ರಿಷಬ್ ಶೆಟ್ಟಿ ಅವರು ‘ಕಾಂತಾರ: ಚಾಪ್ಟರ್ 1’ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡುವುದರ ಜೊತೆಗೆ ನಿರ್ದೇಶನವನ್ನೂ ಮಾಡಿದ್ದಾರೆ. ಅವರು ಚಿತ್ರಕಥೆ, ಸಂಭಾಷಣೆ ಬರೆಯುವಲ್ಲೂ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ಇಷ್ಟೆಲ್ಲ ಜವಾಬ್ದಾರಿ ವಹಿಸಿಕೊಳ್ಳುವುದು ದೊಡ್ಡ ಚಾಲೆಂಜ್. ಈ ಚಾಲೆಂಜ್ನ ಅವರು ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ಇದಕ್ಕಾಗಿ ಅವರು ದೊಡ್ಡ ಮಟ್ಟದಲ್ಲಿ ಪ್ರತಿಫಲ ಪಡೆಯಲಿದ್ದಾರೆ ಎಂದು ಹೇಳಲಾಗುತ್ತಿದೆ. ಆ ಬಗ್ಗೆ ಇಲ್ಲಿದೆ ವಿವರ.ಸಾಮಾನ್ಯವಾಗಿ ಬಾಲಿವುಡ್ನಲ್ಲಿ ಹಲವು ಸ್ಟಾರ್ಗಳು ಸಿನಿಮಾಗಳಿಗೆ ನಿರ್ಮಾಪಕರಿಂದ ಸಂಭಾವನೆ ಪಡೆಯೋದಿಲ್ಲ. ಆಮಿರ್ ಖಾನ್, ಶಾರುಖ್ ಖಾನ್, ಅಕ್ಷಯ್ ಕುಮಾರ್ ಸೇರಿದಂತೆ ಅನೇಕ ಸ್ಟಾರ್ಗಳು ಈ ರೀತಿ ಮಾಡುತ್ತಾರೆ. ಅವರು ಸಂಭಾವನೆ ಬದಲು ಸಿನಿಮಾ ಗೆದ್ದರೆ ಅದರಲ್ಲಿ ಬಂದ ಲಾಭದಲ್ಲಿ ಒಂದಷ್ಟು ಮೊತ್ತವನ್ನು ಪಡೆದುಕೊಳ್ಳುತ್ತಾರೆ. ಈ ರೀತಿ ಅನೇಕರು ಮಾಡಿದ್ದಾರೆ.ಆದರೆ, ಕನ್ನಡದಲ್ಲಿ ಈ ಟ್ರೆಂಡ್ ಇತ್ತೀಚೆಗೆ ಆರಂಭ ಆಗಿದೆ. ಕನ್ನಡದಲ್ಲಿ ಬಹುತೇಕ ಕಲಾವಿದರು ಸಂಭಾವನೆ ಫಿಕ್ಸ್ ಮಾಡಿ, ಅದನ್ನು ಪಡೆದುಕೊಳ್ಳುತ್ತಾರೆ. ಸಿನಿಮಾ ಹಿಟ್ ಆಗಲಿ ಅಥವಾ ಹಿಟ್ ಆಗದೆ ಇರಲಿ, ಅದು ನಿರ್ಮಾಪಕರ ತಲೆಗೆ ಬೀಳಲಿದೆ. ಆದರೆ, ರಿಷಬ್ ಅವರು ‘ಕಾಂತಾರ: ಚಾಪ್ಟರ್ 1’ ವಿಚಾರದಲ್ಲಿ ಶೇರು ಪಡೆಯುವ ತಂತ್ರ ಬಳಸಿದ್ದಾರೆ ಎನ್ನಲಾಗುತ್ತಿದೆ.ರಿಷಬ್ ಶೆಟ್ಟಿ ಅವರು ‘ಕಾಂತಾರ: ಚಾಪ್ಟರ್ 1’ ಚಿತ್ರಕ್ಕೆ ಸಂಭಾವನೆ ಪಡೆದಿಲ್ಲ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ. ಸಿನಿಮಾದಲ್ಲಿ ಬರೋ ಲಾಭದಲ್ಲಿ ಅವರು ಹೊಂಬಾಳೆ ಫಿಲ್ಮ್ಸ್ ಕಡೆಯಿಂದ ಲಾಭವನ್ನು ಪಡೆದುಕೊಳ್ಳಲಿದ್ದಾರಂತೆ. ‘ಕಾಂತಾರ: ಚಾಪ್ಟರ್ 1’ ಸಿನಿಮಾ ರಿಲೀಸ್ಗೂ ಮೊದಲೇ ಲಾಭದಲ್ಲಿ ಇದೆ. ಸಿನಿಮಾ ಅತ್ಯುತ್ತಮವಾಗಿದ್ದರೆ ಒಳ್ಳೆಯ ಕಲೆಕ್ಷನ್ ಮಾಡುತ್ತದೆ. ಇದರಿಂದ ರಿಷಬ್ಗೆ ಸಿಗೋ ಪಾಲು ಕೂಡ ಹೆಚ್ಚುತ್ತದೆ.‘ಕಾಂತಾರ: ಚಾಪ್ಟರ್ 1’ ಸಿನಿಮಾ ಅಕ್ಟೋಬರ್ 2ರಂದು ರಿಲೀಸ್ ಆಗಲಿದೆ. ಅಕ್ಟೋಬರ್ 1ರಂದು ಪ್ರೀಮಿಯರ್ ಶೋಗಳನ್ನು ಮಾಡುವ ಆಲೋಚನೆ ಇದೆ. ಈ ಚಿತ್ರದಲ್ಲಿ ರಿಷಬ್ ಜೊತೆ ರುಕ್ಮಿಣಿ ವಸಂತ್, ಗುಲ್ಶನ್ ದೇವಯ್ಯ ಮೊದಲಾದವರು ನಟಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







