ಬೆಂಗಳೂರು: ಮಲ್ಲಿಕಾರ್ಜುನ ಖರ್ಗೆಯವರು ನಮ್ಮ ಪಕ್ಷದಲ್ಲಿ ನಿರ್ಣಾಯಕ ಸ್ಥಾನದಲ್ಲಿದ್ದಾರೆ. ಮುಖ್ಯಮಂತ್ರಿ ಯಾರು ಆಗಬೇಕೆಂದು ನಿರ್ಧಾರ ಮಾಡುವವರು ಅವರು. ಒಂದು ವೇಳೆ ಅವರು ರಾಜ್ಯ ರಾಜಕಾರಣಕ್ಕೆ ಬರುತ್ತೇನೆ ಎಂದು ಹೇಳಿದರೆ ಯಾರೂ ತಪ್ಪು ಭಾವಿಸುವ ಅಗತ್ಯ ಇಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯಲ್ಲಿ ತಪ್ಪೇನಿಲ್ಲ. ಅವರು ಹಿರಿಯರು, ಸುದೀರ್ಘ ಅನುಭವ ಇರುವವರು. ಎಲ್ಲ ಹುದ್ದೆಗಳಿಗೂ ಸಮರ್ಥರು ಎಂದರು. ಖರ್ಗೆಯವರ ಬಗ್ಗೆ ಈಗ ಯಾರ‍್ಯಾರು ಮಾತಾಡಿದ್ದಾರೋ ಅವರ‍್ಯಾರೂ ಖರ್ಗೆಯವರ ಹಂತಕ್ಕೆ ಬೆಳೆದವರಲ್ಲ. ಖರ್ಗೆಯವರು ಏನಾದರೂ ಹೇಳಿದಾಗ ತಪ್ಪಾಗಿ ಭಾವಿಸುವ ಅಗತ್ಯ ಇಲ್ಲ. ರಾಜ್ಯಕ್ಕೆ ಬರುತ್ತೇನೆ ಎಂದು ಹೇಳಿದರೆ ಅದರಲ್ಲಿ ತಪ್ಪೇನು ಎಂದು ಪ್ರಶ್ನಿಸಿದ್ದಾರೆ.ಧರ್ಮಸ್ಥಳದಲ್ಲಿ ಎಸ್‌ಐಟಿ ತಂಡ ತನಿಖೆ ಆರಂಭಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಎಸ್ಐಟಿ ಅಧಿಕಾರಿಗಳು ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ತನಿಖೆ ಮಾಡುತ್ತಿದ್ದಾರೆ. ತನಿಖೆಯಲ್ಲಿ ನಾವ್ಯಾರೂ ಮಧ್ಯಪ್ರವೇಶ ಮಾಡಲ್ಲ ಎಂದರು.ಕಾಲ್ತುಳಿತ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಗಳ ಅಮಾನತನ್ನು ಸಚಿವ ಸಂಪುಟ ಸಭೆಯ ತೀರ್ಮಾನದಂತೆ ಹಿಂಪಡೆಯಲಾಗಿದೆ. ಇದು ಆಡಳಿತಾತ್ಮಕ ನಿರ್ಧಾರ ಅಷ್ಟೇ. ತನಿಖೆ ಮುಂದುವರೆಯಲಿದೆ. ಪೊಲೀಸ್ ಕಮಿಷನರ್ ಆಗಿದ್ದ ಬಿ. ದಯಾನಂದ್ ಅವರಿಗೆ ಮತ್ತೆ ಆಯುಕ್ತ ಹುದ್ದೆ ಕೊಡುವುದಿಲ್ಲ. ಸಮಾನಾಂತರ ಹುದ್ದೆ ಕೊಡುತ್ತೇವೆ ಎಂದಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



