಹಾಗೂ ಸರ್ಕಾರದಿಂದ 2.5 ಲಕ್ಷ ಪರಿಹಾರ ನೀಡದ್ದೇವೆ ಎಂದರು.ಇದೆ ವೇಳೆ ಎಸ್ಪಿ ರಂಜಿತ್ ಕುಮಾರ್ ಭಂಡಾರೂ ಮಾತನಾಡಿ, ನಗರದ ಹೊರವಲಯದಲ್ಲಿ ಓರ್ವ ಯುವತಿಯ ಶವ ಬಗ್ಗೆ ಮಾಹಿತಿ ಬಂತು. ಕೂಡಲೇ ಸ್ಥಳಕ್ಕೆ ನಾವು ಭೇಟಿ ನೀಡಿ ಬಳಿಕ 4 ತಂಡ ಮಾಡಿ ತನಿಖೆ ಮಾಡಿದಾಗ. ಮೃತ ಯುವತಿಯ ಸಂಪೂರ್ಣ ಮಾಹಿತಿ ಸಿಕ್ಕಿದ ಬಳಿಕ ಐಮಂಗಲ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣದ ಮೂಲಕ ವರ್ಷಿತ ಮಾಹಿತಿ ಸಿಕ್ಕಿತು. ಅದಾದ ಬಳಿಕ ತನಿಖೆ ಮಾಡಿ ಶಂಕಸ್ಪದ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ತನಿಖೆ ಮತ್ತಷ್ಟು ಚುರುಕುಗೊಳಿಸಿದ್ದೇವೆ. ಆರೋಪಿಗಳಿಗೆ ಶಿಕ್ಷೆ ಕೊಡಿಸುವ ಕೆಲಸ ಮಾಡುವುದಾಗಿ ಭರವಸೆ ನೀಡಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







