Close Menu
  • ಪ್ರಮುಖ ಸುದ್ದಿ
    • ಅಡಿಕೆ ರೇಟ್‌
    • ಮಾರುಕಟ್ಟೆ ಧಾರಣೆ
  • ಅಪರಾಧ ಸುದ್ದಿ
  • ದಿನದ ವಿಶೇಷ
  • ನಮ್ಮ ಚಿತ್ರದುರ್ಗ
    • ಬಯಲುಸೀಮೆ ನೋಟ
What's Hot

ರಸಗೊಬ್ಬರ ಕಾಳಸಂತೆಕೋರರ ವಿರುದ್ದ ಕಠಿಣ ಕ್ರಮ ಕೈಗೊಳ್ಳಿ- ಸಿಎಂ ಸೂಚನೆ

ಎಣ್ಣೆಗೆ ಹಣ ಕೊಡಲಿಲ್ಲ ಎಂದು ಹೆತ್ತವಳನ್ನೇ ಕೊಂದ ಪಾಪಿ ಮಗ

ಪುನೀತ್ ರಾಜಕುಮಾರ್ ಪ್ರೀತಿಯ ಸೋದರತ್ತೆ ನಾಗಮ್ಮ ನಿಧನ 

Facebook X (Twitter) Instagram
  • ಪ್ರಮುಖ ಸುದ್ದಿ
  • ನಮ್ಮ ಚಿತ್ರದುರ್ಗ
  • ಬಯಲುಸೀಮೆ ನೋಟ
Facebook X (Twitter) Instagram
Bayaluseeme Times | ಬಯಲುಸೀಮೆ ಟೈಮ್ಸ್
  • ಪ್ರಮುಖ ಸುದ್ದಿ
    • ಅಡಿಕೆ ರೇಟ್‌
    • ಮಾರುಕಟ್ಟೆ ಧಾರಣೆ
  • ಅಪರಾಧ ಸುದ್ದಿ
  • ದಿನದ ವಿಶೇಷ
  • ನಮ್ಮ ಚಿತ್ರದುರ್ಗ
    • ಬಯಲುಸೀಮೆ ನೋಟ
Subscribe
Bayaluseeme Times | ಬಯಲುಸೀಮೆ ಟೈಮ್ಸ್
Home»ನಮ್ಮ ಚಿತ್ರದುರ್ಗ»ಆಗಸ್ಟ್ 01ನ್ನು ರಾಜ್ಯ ಸರ್ಕಾರವು ರಾಜ್ಯಾದ್ಯಂತ ವ್ಯಸನ ಮುಕ್ತ ದಿನವನ್ನಾಗಿ ಆಚರಿಸಲು ಕಾರಣ ಯಾರು ಗೊತ್ತೆ…?
ನಮ್ಮ ಚಿತ್ರದುರ್ಗ

ಆಗಸ್ಟ್ 01ನ್ನು ರಾಜ್ಯ ಸರ್ಕಾರವು ರಾಜ್ಯಾದ್ಯಂತ ವ್ಯಸನ ಮುಕ್ತ ದಿನವನ್ನಾಗಿ ಆಚರಿಸಲು ಕಾರಣ ಯಾರು ಗೊತ್ತೆ…?

Times of bayaluseemeBy Times of bayaluseemeAugust 1, 2025No Comments2 Mins Read
Share WhatsApp Facebook Twitter Telegram Copy Link
Follow Us
Google News Flipboard
Share
Facebook Twitter LinkedIn Pinterest Email Copy Link

ಚಿತ್ರದುರ್ಗ: ದೇಶ ವಿದೇಶಗಳಲ್ಲಿ ಸಂಚರಿಸಿ, ಜನರಲ್ಲಿನ ದುಶ್ಚಟಗಳನ್ನೇ ತಮ್ಮ ಜೋಳಿಗೆಯಲ್ಲಿ ಭಿಕ್ಷೆಯ ರೂಪದಲ್ಲಿ ಸಂಗ್ರಹಿಸಿ, ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಅವಿರತವಾಗಿ ಶ್ರಮಿಸಿದವರು ಡಾ.ಮಹಾಂತ ಶಿವಯೋಗಿಗಳು. ಇಂತಹ ಮಹಾನ್ ಯೋಗಿಗಳ ಆಗಸ್ಟ್ 01 ರ ಜನ್ಮ ದಿನವನ್ನು ವ್ಯಸನಮುಕ್ತ ದಿನಾಚರಣೆಯನ್ನಾಗಿ ರಾಜ್ಯಾದ್ಯಂತ ಆಚರಿಸಲಾಗುತ್ತಿದೆ.ಬಾಗಲಕೋಟೆಯ ಜಮಖಂಡಿ ತಾಲೂಕಿನ ಹಿಪ್ಪರಗಿ ಗ್ರಾಮದಲ್ಲಿ ಆಗಸ್ಟ್ 01, 1930 ರಲ್ಲಿ ಜನಿಸಿದ ಡಾ.ಮಹಾಂತ ಶಿವಯೋಗಿಗಳು ತಮ್ಮ 10ನೇ ವಯಸ್ಸಿಗೆ ಸವದಿಯ ವಿರಕ್ತಮಠದ ಕಿರಿಯ ಸ್ವಾಮೀಜಿಗಳಾದರು.ಕಾಶಿಯಲ್ಲಿ ಸಂಸ್ಕøತ, ಹಿಂದಿ, ಯೋಗ, ಶಾಸ್ತ್ರೀಯ ಸಂಗೀತದಲ್ಲಿ ವಿಶೇಷ ಪರಿಣಿತಿ ಸಾಧಿಸಿದರು. ಉತ್ತರ ಕರ್ನಾಟಕದಲ್ಲಿ ಭೀಕರ ಬರಗಾಲ ಬಂದ ಕಾರಣ ಕಾಶಿಯಿಂದ ಆಗಮಿಸಿ, ನೂರಾರು ಗ್ರಾಮಗಳಲ್ಲಿ ಗಂಜಿ ಕೇಂದ್ರ ಆರಂಭಿಸಿ ದಾಸೋಹ ಮಾಡಿದ್ದು ಮಾತ್ರವಲ್ಲದೇ ಗೋಶಾಲೆಗಳನ್ನು ಆರಂಭಿಸಿ ಮೇವು ಮತ್ತು ನೀರಿನ ವ್ಯವಸ್ಥೆ ಮಾಡಿದರು. 1970 ರಲ್ಲಿ ಚಿತ್ತರಗಿ ವಿಜಯ ಮಹಾಂತೇಶ್ವರ ಸಂಸ್ಥಾನ ಮಠದ 19ನೇ ಪೀಠಾಧಿಕಾರಿಯಾಗಿ ನಂತರ 2018ರ ವರೆಗೆ ಅಖಂಡ 48 ವರ್ಷಗಳ ಕಾಲ ಅವರ ಸಾಧನೆ ಅಪಾರವಾದುದು.

ನಿರಂತರ ಅನ್ನ ದಾಸೋಹ, ವಚನ ಮಾಂಗಲ್ಯ, ದೇವದಾಸಿ ವಿಮೋಚನಾ ಸಂಸ್ಥೆ, ದೇವದಾಸಿಯರ ಮಕ್ಕಳಿಗೆ ಟ್ರಸ್ಟ್ ಸ್ಥಾಪನೆ, ನಿರುದ್ಯೋಗಿಗಳಿಗೆ ಮತ್ತು ವಿಧವೆಯರಿಗೆ ಕಾಯಕ ಸಂಜೀವಿನಿ ಸಂಸ್ಥೆ ಸ್ಥಾಪನೆ, ನಿಸರ್ಗ ಚಿಕಿತ್ಸೆ-ಯೋಗ ಕೇಂದ್ರ ಸ್ಥಾಪನೆ, ಶಾಖಾ ಮಠಗಳಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಯುವಕರಿಗೆ ಧರ್ಮ ಸಂಸ್ಕಾರ ನೀಡಿ ಪಟ್ಟಾಭಿಷೇಕ ಮಾಡಿದ್ದು, ಮಹಿಳಾ ಸಾಧಕಿಯರಿಗೆ ಜಂಗಮ ದೀಕ್ಷೆ ನೀಡಿ ಮಠಾಧಿಕಾರಿಯನ್ನಾಗಿ ಮಾಡಿದ್ದು, ಮಠದ ನೂರಾರು ಎಕರೆ ಭೂಮಿಯನ್ನು ಆಯಾ ಗ್ರಾಮಗಳ ರೈತರಿಗೆ ಕೃಷಿ ಮಾಡಿ ಬದುಕಲು ನೀಡಿದ್ದು ಮುಂತಾದ ಹಲವು ಸಮಾಜಮುಖಿ ಕಾರ್ಯಗಳನ್ನು ಮಾಡಿದರು.ಪ್ರಮುಖವಾಗಿ ಸ್ವಾಮೀಜಿಯವರು ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ 1975 ರಿಂದ ಕೈಗೊಂಡ ಮಹಾಂತ ಜೋಳಿಗೆ ಕಾರ್ಯಕ್ರಮ ಅತ್ಯಂತ ವಿಶಿಷ್ಟವಾದುದು, ಕುಡಿತದ ಚಟದಿಂದ ಪರಿಶಿಷ್ಟ ಜಾತಿಯ ಯುವಕನೊಬ್ಬ ನಿಧನದ ಸುದ್ದಿ ಕೇಳಿ ಅವನ ಕೇರಿಗೆ ಸಾಂತ್ವನ ಹೇಳಲು ತೆರಳಿದ್ದ ಸ್ವಾಮಿಗಳಿಗೆ ಆತನ ಪತ್ನಿ ಮತ್ತು ಮಕ್ಕಳು ಉಪವಾಸದಿಂದ ದು:ಖಿಸುವುದನ್ನು ಕಂಡರು. ಇಂತಹ ಸಾವಿರಾರು ಕುಟುಂಬಗಳ ಕುಡಿತ ಮತ್ತು ಇತರೇ ದುಶ್ಚಟಗಳಿಂದ ಹಾಳಾಗಿರುವುದನ್ನು ಅರಿತು, ಇಂತಹ ದುಶ್ಚಟಗಳಿಗೆ ಒಳಗಾಗಿರುವವನ್ನು ಮುಕ್ತಿಗೊಳಿಸುವ ಉದ್ದೇಶದಿಂದ ಮಹಾಂತ ಜೋಳಿಗೆ ಯೋಜನೆ ಆರಂಭಿಸಿದರು.

ಬಟ್ಟೆಯ ಚೀಲದ ಜೋಳಿಗೆ ಹಿಡಿದು, ಕುಡಿತದ ಚಟದಿಂದ ನಿಧನನಾದ ಪರಿಶಿಷ್ಟ ಜಾತಿಯ ಯುವಕನ ಕೇರಿಗೆ ಮೊದಲಿಗೆ ತೆರಳಿದ ಸ್ವಾಮೀಜಿಗಳು, ಅಲ್ಲಿನ ಗುಡಿಸಲು ಮನೆಗಳಿಗೆ ತೆರಳಿ ಮದ್ಯಪಾನ, ತಂಬಾಕು ಸೇರಿದಂತೆ ಎಲ್ಲಾ ರೀತಿಯ ದುಶ್ಚಟಗಳ ಬಗ್ಗೆ ಅಲ್ಲಿನ ಜನತೆಗೆ ಮನ ಮುಟ್ಟುವಂತೆ ತಿಳುವಳಿಕೆ ನೀಡಿ ಮನಪರಿವರ್ತನೆ ಮಾಡಿದರು.ದುರ್ವಸನಿಗಳು ತಮ್ಮ ಎಲ್ಲಾ ದುಶ್ಚಟಗಳ ವಸ್ತುಗಳನ್ನು ಸ್ವಾಮೀಜಿ ಅವರ ಜೋಳಿಗೆಗೆ ಹಾಕಿ, ಇನ್ನೆಂದೂ ಅವುಗಳನ್ನು ಬಳಸುವುದಿಲ್ಲ ಎಂದು ಪ್ರಮಾಣ ಮಾಡಿದರು.   ಜಾತಿ-ಮತ-ಪಂಗಡ-ಧರ್ಮ-ಭಾಷೆ-ದೇಶವೆನ್ನದೇ ಇಡೀ 42 ವರ್ಷಗಳ ಕಾಲ ದೇಶದಲ್ಲಿ ಮಾತ್ರವಲ್ಲದೇ ಇಂಗ್ಲೆಂಡ್ ಸೇರಿದಂತೆ ವಿದೇಶದಲ್ಲೂ ತಮ್ಮ ಮಹಾಂತ ಜೋಳಿಗೆ ಹಿಡಿದು ಜನರಲ್ಲಿನ ದುಶ್ಚಟಗಳ ಭಿಕ್ಷೆ ಬೇಡಿದರು.ಮಹಾಂತ ಶಿವಯೋಗಿಗಳು ವ್ಯಸನ ಮುಕ್ತ ವ್ಯಕ್ತಿ-ಕುಟುಂಬ-ಸಮಾಜ-ಗ್ರಾಮಗಳ ನಿರ್ಮಾಣ ಮಾಡುವ ಜೊತೆಗೆ ತಮ್ಮ ಜೋಳಿಗೆ ಕಾರ್ಯಕ್ರಮದಲ್ಲಿ ನಾಡಿನ ಪ್ರಖ್ಯಾತ ವೈದ್ಯರು, ಸಮಾಜ ವಿಜ್ಞಾನಿಗಳು, ಸಾಹಿತಿಗಳು, ಸಮಾಜ ಕಳಕಳಿಯ ಕವಿಗಳು, ಧರ್ಮ ಗುರುಗಳನ್ನು ಆಹ್ವಾನಿಸಿ ಅವರಿಂದ ಉಪನ್ಯಾಸಗಳನ್ನು ಮಾಡಿಸುವ ಮೂಲಕ ವ್ಯಸನಗಳ ಮನಪರಿವರ್ತನೆ ಮಾಡುವುದರ ಜೊತೆಗೆ ಮಕ್ಕಳು, ವಿದ್ಯಾರ್ಥಿಗಳು-ಯುವ ಜನಾಂಗ ಇಂತಹ ಚಟಗಳಿಗೆ ಬಲಿಯಾದಂತೆ ಅರಿವು ಮೂಡಿಸುತ್ತಿದ್ದರು. ಇದರಿಂದಾಗಿ ಲಕ್ಷಾಂತರ ಜನ ವ್ಯಸನಗಳಿಂದ ಮುಕ್ತರಾಗಿ ಅವರ ಕುಟುಂಬಗಳು ನೆಮ್ಮದಿಯ ಜೀವನ ಸಾಗಿಸುತ್ತಿವೆ.

ಡಾ.ಮಹಾಂತ ಶಿವಯೋಗಿ ಅವರ ಜನ್ಮದಿನವಾದ ಆಗಸ್ಟ್ 01 ನ್ನು ರಾಜ್ಯ ಸರ್ಕಾರವು ರಾಜ್ಯಾದ್ಯಂತ ವ್ಯಸನ ಮುಕ್ತ ದಿನವನ್ನಾಗಿ ಆಚರಿಸಲು ನಿರ್ಧರಿಸಿ ಆದೇಶಿಸಿದ್ದು, ಕರ್ನಾಟಕ ರಾಜ್ಯವನ್ನು ವ್ಯಸನ ಮುಕ್ತ ರಾಜ್ಯವಾಗಿ ಮಾಡಲು ಸಾರ್ವಜನಿಕರು ಹಾಗೂ ಯುವಜನತೆ ವ್ಯಸನಗಳಿಂದ ಮುಕ್ತವಾಗಲು ಈ ದಿನಾಚರಣೆಯು ಪ್ರೇರಣೆಯಾಗಲಿದೆ.ಆಗಸ್ಟ್ 1 ರಂದು ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದಲ್ಲಿ ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸುವ ವಚನ ಪ್ರಮಾಣ ಹಾಗೂ ಕಾರ್ಯಕ್ರಮ ಆಯೋಜಿಸಿ ಶ್ರೀಗಳ ಜಯಂತಿ ಆಚರಿಸಲಾಗುತ್ತಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿ‌ನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

bayaluseeme times ads (2)
1 August Celebrate day for free habit On reason Who is
Follow on Google News Follow on Instagram
Share. Facebook Twitter Telegram WhatsApp
Previous Articleಚಿತ್ರದುರ್ಗ ನೂತನ ಜಿಲ್ಲಾಧಿಕಾರಿ ಕಟ್ಟಡವನ್ನು ಮೆಡಿಕಲ್ ಕಾಲೇಜಿಗೆ ಹಸ್ತಾಂತರಿಸುವಂತೆ ಸಿಎಂ ನಿರ್ದೇಶನ..!
Next Article ಧರ್ಮಸ್ಥಳ ಪ್ರಕರಣ; 6ನೇ ಜಾಗದಲ್ಲಿ ಸಿಕ್ಕ ಅಸ್ತಿಪಂಜರ, ಯಾರದ್ದು ಗೊತ್ತೆ..?
Times of bayaluseeme
  • Website

Related Posts

ಚಿತ್ರದುರ್ಗ ನೂತನ ಜಿಲ್ಲಾಧಿಕಾರಿ ಕಟ್ಟಡವನ್ನು ಮೆಡಿಕಲ್ ಕಾಲೇಜಿಗೆ ಹಸ್ತಾಂತರಿಸುವಂತೆ ಸಿಎಂ ನಿರ್ದೇಶನ..!

July 31, 2025

ಕ್ಷುಲ್ಲಕ ಕಾರಣಕ್ಕೆ ದಲಿತರ ಮೇಲೆ ಆಗುತ್ತಿರುವ ದೌರ್ಜನ್ಯ ತಡೆಯುವಂತೆ ಡಿಸಿಗೆ ಮಾದಿಗ ಮಹಾಸಭಾ ದೂರು

July 31, 2025

ಆಂಜನೇಯರನ್ನು ತೇಜೋವಧೆ ಮಾಡುವವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ದೂರು ನೀಡದ ಮಾದಿಗ ಜಾಗೃತಿ ವೇದಿಕೆ

July 31, 2025
Add A Comment
Leave A Reply Cancel Reply

Advertisement
Latest Posts

ರಸಗೊಬ್ಬರ ಕಾಳಸಂತೆಕೋರರ ವಿರುದ್ದ ಕಠಿಣ ಕ್ರಮ ಕೈಗೊಳ್ಳಿ- ಸಿಎಂ ಸೂಚನೆ

ಎಣ್ಣೆಗೆ ಹಣ ಕೊಡಲಿಲ್ಲ ಎಂದು ಹೆತ್ತವಳನ್ನೇ ಕೊಂದ ಪಾಪಿ ಮಗ

ಪುನೀತ್ ರಾಜಕುಮಾರ್ ಪ್ರೀತಿಯ ಸೋದರತ್ತೆ ನಾಗಮ್ಮ ನಿಧನ 

ಪ್ರಜ್ವಲ್ ರೇವಣ್ಣ ರೇಪ್ ಕೇಸ್; ಪ್ರಜ್ವಲ್‌ ದೋಷಿ ಎಂದು ತೀರ್ಪು ನೀಡಿದ ನ್ಯಾಯಾಲಯ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2025 Bayaluseeme Time. Designed by Bayaluseeme time
  • Privacy Policy
  • Terms
  • Accessibility

Type above and press Enter to search. Press Esc to cancel.