ಧರ್ಮಸ್ಥಳದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಲವು ವರ್ಷಗಳ ಹಿಂದೆ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದಂತೆ ಎಸ್‌ಐಟಿ ತನಿಖೆ ಚುರುಕುಪಡೆದುಕೊಂಡಿದೆ. ಸೋಷಿಯಲ್ ಮೀಡಿಯಾದಲ್ಲಿ ಈ ವಿಷಯದ ಬಗ್ಗೆ ಭಾರೀ ಚರ್ಚೆ ನಡೆಯುತ್ತಿರುವಾಗಲೇ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ನೀಡಿರುವ ಬಾಲಿಶ ಹೇಳಿಕೆಯು ಚರ್ಚೆಗೆ ಕಾರಣವಾಗಿದೆ. ಇದೀಗ ನಟ ಪ್ರಕಾಶ್ ರಾಜ್ ಅವರು ಈ ವಿಚಾರದಲ್ಲಿ ಬಿಜೆಪಿ ಹಾಗೂ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.ಇನ್ನು ಅನಾಮಧೇಯ ವ್ಯಕ್ತಿಯು ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಸಮೀಪದಲ್ಲೇ 13 ಜಾಗಗಳನ್ನು ತೋರಿಸಿದ್ದು. ಎಸ್‌ಐಟಿ ಅಧಿಕಾರಿಗಳು ಅತ್ಯಂತ ಸೂಕ್ಷ್ಮವಾಗಿ ಈ ಪ್ರದೇಶಗಳಲ್ಲಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ. ಈ ಜಾಗಗಳ ಜಿಪಿಎಸ್ ಗುರುತು ಮಾಡಲಾಗಿದೆ. ಆದರೆ, ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಈ ಪ್ರಕರಣದಲ್ಲಿ ಗಂಭೀರ ಆರೋಪವೊಂದನ್ನು ಮಾಡಿದ್ದು. ಇದೀಗ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರ ಹೇಳಿಕೆಗೆ ನಟ ಪ್ರಕಾಶ್ ರಾಜ್ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಟ್ವೀಟ್ ಮಾಡಿರುವ ನಟ ಪ್ರಕಾಶ್ ರಾಜ್ ಅವರು, ಅಲ್ರೀ ಆರ್. ಅಶೋಕ್ ಬಿಜೆಪಿ ಅವರೆ, ದಶಕಗಳಿಂದ ನಮ್ಮ ಹೆಣ್ಣು ಮಕ್ಕಳ ಅತ್ಯಾಚಾರಗಳಾಗಿವೆ. ಅಮಾನವೀಯ ಹತ್ಯೆಗಳಾಗಿವೆ, ಜನರ ಆಕ್ರೋಶ ಭುಗಿಲೆದ್ದಿದೆ. ಕೊನೆಗೂ ಸರ್ಕಾರ ಸ್ಪಂದಿಸಿ SIT ರಚನೆಯಾಗಿದೆ ತನಿಖೆ ನಡೆಯುತಿದೆ. ಮಧ್ಯದಲ್ಲಿ ನಿಮ್ದೇನ್ರಿ .ನೀವು ಜನ ಪ್ರತಿನಿಧಿಗಳಾ.. ಅಥವಾ ಇನ್ಯಾರದೋ ದಲ್ಲಾಳಿಗಳಾ.. #justasking #DharmasthalaHorror ಎಂದು ಟ್ವೀಟ್ ಮಾಡಿದ್ದಾರೆ. ಇನ್ನು ನಟ ಪ್ರಕಾಶ್ ರಾಜ್ ಅವರ ಟ್ವೀಟ್ ಇದೀಗ ವೈರಲ್ ಆಗುತ್ತಿದೆ.
ಆರ್. ಅಶೋಕ್ ಹೇಳಿದ್ದೇನು
ಧರ್ಮಸ್ಥಳ ಪ್ರಕರಣದಲ್ಲಿ ಆರೋಪ ಮಾಡುತ್ತಿರುವವರು ಮುಸ್ಲಿಮರು. ಅಲ್ಲದೇ ಇದಕ್ಕೆ ಬೆಂಬಲ ಕೊಡುತ್ತಿರುವುದು ಕೇರಳ ಸರ್ಕಾರ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ದೂರಿದ್ದಾರೆ. ರಾಜ್ಯ ಸರ್ಕಾರ ಎಸ್‌ಐಟಿಯನ್ನು ರಚನೆ ಮಾಡಿರುವುದಕ್ಕೆ ಧರ್ಮಸ್ಥಳದವರೂ ಸ್ವಾಗತಿಸಿದ್ದಾರೆ. ನಾನೂ ತನಿಖೆಯನ್ನು ಸ್ವಾಗತಿಸುತ್ತೇನೆ. ಮೊದಲು ತನಿಖೆ ನಡೆಯಲಿ ತಪಿತಸ್ಥರು ಯಾರೆಂದು ಸತ್ಯಾಂಶ ತಿಳಿಯಲಿ ಎಂದಿದ್ದಾರೆ.
ಇನ್ನು ಧರ್ಮಸ್ಥಳದ ಮಂಜುನಾಥನಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ಈ ಪ್ರಕರಣಗಳ ಹಿಂದೆ ಯಾರೇ ಇದ್ದರೂ ಅವರಿಗೆ ಶಿಕ್ಷೆ ಆಗಲಿ. ಇದು ಒಂದು ಪಿತೂರಿಯ ಭಾಗವಾಗಿದೆಯಷ್ಟೇ ಮೊದಲು ಬುರುಡೆಗಳು ಸಿಗಲಿ ಆ ಮೇಲೆ ಎಲ್ಲವೂ ಗೊತ್ತಾಗಲಿದೆ ಎಂದು ಆರ್. ಅಶೋಕ್ ಅವರು ಹೇಳಿದ್ದರು. ಈ ಹೇಳಿಕೆಯನ್ನು ಪ್ರಕಾಶ್ ರಾಜ್ ಅವರು ಗಂಭೀರವಾಗಿ ಖಂಡಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



