ವಿಜಯಪುರ: ರಾಜ್ಯದಲ್ಲಿ ಮತ್ತೊಂದು ಬ್ಯಾಂಕ್ ನಲ್ಲಿ ದೊಡ್ಡಮಟ್ಟದಲ್ಲಿ ದರೋಡೆ ನಡೆದಿದೆ. ವಿಜಯಪುರದ ಚಡಚಣದಲ್ಲಿ SBI ಬ್ಯಾಂಕ್ ಗೆ ನುಗ್ಗಿದ ದರೋಡೆಕೋರರು ಬ್ಯಾಂಕ್ ಮ್ಯಾನೇಜರ್, ಕ್ಯಾಷಿಯರ್ ಮತ್ತು ಸಿಬ್ಬಂದಿಯ ಕೈಕಾಲು ಕಟ್ಟಿ ಹಾಕಿ ಅಪಾರ ಪ್ರಮಾಣದಲ್ಲಿ ನಗದು ಹಾಗೂ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ.ಮುಖಕ್ಕೆ ಮುಸುಕು ಧರಿಸಿ ಬಂದಿದ್ದ ದರೋಡೆಕೋರರು ಪಿಸ್ತೂಲು, ಮಾರಕಾಸ್ತ್ರಗಳೊಂದಿಗೆ ಬ್ಯಾಂಕ್ ಅಧಿಕಾರಿಗಳು, ಸಿಬ್ಬಂದಿಯನ್ನು ಬೆದರಿಸಿ ಕಟ್ಟಿಹಾಕಿ ದರೋಡೆ ನಡೆಸಿದ್ದಾರೆ. ಸ್ಥಳಕ್ಕೆ ಎಸ್ಪಿ ಲಕ್ಷ್ಮಣ ನಿಂಬರಗಿ ಮತ್ತು ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬ್ಯಾಂಕ್ ನಲ್ಲಿ 8 ಕೋಟಿ ಹಣ, 50 ಕೋಟಿ ಚಿನ್ನಾಭರಣ ದರೋಡೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







