ಚಿತ್ರದುರ್ಗ : ತುರುವನೂರು ಹೋಬಳಿಯ ಸಮಗ್ರ ಅಭಿವೃದ್ಧಿಯನ್ನು ಹಂತ ಹಂತವಾಗಿ ಮಾಡುತ್ತಿದ್ದೇನೆ. 3 ಕೋಟಿ ವೆಚ್ಚದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನ ಮಾಡಲಾಗುತ್ತಿದೆ ಎಂದು ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಹೇಳಿದರು.
ಚಿತ್ರದುರ್ಗ ತಾಲೂಕಿನ ತುರುವನೂರು ಹೋಬಳಿ ಚಿಕ್ಕಗೊಂಡನಹಳ್ಳಿ ಗ್ರಾಮದಲ್ಲಿ ರಸ್ತೆ ಕಾಮಗಾರಿ ಮತ್ತು ಭವನ, ಸಿ.ಸಿ.ರಸ್ತೆ ಕಾಮಗಾರಿಗಳಿಗೆ ಪೂಜೆ ಸಲ್ಲಿಸಿ ಮಾತನಾಡಿದ ಅವರು,ತುರುವನೂರು ಹೋಬಳಿಯ ಸಮಗ್ರ ಅಭಿವೃದ್ಧಿ ಬಗ್ಗೆ ಚಿಂತನೆ ನಡೆಸಿದ್ದೇನೆ, ಎಲ್ಲಾ ಕಾಮಗಾರಿಗಳು ಸಹ ಚಾಲ್ತಿಯಲ್ಲಿದ್ದು ಮುಂದಿನ ದಿನಗಳಲ್ಲಿ ಹೋಬಳಿಯ ಸಂಪೂರ್ಣ ಚಿತ್ರಣ ಬದಲಾಗಲಿದೆ ಎಂದರು.
ತುರುವನೂರು ಹೋಬಳಿಯ ಚಿಕ್ಕಗೊಂಡನಹಳ್ಳಿ ಗ್ರಾಮದಲ್ಲಿ ಮುಖ್ಯಮಂತ್ರಿ ವಿಶೇಷ ಪ್ರದೇಶಾಭಿವೃದ್ದಿ ಯೋಜನೆಯಡಿ ಸುಮಾರು 2 ಕೋಟಿ ವೆಚ್ಚದಲ್ಲಿ ಚಿಕ್ಕಗೊಂಡನಹಳ್ಳಿ ಗ್ರಾಮದಿಂದ ಚಿಕ್ಕಪ್ಪನಹಳ್ಳಿ ಗ್ರಾಮದವರೆಗೆ ಸಂಪರ್ಕ ರಸ್ತೆಯ ಡಾಂಬರೀಕರಣ ಮಾಡಲಾಗುತ್ತಿದ್ದು, ಗುಣಮಟ್ಟದ ಕಾಮಗಾರಿಗೆ ಒತ್ತು ನೀಡಲು ಇಂಜಿನಿಯರ್ ಗೆ ಮತ್ತು ಗುತ್ತಿಗೆದಾರನಿಗೆ ಸೂಚನೆ ನೀಡಿದ್ದೇನೆ.ಚಿಕ್ಕಗೊಂಡನಹಳ್ಳಿ ಬೆಸ್ತರ ಕಾಲೋನಿಯಲ್ಲಿ ಶಾಸಕರ ಪ್ರದೇಶಾಭಿವೃದ್ದಿ ಯೋಜನೆಯಡಿ ನಿರ್ಮಿಸಲಾಗಿದ್ದ ಶುದ್ಧ ನೀರಿನ ಘಟಕ ಉದ್ಘಾಟನೆ ಮಾಡಿದ್ದು, ಉತ್ತಮವಾಗಿ ಮತ್ತು ವ್ಯವಸ್ಥಿತವಾಗಿ ನಿರ್ವಹಣೆ ಮಾಡಲು ಗ್ರಾಮ ಪಂಚಾಯತಿ ಅವರಿಗೆ ತಿಳಿಸಿದ್ದೇನೆ ಎಂದರು.ಚಕ್ಕಗೊಂಡನಹಳ್ಳಿ ಗ್ರಾಮದ ಬೆಸ್ತರ ಕಾಲೋನಿಯಲ್ಲಿ ಸುಮಾರು 10 ಲಕ್ಷ. ರೂಗಳ ವೆಚ್ಚದಲ್ಲಿ ಸಮುದಾಯ ಭವನ, ಎಸ್.ಸಿ ಕಾಲೋನಿಯಲ್ಲಿ 10 ಲಕ್ಷ ರೂಗಳ ವೆಚ್ಚದಲ್ಲಿ ಕೊಲ್ಲಾಪುರದಮ್ಮ ದೇವಸ್ಥಾನ ಕಟ್ಟಡ, ಜಿಲ್ಲಾ ಖನಿಜ ಪ್ರತಿಷ್ಠಾನ ಯೋಜನೆಯಡಿ 65 ಲಕ್ಷ ರೂ ವೆಚ್ಚದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ನಿರ್ಮಾಣ, 10 ಲಕ್ಷ ವೆಚ್ಚದಲ್ಲಿ ಸಿ.ಸಿ.ರಸ್ತೆ, ಕಾಮಗಾರಿಗಳ ಭೂಮಿ ಪೂಜೆ ನೇರವೇರಿಸಿದ್ದು ತುರ್ತಾಗಿ ಅಚ್ಚುಕಟ್ಟಾಗಿ ಕಾಮಗಾರಿ ಮಾಡಲಾಗುತ್ತದೆ.ತುರುವನೂರು ಗ್ರಾಮದಲ್ಲಿ ರಸ್ತೆ ಅಗಲೀಕರಣ, ಗಾಂಧಿ ಪಾರ್ಕ್, ಮುರಾರ್ಜಿ ಶಾಲೆಗಳ ಅಭಿವೃದ್ಧಿ ಮಾಡಲಾಗಿದೆ ಎಂದು ತಿಳಿಸಿದರು.ಇದೇ ವೇಳೆ ಗ್ರಾ.ಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಇದ್ದರು
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



