ಬೆಂಗಳೂರು: ಆಗಸ್ಟ್ 4 ರಿಂದ 6ನೇ ತಾರೀಖಿನವರೆಗೆ ಅಮೇರಿಕಾದ ಬೋಸ್ಟನ್ ನಗರದಲ್ಲಿ ನಡೆಯುವ ಶಾಸಕಾಂಗ ಶೃಂಗಸಭೆ 2025ರಲ್ಲಿ ಪಾಲ್ಗೊಳ್ಳಲು ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಇಂದು ಬೆಳಗಿನ ಜಾವ ಬೆಂಗಳೂರಿನಿಂದ ಪ್ರಯಾಣ ಬೆಳೆಸಿದ್ದಾರೆ.ರಾಜ್ಯ ಶಾಸಕರ ರಾಷ್ಟ್ರೀಯ ಸಮಾವೇಶಹಾಗೂರಾಷ್ಟ್ರೀಯ ಶಾಸಕರ ಸಮಾವೇಶ ಭಾರತ ಸಂಸ್ಥೆಗಳ ಆಶ್ರಯದಲ್ಲಿ ನಡೆಯುವ ಈ ಶೃಂಗ ಸಭೆಯಲ್ಲಿ ಭಾರತ ದೇಶದ ಸಂಸದರು, ವಿವಿಧ ರಾಜ್ಯಗಳ ವಿಧಾನ ಸಭೆ ಹಾಗೂ ವಿಧಾನ ಪರಿಷತ್ತಿನ ಸದಸ್ಯರು, ಸಚಿವರುಗಳು, ರಾಜಕೀಯ ತಜ್ಞರು, ನೀತಿ ನಿರೂಪಕರು, ರಾಜಕೀಯ ಮುತ್ಸದ್ದಿಗಳು ಸೇರಿದಂತೆ ಸುಮಾರು 15,000 ಕ್ಕೂ ಹೆಚ್ಚು ಗಣ್ಯರು ಪಾಲ್ಗೊಳ್ಳಲಿದ್ದಾರೆ.ಮೂರು ದಿನಗಳ ಶೃಂಗ ಸಭೆಯಲ್ಲಿ ಪ್ರಜಾತಂತ್ರ ಗಟ್ಟಿಗೊಳಿಸುವಿಕೆಯಲ್ಲಿ ಶಾಸನ ಸಭೆಗಳ ಪಾತ್ರ, ಶಾಸನ ಸಭೆಗಳ ಪಕ್ಷಾತೀತ ನಿರ್ವಹಣೆ, ಶಾಸನ ಸಭೆಗಳಿಗೆ ಅರ್ಥಿಕ ಸ್ವಾಯತ್ತತೆ ಸೇರಿದಂತೆ ಹತ್ತು ಹಲವು ವಿಷಯಗಳ ಕುರಿತು ಶೃಂಗ ಸಭೆಯಲ್ಲಿ ಗೋಷ್ಠಿಗಳು, ವಿಚಾರ ಸಂಕಿರಣ, ಸಂವಾದಗಳು ಜರುಗಲಿವೆ.
ಶೃಂಗ ಸಭೆಯಲ್ಲಿ ಪಾಲ್ಗೊಳ್ಳಲು ಇಂದು ಬೆಳಗಿನ ಜಾವ ಬೆಂಗಳೂರಿನಿಂದ ಪ್ರಯಾಣ ಬೆಳೆಸಿರುವ ಸಭಾಪತಿ ಬಸವರಾಜ ಹೊರಟ್ಟಿರವರ ನೇತೃತ್ವದ ತಂಡ, ನ್ಯೂಯಾರ್ಕ, ಡಲ್ಲಾಸ್, ಬಫ್ಯಾಲೋ ನಗರ ಸೇರಿದಂತೆ ವಿವಿದೆಡೆ ಅಧ್ಯಯನ ಪ್ರವಾಸ ನಡೆಸಿ ಆಗಸ್ಟ್ 03 ರಂದು ಬೋಸ್ಟನ್ ನಗರ ತಲುಪಲಿದೆ. ಆಗಸ್ಟ್ 4 ರಿಂದ 6 ರವರೆಗೆ ಶೃಂಗ ಸಭೆಯಲ್ಲಿ ಪಾಲ್ಗೊಂಡು ದಿನಾಂಕ 7 ರಂದು ಬೋಸ್ಟ್ನ್ ನಗರದಲ್ಲಿ ಅಧ್ಯಯನ ಪ್ರವಾಸ ನಡೆಸಲಿರುವ ತಂಡ ಆಗಸ್ಟ್ 8ರ ರಾತ್ರಿ ಬೋಸ್ಟನ್ ನಗರದಿಂದ ಬೆಂಗಳೂರಿಗೆ ಪ್ರಯಾಣ ಬೆಳಸಲಿದೆ.ಶಾಸಕಾಂಗ ಶೃಂಗಸಭೆ 2025 ರಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಅವರೊಂದಿಗೆ ಉಪಸಭಾಪತಿ ಎಂ.ಕೆ.ಪ್ರಾಣೇಶ್, ವಿರೋಧ ಪಕ್ಷದ ನಾಯಕರಾದ ಛಲವಾದಿ ಟಿ. ನಾರಾಯಣಸ್ವಾಮಿ, ಸಭಾನಾಯಕರು ಹಾಗೂ ಸಣ್ಣ ನೀರಾವರಿ ಸಚಿವ ಎನ್.ಎಸ್. ಭೋಸ್‌ರಾಜು, ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್, ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್, ವಿಧಾನ ಪರಿಷತ್ ಶಾಸಕರುಗಳಾದ ಭಾರತಿ ಶೆಟ್ಟಿ, ಬಲ್ಕೀಸ್ ಬಾನು, ಹೇಮಲತಾ ನಾಯಕ್ ಮತ್ತು ಮಂಜುನಾಥ ಭಂಡಾರಿ ಪಾಲ್ಗೊಳ್ಳಲಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



