ಚಿತ್ರದುರ್ಗ ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾ ಅಧಿಕಾರಿ ಎಸ್.ಜೆ. ಸೋಮಶೇಖರ್ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.ಜಿಲ್ಲಾ ಪಂಚಾಯಿತಿ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಡಾ.ಆಕಾಶ್ ಎಸ್ ಅವರನ್ನು ಸರ್ಕಾರ ನಿಯೋಜಿಸಿದೆ. 2019ರ ಬ್ಯಾಚ್‌ನ ಡಾ.ಆಕಾಶ್ ಎಸ್ ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ನೂತನ ಸಿಇಒ ಆಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಸರ್ಕಾರದ ಅದೀನ ಕಾರ್ಯದರ್ಶಿ ಟಿ.ಮಂತೇಶ್ ಆದೇಶ ಹೊರಡಿಸಿದ್ದಾರೆ. ಇನ್ನು ಪ್ರಸ್ತುತ ಡಾ. ಆಕಾಶ್ ಎಸ್ ಕರ್ನಾಟಕದ ಕಲಬುರಗಿ ವಿಭಾಗದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಹೆಚ್ಚುವರಿ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



