ಚಿತ್ರದುರ್ಗ : ಸಾಹಸ ಸಿಂಹ ಡಾ.ವಿಷ್ಣುವರ್ಧನ್ರವರ ಸಮಾಧಿಯನ್ನು ರಾತ್ರೋ ರಾತ್ರಿ ನೆಲಸಮಗೊಳಿಸಿರುವವರನ್ನು ಪತ್ತೆ ಹಚ್ಚಿ ಕಾನೂನು ರೀತಿಯ ಕ್ರಮ ಕೈಗೊಳ್ಳುವಂತೆ ನಗರಸಭೆ ಮಾಜಿ ಉಪಾಧ್ಯಕ್ಷ ಬಿ.ರಾಮಪ್ಪ ಸರ್ಕಾರವನ್ನು ಒತ್ತಾಯಿಸಿದ್ದಾರೆ.ನಾಗರಹಾವು ಚಿತ್ರದ ಮೂಲಕ ಐತಿಹಾಸಿಕ ಚಿತ್ರದುರ್ಗದ ಕೋಟೆಯನ್ನು ನಾಡಿನಾದ್ಯಂತ ಪರಿಚಯಿಸಿ ಅಭಿಮಾನಿಗಳ ಮನದಲ್ಲಿ ಇಂದಿಗೂ ಅಜರಾಮರವಾಗಿ ಉಳಿದಿರುವ ಮೇರು ನಟ ಡಾ.ವಿಷ್ಣುವರ್ಧನ್ರವರ ಸಮಾಧಿಯನ್ನು ನೆಲಸಮಗೊಳಿಸಿರುವುದರ ಹಿಂದೆಯಾರ ಪಿತೂರಿಯಿದೆ ಎನ್ನುವುದನ್ನು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಅಮೋಘವಾದ ಅಭಿನಯದಮೂಲಕ ಸಮಾಜಕ್ಕೆ ಉತ್ತಮ ಸಂದೇಶ ನೀಡುತ್ತಿದ್ದ ಡಾ.ವಿಷ್ಣುವರ್ಧನ್ರವರ ಅಂತ್ಯಕ್ರಿಯೆನ್ನು ಬೆಂಗಳೂರಿನ ಅಭಿಮಾನ್ಸ್ಟುಡಿಯೋದಲ್ಲಿ ನೆರವೇರಿಸಲಾಗಿತ್ತು. ಅಂದಿನಿಂದ ಇಲ್ಲಿಯವರೆಗೂ ಅಭಿಮಾನಿಗಳು ಸಮಾಧಿಗೆ ಪೂಜೆ ಸಲ್ಲಿಸಿಕೊಂಡು ಬರುತ್ತಿದ್ದರು.ಈಗ ಏಕಾಏಕಿ ಸಮಾಧಿಯನ್ನು ಧ್ವಂಸಗೊಳಿಸಿರುವುದು ತರವಲ್ಲ. ಸರ್ಕಾರ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ
ಸಮಾಧಿಯನ್ನು ಪುನರ್ ನಿರ್ಮಿಸಿ ಆ ಜಾಗದಲ್ಲಿ ಸ್ಮಾರಕ ನಿರ್ಮಾಣ ಮಾಡಿ ಅಭಿಮಾನಿಗಳ ಆತಂಕವನ್ನು ದೂರ ಮಾಡಬೇಕೆಂದುಬಿ.ರಾಮಪ್ಪ ಆಗ್ರಹಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







