ಮೈಸೂರು: ನಾನು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಗೆ ಅವಮಾನ ಮಾಡುವ ಉದ್ದೇಶದಿಂದ ಮಾತ ನಾಡಿಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಗ್ರಹಿಸಲಾಗಿದೆ. ಈ ಬಗ್ಗೆ ಕ್ಷಮೆಯಾಚಿಸುವ ಪ್ರಮೇಯವೇ ಇಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದ ರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮೈಸೂರು ಸೇರಿದಂತೆ ಇಡೀ ರಾಜ್ಯಕ್ಕೆ ನಾಲ್ವಡಿ ಕೃ ಒಡೆಯರ್ ಕೊಟ್ಟಕೊಡುಗೆಗಳು ಬಹಳಷ್ಟಿದೆ. ಅವರನ್ನು ಕಮ್ಮಿ ಮಾಡಿ ನಮ್ಮ ಕಾಂಗ್ರೆಸ್ ಸರ್ಕಾರ ಜಾಸ್ತಿ ಮಾಡಿದೆ ಎಂದು ನಾನು ಹೇಳಿಲ್ಲ.ಆದರೆ, ಸ್ವಾತಂತ್ರ್ಯ ನಂತರ ದಲ್ಲಿ ಮೈಸೂರಿಗೆ ಅತಿ ಹೆಚ್ಚು ಅನುದಾನ ಕೊಟ್ಟಿರುವುದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಎಂದಿದ್ದು, ನಮ್ಮ ತಂದೆ ಕೊಟ್ಟಷ್ಟು ಅನುದಾನವನ್ನು ಇನ್ಯಾವ ಮುಖ್ಯಮಂತ್ರಿಗಳೂ ಕೊಟ್ಟಿಲ್ಲ ಎಂದಷ್ಟೇ ಹೇಳಿದ್ದೇನೆ ಎಂದು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



