ಮಧುರೈ: ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ನಟ, ರಾಜಕಾರಣಿ ವಿಜಯ್ ಪುನರುಚ್ಚರಿಸಿದ್ದಾರೆ. ತಮಿಳುನಾಡಿನಲ್ಲಿ 2026ರ ಚುನಾವಣೆಯಲ್ಲಿ ಡಿಎಂಕೆ ಮತ್ತು ತಮಿಳಗ ವೆಟ್ರಿ ಕಳಗಂ(ಟಿವಿಕೆ) ನಡುವೆ ನೇರ ಹೋರಾಟ ನಡೆಯಲಿದೆ ಎಂದು ಗುರುವಾರ ಹೇಳಿದರು.ಗುರುವಾರ ಮಧುರೈ ಜಿಲ್ಲೆಯ ಪರಪತಿಯಲ್ಲಿ ನಡೆದ ಪಕ್ಷದ ಎರಡನೇ ರಾಜ್ಯಮಟ್ಟದ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ಟಿವಿಕೆ ಮುಖ್ಯಸ್ಥ, ತಮಿಳುನಾಡು ರಾಜಕೀಯದ ಮೂರು ಪ್ರಮುಖ ಪಕ್ಷಗಳಾದ ಡಿಎಂಕೆ, ಎಐಎಡಿಎಂಕೆ ಮತ್ತು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.ಬಿಜೆಪಿಯನ್ನು ತಮ್ಮ ಪಕ್ಷದ ಸೈದ್ಧಾಂತಿಕ ಎದುರಾಳಿ ಎಂದು ಬಿಂಬಿಸಿದ ಟಿವಿಕೆ ನಾಯಕ, ಅದು ತಮಿಳುನಾಡಿನ ಹಿತಾಸಕ್ತಿಗಳನ್ನು ನಿರ್ಲಕ್ಷಿಸಿದೆ ಮತ್ತು ಆರ್ಎಸ್ಎಸ್ನೊಂದಿಗೆ ಹೊಂದಾಣಿಕೆ ಮಾಡಿಕೊಂಡಿದೆಎಂದುಆರೋಪಿಸಿದರು.ತಮಿಳುನಾಡು ಮೀನುಗಾರರ ಬಂಧನ ಮತ್ತು ನೀಟ್ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ವಿಜಯ್, ಕೇಂದ್ರ ಸರ್ಕಾರ ರಾಜ್ಯದ ಅಗತ್ಯಗಳ ಬಗ್ಗೆ ಅಸಡ್ಡೆ ಹೊಂದಿದೆ. ಅಲ್ಪಸಂಖ್ಯಾತರ ಬಗ್ಗೆ ತಾರತಮ್ಯ ಹೊಂದಿದೆ ಸಹ ಆರೋಪಿಸಿದರು.ಇದೇ ವೇಳೆ ಆಡಳಿತರೂಢ ಡಿಎಂಕೆ ವಿರುದ್ಧವೂ ವಾಗ್ದಾಳಿ ನಡೆಸಿದ ವಿಜಯ್, “ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಮಹಿಳೆಯರು, ರೈತರು ಮತ್ತು ಮೀನುಗಾರರಿಗೆ ದ್ರೋಹ ಮಾಡಿದ್ದಾರೆ” ಎಂದು ಆರೋಪಿಸಿದರು.
ತಮ್ಮ ಭಾಷಣದ ಉದ್ದಕ್ಕೂ, ವಿಜಯ್ ತಮಿಳುನಾಡು ರಾಜಕೀಯದಲ್ಲಿ ತಮ್ಮನ್ನು ತಾವು ಏಕೈಕ ಶಕ್ತಿಯಾಗಿ ಬಿಂಬಿಸಿಕೊಳ್ಳಲು ಯತ್ನಿಸಿದರು. ತನ್ನನ್ನು ತಾನು ವ್ಯಾಪಕ ಘರ್ಜನೆ ಮಾಡುವ ಸಿಂಹಕ್ಕೆ ಹೋಲಿಸಿಕೊಂಡು, ಟಿವಿಕೆ ಜನರ ಧ್ವನಿಯಾಗಿದೆ ಎಂದು ಹೇಳಿದರು.ಟಿವಿಕೆ ತಮಿಳುನಾಡಿನ ಎಲ್ಲಾ 234 ಕ್ಷೇತ್ರಗಳಲ್ಲೂ ಸ್ಪರ್ಧಿಸಲಿದೆ ಎಂದು ವಿಜಯ್ ಘೋಷಿಸಿದರು. ಇಡೀ ರಾಜ್ಯಾದ್ಯಂತ ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕೀಳಿಸುವ ಮೂಲಕ, ಟಿವಿಕೆಯ ಹೋರಾಟ ಕೆಲವು ಪ್ರದೇಶಗಳಿಗೆ ಸೀಮಿತವಾಗಿಲ್ಲ. ರಾಜ್ಯಾದ್ಯಂತ ಹೋರಾಟ ನಡೆಯಲಿದೆ ಮತ್ತು ಇದು ಪರಿವರ್ತನೆಯ ಗುರಿ ಹೊಂದಿದೆ ಎಂದು ಒತ್ತಿ ಹೇಳಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







