ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಮನಸ್ಸಿನಲ್ಲಿ ಏನಿದೆ ಎಂಬುದನ್ನು ಪತ್ತೆ ಹಚ್ಚಲು ಆಗಲ್ಲ. ಕೊನೆಯ ಗಳಿಗೆಯ ತನಕವೂ ಅವರು ಗುಟ್ಟು ಬಿಟ್ಟು ಕೊಡುವುದಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ. ಉಪರಾಷ್ಟ್ರಪತಿ ಹುದ್ದೆಗೆ ಎನ್ಡಿಎ ಅಭ್ಯರ್ಥಿ ರಾಧಾ ಕೃಷ್ಣನ್ ಅವರು ದೆಹಲಿಯ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ, ಬೆಂಬಲ ಕೋರಿದರು. ಆ ಭೇಟಿ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ದೇವೇಗೌಡರು, ‘ಮೋದಿ ಅವರೊಂದಿಗಿನ ನನ್ನ 10 ವರ್ಷದ ಅನುಭವದಿಂದ ಹೇಳುತ್ತಿದ್ದೇನೆ. ಮೋದಿ ಅವರ ಮನಸ್ಸಲ್ಲಿ ಏನಿದೆ ಎಂಬುದನ್ನು ಯಾರೂ ಪತ್ತೆ ಹಚ್ಚಲು ಸಾಧ್ಯವಿಲ್ಲ. ಅವರು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬುದು ಕೊನೆಯ ಕ್ಷಣದ ತನಕವೂ ಯಾರಿಗೂ ತಿಳಿಯುವುದಿಲ್ಲ’ ಎಂದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







